BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾದರಲ್ಲಿದ್ದರು. ಶಾಸಕ ಮುನಿರತ್ನ ಗುರುವಾರ ಜಾಮೀನು ಪಡೆದು ಹೊರಬರುತ್ತಿದ್ದಂತೆ ಕಗ್ಗಲಿಪುರ ಠಾಣೆ ಪೊಲೀಸರು ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದಾರೆ.

BJP MLA Munirathna: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​
ಶಾಸಕ ಮುನಿರತ್ನ
Edited By: ವಿವೇಕ ಬಿರಾದಾರ

Updated on: Sep 20, 2024 | 9:52 AM

ಬೆಂಗಳೂರು, ಸೆಪ್ಟೆಂಬರ್​ 20: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ (BJP) ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ಬೆದರಿಕೆ, ಜಾತಿ ನಿಂದನೆ ಮೇಲೆ ಜೈಲು ಸೇರಿದ್ದ ಮುನಿರತ್ನ

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.

ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:33 am, Fri, 20 September 24

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us