ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ತವರು ಊರಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಮತ್ತು ಅವರ ಕುಟುಂಬದ ಮೇಲೆ ವಿನಾಕಾರಣ ಎಫ್ಐಆರ್ ದಾಖಲು ಮಾಡಿದೆ ಎಂದು ಸರ್ಕಾರದ ವಿರುದ್ಧ ಆರೋಪಿಸುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡಿದ್ದ ಮೆರವಣಿಗೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲೇ ಇಬ್ಬರ ನಾಯಕರ ಬೆಂಬಲಿಗರು ಪರಸ್ಪರ ಘೋಷಣೆ ಕೂಗಿದ್ದಾರೆ.
ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಕಾರ್ಯಕರ್ತರು ಡಿಕೆ.. ಡಿಕೆ.. ಎಂದು ಘೋಷಣೆ ಕೂಗಿದರು. ಈ ವೇಳೆ ಕಾರ್ಯಕರ್ತರಿಗೆ ಮನವಿ ಮಾಡಿದ ಡಿ.ಕೆ.ಶಿವಕುಮಾರ್ ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಹಾಕುವಂತೆ ತಿಳಿಸಿದರು. ಮೆರವಣಿಗೆಯಲ್ಲಿ ಸಲೀಂ ಅಹ್ಮದ್, ಈಶ್ವರ ಖಂಡ್ರೆ, ಎಸ್ ಎಸ್ ಪಾಟೀಲ್ ಹಾಗೂ ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಇದನ್ನೂ ಓದಿ
ಸದನದಲ್ಲಿ ಅಂಗಿ ಬಿಚ್ಚಿದ ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಆರಗ ಜ್ಞಾನೇಂದ್ರ