Rains in Bengaluru: ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ! ಆರೆಂಜ್ ಅಲರ್ಟ್​ ಘೋಷಣೆ: 69 ಮಿಮೀ​ ಮಳೆ ದಾಖಲು

ನೈಋತ್ಯ ಮುಂಗಾರು ಪರಿಣಾಮ ಬೆಂಗಳೂರಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಹೆಚ್ಎಎಲ್​​ ಏರ್​​ಪೋರ್ಟ್​ 9.2 ಮಿಲಿಮೀಟರ್​, ಎಲೆಕ್ಟ್ರಾನಿಕ್ ಸಿಟಿ 29 ಮಿ.ಮೀ., ಮಾದಾವರ 4.5 ಮಿ.ಮೀ ಸೋಂಪುರ (ಬೆಂಗಳೂರು ನಗರ) 5.5 ಮಿ.ಮೀ.​ ಮಳೆ ದಾಖಲಾಗಿದೆ ಎಂದು ಬೆಂಗಳೂರಿನ ಮಳೆ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Rains in Bengaluru: ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ! ಆರೆಂಜ್ ಅಲರ್ಟ್​ ಘೋಷಣೆ: 69 ಮಿಮೀ​ ಮಳೆ ದಾಖಲು
ಬಿರುಗಾಳಿ ಸಹಿತ ಮಳೆಗೆ ಬೆಂಗಳೂರು ತತ್ತರ! ಆರೆಂಜ್ ಅಲರ್ಟ್​ ಘೋಷಣೆ: 69 ಮಿಮೀ​ ಮಳೆ ದಾಖಲು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 02, 2024 | 10:34 PM

ಬೆಂಗಳೂರು, ಜೂನ್​ 02: ನಗದರಲ್ಲಿ ನಿನ್ನೆ ಮಳೆ (Rain) ಹೀಗೆ ಬಂದು ಹಾಗೆ ಕಣ್ಮರೆಯಾಗಿತ್ತು. ಇವತ್ತು ಬೆಳಗ್ಗೆಯಿಂದ ಸುಡು ಬಿಸಿಲಿಗೆ ಅಬ್ಬಬ್ಬಾ ಎನಿಸಿದ್ರೆ, ಸಂಜೆಯಾಗುತ್ತಿದ್ದಂತೆ ಸುರಿದ ಜೋರು ಮಳೆಗೆ ಸಿಲಿಕಾನ್​ ಸಿಟಿ ಜನ ಬೆಚ್ಚಿಬಿದ್ದಿದ್ದಾರೆ. ಹೀಗಾಗಿ ರಾಜ್ಯ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ಇನ್ನು ಇಂದು ನಗರದಲ್ಲಿ 69 ಮಿಲಿಮೀಟರ್​ ಮಳೆ ಪ್ರಮಾಣ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನೈಋತ್ಯ ಮುಂಗಾರು ಪರಿಣಾಮ ಬೆಂಗಳೂರಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ. ಹೆಚ್ಎಎಲ್​​ ಏರ್​​ಪೋರ್ಟ್​ 9.2 ಮಿಲಿಮೀಟರ್​, ಎಲೆಕ್ಟ್ರಾನಿಕ್ ಸಿಟಿ 29 ಮಿ.ಮೀ., ಮಾದಾವರ 4.5 ಮಿ.ಮೀ ಸೋಂಪುರ(ಬೆಂಗಳೂರು ನಗರ) 5.5 ಮಿ.ಮೀ.​ ಮಳೆ ದಾಖಲಾಗಿದೆ ಎಂದು ಬೆಂಗಳೂರಿನ ಮಳೆ ಕುರಿತು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆ

ಮೆಜೆಸ್ಟಿಕ್​, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಶಿವಾಜಿನಗರ, ಜಯನಗರ, ಹೆಬ್ಬಾಳ, ಮಾಗಡಿ ರಸ್ತೆ, ಕೋರಮಂಗಲ, ಕೆ.ಆರ್​.ಪುರಂ, ವಿಧಾನಸೌಧ, ಟೌನ್​ಹಾಲ್​​, ಕೆ.ಆರ್​.ಮಾರ್ಕೆಟ್,​ ಕಾರ್ಪೊರೇಷನ್​​, ಶಿವಾಜಿನಗರ, ಜಯನಗರ, ಸದಾಶಿವನಗರ, ಹೆಬ್ಬಾಳ, ಯಲಹಂಕ, ವಿಜಯನಗರ, ಮೈಸೂರು ರಸ್ತೆ, ಕೆಂಗೇರಿ, ಮಾಗಡಿ ರಸ್ತೆ, ಮಡಿವಾಳ, ಕೋರಮಂಗಲ, ಹೊಸೂರು ರಸ್ತೆ, ಕೆ.ಆರ್​.ಪುರಂ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಾ ಬಿರುಗಾಳಿ ಸಹಿತ ವರ್ಷಧಾರೆ ಆಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆಗೆ ಹಲವೆಡೆ ಅವಾಂತರ: ಮೆಟ್ರೋ ಟ್ರ್ಯಾಕ್​ ಮೇಲೆ ಬಿದ್ದ ಮರದ ಕೊಂಬೆ

ಸಂಜೆಯಿಂದ ಶುರುವಾದ ಮಳೆಗೆ ಬೆಂಗಳೂರು ನಡುಗಿದೆ. ಯಾವ ರಸ್ತೆಗೆ ಕಾಲಿಟ್ಟರೂ ನೀರು ಪ್ರವಾಹದಂತೆ ಹರೀತಿತ್ತು. ಮಾರ್ಕೆಟ್, ಮೆಜೆಸ್ಟಿಕ್, ಕೆಪಿ ಅಗ್ರಹಾರ, ಶಾಂತಿನಗರ, ಜಯನಗರ, ರಾಜಾಜಿನಗರ, ಕೋರಮಂಗಲ, ಮಡಿವಾಳ, ಹೆಬ್ಬಾಳ ಸೇರಿದಂತೆ ಹಲವು ರಸ್ತೆಗಳಲ್ಲಿ 2-3 ಅಡಿಯಷ್ಟು ನೀರು ನಿಂತಿತ್ತು. ಇಡೀ ರಸ್ತೆಗಳೇ ಕೆರೆಗಳಾಗಿದ್ದವು. ಅಂಗಡಿ, ಮನೆಗಳಿಗೂ ಮೋರಿ ನೀರು ನುಗ್ಗಿದೆ.

ಇದನ್ನೂ ಓದಿ: Bengaluru Rain: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ, ರಸ್ತೆಗಳು ಜಲಾವೃತ

ವರುಣಾರ್ಭಟಕ್ಕೆ ನಗರದ ಹಲವೆಡೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ವರುಣನ ಅಬ್ಬರಕ್ಕೆ ನೂರಕ್ಕೂ ಹೆಚ್ಚು ಮರಗಳು ಧರಶಾಹಿ ಆಗಿದ್ದು, ಬಿಬಿಎಂಪಿ ಕಂಟ್ರೋಲ್ ರೂಂಗೆ ದೂರುಗಳು ಬಂದಿವೆ. ಇಲ್ಲಿಯವರೆಗೆ ವಿವಿಧೆಡೆ 118 ಮರಗಳು, 128 ಕೊಂಬೆಗಳು ಧರಶಾಹಿಯಾಗಿದ್ದು, ಆ ಪೈಕಿ ಕೇವಲ 48 ಕಡೆ ಮಾತ್ರ ಮರಗಳ ತೆರವು ಕಾರ್ಯ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆ ಇನ್ನೂ ಹಲವೆಡೆ ಮರಗಳು ತೆರವು ಮಾಡಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:33 pm, Sun, 2 June 24

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್