ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ

ರಾಮಜನ್ಮಭೂಮಿ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಸಂಬಂಧ ಕರಸೇವಕ ಶ್ರೀಕಾಂತ ಪೂಜಾರಿಗೆ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿತ್ತು. ಇಂದು ಶ್ರೀಕಾಂತ್ ಪೂಜಾರಿ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.

ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ
ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: Rakesh Nayak Manchi

Updated on:Jan 06, 2024 | 4:59 PM

ಹುಬ್ಬಳ್ಳಿ, ಜ.6: ಜಾಮೀನು ಮಂಜೂರಾದ ಹಿನ್ನೆಲೆ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ (Shrikanth Poojari) ಅವರನ್ನು ಇಂದು ಹುಬ್ಬಳ್ಳಿ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ರಾಮಜನ್ಮಭೂಮಿ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದ ಪ್ರಕರಣ ಸಂಬಂಧ ಕರಸೇವಕ ಶ್ರೀಕಾಂತ ಪೂಜಾರಿಗೆ ನಿನ್ನೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಇಬ್ಬರ ಶ್ಯೂರಿಟಿ, ಒಂದು ಲಕ್ಷ ರೂಪಾಯಿ ಮೌಲ್ಯದ 2 ಬಾಂಡ್, ಕೋರ್ಟ್ ವ್ಯಾಪ್ತಿ ಬಿಟ್ಟುಹೋಗಬಾರದು, ವಿಚಾರಣೆಗೆ ಹಾಜರಾಗಬೇಕು, ಸಾಕ್ಷ್ಯ ನಾಶ ಮಾಡಬಾರದು ಎಂದು ಷರತ್ತು ವಿಧಿಸಿ 1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿನ್ನೆ ತೀರ್ಪು ಪ್ರಕಟಿಸಿತ್ತು.

ಇದನ್ನೂ ಓದಿ: ಶ್ರೀಕಾಂತ್​ಗೆ ಜಾಮೀನು: ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಪ್ರತಿಭಟನೆ ಕೈಬಿಟ್ಟ ಬಿಜೆಪಿ

ರಾಮಮಂದಿರ ಹೋರಾಟ ಸಂಬಂಧ 1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್‌ ಪೂಜಾರಿ ಭಾಗಿಯಾಗಿದ್ದರು. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಶ್ರೀರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಯ ದಿನ ಸಮೀಪ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿಯನ್ನು ಹುಬ್ಬಳ್ಳಿಯ ಶಹರ ಠಾಣಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಇದು ದೇಶದಾದ್ಯಂತ ಸದ್ದು ಮಾಡಿದ್ದು, ರಾಜ್ಯ ವಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sat, 6 January 24