ರಾಜ್ಯಸಭಾ ಚುನಾವಣೆ 2020: ಹಿರಿಯ ನಾಯಕ ಖರ್ಗೆಗೆ ಟಿಕೆಟ್ ನೀಡಿದ ಕಾಂಗ್ರೆಸ್
ಬೆಂಗಳೂರು: ಜೂನ್ 19ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಲಿದ್ದಾರೆ. ಖರ್ಗೆ ಅಭ್ಯರ್ಥಿಯನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದರು. ಹೀಗಾಗಿ ಖರ್ಗೆಗೆ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.
Follow us on
ಬೆಂಗಳೂರು: ಜೂನ್ 19ಕ್ಕೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಲಿದ್ದಾರೆ. ಖರ್ಗೆ ಅಭ್ಯರ್ಥಿಯನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದರು. ಹೀಗಾಗಿ ಖರ್ಗೆಗೆ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.