AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Pakistan Slogan: ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆಗೆ ಸಯ್ಯದ್ ನಾಸೀರ್ ಹುಸೇನ್ ಸ್ಪಷ್ಟನೆ

ಮಂಗಳವಾರ (ಫೆ.27) ರಂದು ರಾಜ್ಯಸಭೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್​ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ವಿಜಯಶಾಲಿಯಾದರು. ಕಾಂಗ್ರೆಸ್​​ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ವಿಡಿಯೋ ಮೂಲಕ ನಾಸಿರ್​ ಹುಸೇನ್​ ಸ್ಪಷ್ಟನೆ ನೀಡಿದ್ದಾರೆ.

Pro Pakistan Slogan: ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆಗೆ ಸಯ್ಯದ್ ನಾಸೀರ್ ಹುಸೇನ್ ಸ್ಪಷ್ಟನೆ
ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್
ವಿವೇಕ ಬಿರಾದಾರ
|

Updated on:Feb 28, 2024 | 8:14 AM

Share

ಬೆಂಗಳೂರು, ಫೆಬ್ರವರಿ 28: ರಾಜ್ಯಸಭೆ ಚುನಾವಣೆ (Rajya Sabha Election) ಗೆಲುವಿನ ಸಂಭ್ರಮಾಚರಣೆ ವೇಳೆ ತಮ್ಮ ಬೆಂಬಲಿಗರೊಬ್ಬರು ಪಾಕಿಸ್ತಾನದ (Pakistan) ಪರ ಘೋಷಣೆ ಕೂಗಿದ್ದಾರೆ ಆರೋಪಕ್ಕೆ ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ (Syed Naseer Hussain) ಸ್ಪಷ್ಟನೆ ನೀಡಿದ್ದಾರೆ. “ಕಾಂಗ್ರೆಸ್ ಜಿಂದಾಬಾದ್​​, ನಾಸಿರ್​ ಹುಸೇನ್​​ ಜಿಂದಾಬಾದ್​​​ ಎಂದು ಘೋ​ಷಣೆಯನ್ನಷ್ಟೇ ನಾನು ಕೇಳಿದ್ದೇನೆ. ಪಾಕಿಸ್ತಾನ್​ ಜಿಂದಾಬಾದ್​ ಎಂಬ ಘೋಷಣೆ ನಾನು ಕೇಳಿಲ್ಲ. ಆ ರೀತಿ ಕೂಗಿರುವುದು ನನಗೆ ಕೇಳಿಸಿಲ್ಲ. ಹಾಗೆ ಯಾರಾದರೂ ಘೋಷಣೆ ಕೂಗಿದ್ದರೆ ಅವರ ವಿರುದ್ಧ ಕ್ರಮ ಜರುಗಿಸಲಿ” ಎಂದು ಹೇಳಿದರು.

ಪಾಕಿಸ್ತಾನ್​ ಜಿಂದಾಬಾದ್​ ಘೋಷಣೆ ಆರೋಪದ ವಿಚಾರವಾಗಿ ನಾಸಿರ್​ ಹುಸೇನ್​​ ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​)ನಲ್ಲಿ ಸ್ಪಷ್ಟನೆ ನೀಡಿದ್ದಾರೆ. “ಕಾಂಗ್ರೆಸ್​ನ ಮೂವರು ಅಭ್ಯರ್ಥಿಗಳ ಗೆಲುವಿನ ಸಂಭ್ರಮಾಚರಣೆ ವೇಳೆ ನಾನು ಅಲ್ಲಿಯೇ ಇದ್ದೆ. ಈ ವೇಳೆ ಹಲವು ಘೋಷಣೆಗಳು ಮೊಳಗುತ್ತಿದ್ದವು. ನಾಸಿರ ಹುಸೇನ್​ ಜಿಂದಾಬಾದ್​, ನಾಸಿರ್​ ಖಾನ್​ ಜಿಂದಾಬಾದ್​, ಕಾಂಗ್ರೆಸ್​ ಪಾರ್ಟಿ ಜಿಂದಾಬಾಂದ್​ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಿದ್ದರು. ಕೆಲ ಸಮಯದ ಬಳಿಕ ಮಾಧ್ಯಮದವರು ಕರೆ ಮಾಡಿ, ನಿಮ್ಮ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್​ ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಿದರು.

ಆದರೆ ನಾನು ಆ ಸ್ಥಳದಲ್ಲಿದ್ದಾಗ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೇಳಿಲ್ಲ. ಈಗಾಗಲೆ ನಾನು ಪೊಲೀಸರ ಬಳಿ ಮಾಹಿತಿ ಪಡೆದಿದ್ದೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ವೇಳೆ ಯಾರಾದರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರೇ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಘೋಷಣೆ ಕೂಗಿದ್ದು ಸತ್ಯವಾಗಿದ್ದರೇ, ಆ ವ್ಯಕ್ತಿ ವಿಧಾನಸೌಧ ಒಳಗೆ ಹೇಗೆ ಬಂದನು? ಯಾಕೆ ಬಂದನು? ಎಂಬ ಎಲ್ಲದರ ಕುರಿತು ಸಮಗ್ರ ತನಿಖೆಯಾಗುತ್ತದೆ. ಒಂದು ವೇಳೆ ಯಾರಾದರು ವಿಡಿಯೋವನ್ನು ತಿರುಚಿ, ಸುಳ್ಳು ಸುದ್ದಿ ಅಬ್ಬಿಸಿದ್ದರೆ ಅವರ ವಿರುದ್ಧವೂ ತನಿಖೆಯಾಗಲಿದೆ. ತನಿಖಾ ವರದಿ ಎಲ್ಲವೂ ಬಹಿರಂಗಗೊಳ್ಳಲಿದೆ ಎಂದು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಆರೋಪ, ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ: ಕಮಲ ನಾಯಕರು ಪೊಲೀಸ್ ವಶಕ್ಕೆ, ಸಿಎಆರ್​ ಮೈದಾನದಲ್ಲಿ ಹೈಡ್ರಾಮಾ!

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಬಿಜೆಪಿ ಇಂದು (ಬುಧವಾರ) ಸದನ ಆರಂಭಕ್ಕೂ ಮುನ್ನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:09 am, Wed, 28 February 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್