ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ (Rajneesh Goyal) ಅವರು ನೇಮಕಗೊಂಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಭೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಸಿಎಸ್ ಆಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
Edited By:

Updated on: Nov 21, 2023 | 9:40 PM

ಬೆಂಗಳೂರು, ನ.21: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ (Chief Secretary) ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ (Rajneesh Goyal) ಅವರು ನೇಮಕಗೊಂಡಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಭೆ ನಡೆಯುತ್ತಿರುವ ನಡುವೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಕೆಲವೇ ಕ್ಷಣಗಳಲ್ಲಿ ಸಿಎಸ್ ಆಗಿ ನೇಮಕಗೊಂಡಿದ್ದಾರೆ.

ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಮುನ್ನ ಗೋಯಲ್ ಅವರು ತಾಜ್​ವೆಸ್ಟ್ ಎಂಡ್ ಹೊಟೇಲ್​ನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆ ನಡೆಯುತ್ತಿದ್ದ ಸಭೆ ನಡುವೆ ಗೋಯಲ್ ಈ ಭೇಟಿ ಮಾಡಿದ್ದರು.

ಇದನ್ನೂ ಓದಿ: ನಿಗಮ ಮಂಡಳಿ ನೇಮಕಾತಿ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪತ್ಯೇಕ ಪಟ್ಟಿ ಸಿದ್ಧ, ಇಲ್ಲಿದೆ ಇಬ್ಬರ ಲೆಕ್ಕಾಚಾರ

ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ರಜನೀಶ್ ಗೋಯಲ್ ಅವರು ಡಿಸೆಂಬರ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಇವರು 1986ರ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರು ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:29 pm, Tue, 21 November 23