ಎಸ್​ಟಿ ಸೋಮಶೇಖರ್ ಮತ 25 ಕೋಟಿ ರೂ.ಗೆ ಸೇಲ್: ಜೆಡಿಎಸ್ ನಾಯಕ ರಮೇಶ್ ಗೌಡ ಗಂಭೀರ ಆರೋಪ

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಒಗ್ಗಟ್ಟಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ರೊಚ್ಚಿಗೆದ್ದ ಕಾರ್ಯಕರ್ತರು ಎಸ್​ಟಿ ಸೋಮಶೇಖರ್ ಪ್ರತಿಕೃತಿ ದಹನ ಮಾಡಿದ್ದಾರೆ. ಅಲ್ಲದೆ, ಸೋಮಶೇಖರ್ ಮತ 25 ಕೋಟಿ ರೂಪಾಯಿಗೆ ಸೇಲ್ ಆಗಿದೆ ಎಂದು ಜೆಡಿಎಸ್ ನಾಯಕ ರಮೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.

ಎಸ್​ಟಿ ಸೋಮಶೇಖರ್ ಮತ 25 ಕೋಟಿ ರೂ.ಗೆ ಸೇಲ್: ಜೆಡಿಎಸ್ ನಾಯಕ ರಮೇಶ್ ಗೌಡ ಗಂಭೀರ ಆರೋಪ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಎಸ್​ಟಿ ಸೋಮಶೇಖರ್ ವಿರುದ್ಧ ಭುಗಿಲೆದ್ದ ಆಕ್ರೋಶ; ಬಿಜೆಪಿ-ಜೆಡಿಎಸ್ ಪ್ರತಿಭಟನೆ
Follow us
TV9 Web
| Updated By: Rakesh Nayak Manchi

Updated on: Feb 27, 2024 | 6:31 PM

ಬೆಂಗಳೂರು, ಫೆ.27: ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Elections) ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ (ST Somashekhar) ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ಪ್ರತಿಭಟನೆಗೆ (Protest) ಜೆಡಿಎಸ್ ಕಾರ್ಯಕರ್ತರೂ ಸಾಥ್ ನೀಡಿದ್ದಾರೆ. ಅಲ್ಲದೆ, ಸೋಮಶೇಖರ್ ಮತ ಕಾಂಗ್ರೆಸ್ ಪಕ್ಷಕ್ಕೆ 25 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ರಮೇಶ್ ಗೌಡ ಅವರು ಗಂಭೀರ ಆರೋಪ ಮಾಡಿದ್ದಾರೆ.

ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಅಡ್ಡಮತ ಹಾಕಿದರು ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ರೊಚ್ಚಿಗೆದ್ದ ಮೈತ್ರಿ ಪಕ್ಷಗಳ ಕಾರ್ಯಕರ್ತರು, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಪಕ್ಷದಿಂದ ಗೆದ್ದಿದ್ದ ಎಸ್ ಟಿ ಸೋಮಶೇಖರ್ ರಾಜಕೀಯ ಸ್ವಾರ್ಥಕ್ಕಾಗಿ ಪಕ್ಷಕ್ಕೆ ದ್ರೋಹ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

25 ಕೋಟಿ ರೂಪಾಯಿ ಪಡೆದ ಎಸ್​ಟಿ ಸೋಮಶೇಖರ್!

ಪ್ರತಿಭಟನೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ವಿಧಾನಸಭೆ ಸ್ಪೀಕರ್ ಅವರು ಅನರ್ಹಗೊಳಿಸಬೇಕು. ಅಡ್ಡಮತ ಹಾಕಲಿಕ್ಕಾಗಿ ಅವರು ಕಾಂಗ್ರೆಸ್​ನಿಂದ 25 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಇದನ್ನೂ ಓದಿ: ಅಡ್ಡಮತದಾನ: ಸೋಮಶೇಖರ್, ಹೆಬ್ಬಾರ್ ವಿರುದ್ಧ ಸ್ಪೀಕರ್​ಗೆ ದೂರು ನೀಡಲು ಮುಂದಾದ ಬಿಜೆಪಿ

ಒಂದು ವೇಳೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸದಿದ್ದರೆ ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು. ಅಲ್ಲದೆ, ನಾಳೆಯಿಂದಲೇ ಬೆಂಗಳೂರು ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಇದೇ ವೇಳೆ ಸಿಟ್ಟಿಗೆದ್ದ ಕಾರ್ಯಕರ್ತರು ಎಸ್ ಟಿ ಸೋಮಶೇಖರ್ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಎಸ್​ಟಿ ಸೋಮಶೇಖರ್ ಕಚೇರಿ ಬಳಿ ಬಿಜೆಪಿ ಪ್ರತಿಭಟನೆ

ಅಡ್ಡಮತದಾನ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಬಗೆದ ಹಿನ್ನೆಲೆ ಸೋಮಶೇಖರ್ ವಿರುದ್ಧ ಆಕ್ರೋಶಗೊಂಡ ಬಿಜೆಪಿ ಯುವಮೋರ್ಚಾ ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿರುವ ಸೋಮಶೇಖರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಸೋಮಶೇಖರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ರಸ್ತೆಯಲ್ಲಿ ಟೈಯರ್ ಸುಟ್ಟು ಪ್ರತಿಭಟನೆ ಮಾಡಿದ ಕಾರ್ಯಕರ್ತರು, ಕಚೇರಿ ಮುಂದೆ ಹಾಕಿದ್ದ ಸೋಮಶೇಖರ್ ಫೋಟೋಗಳಿಗಗೆ ಮಸಿ ಬಳಿದರು. ಸೋಮಶೇಖರ್ ರಾಜೀನಾಮೆಗೆ ಒತ್ತಾಯಿಸಿದರು. ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯಿಂದಾಗಿ ಕೇಂಗೇರಿ ರಿಂಗ್ ರೋಡ್ ಮುಖ್ತ ರಸ್ತೆ ಸುತ್ತಮುತ್ತ ಟ್ರಾಫಿಕ್​ಜಾಮ್ ಉಂಟಾಯಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್