ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ: ಬಿವೈ ವಿಜಯೇಂದ್ರ

ಅಯೋಧ್ಯೆ ರಾಮ ಜನ್ಮಭೂಮಿಗಾಗಿ ಹುಬ್ಬಳ್ಳಿಯಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ್ ಪೂಜಾರಿ ಅವರನ್ನು ಹುಬ್ಬಳ್ಳಿ ಪೊಲೀಸರು 30 ವರ್ಷಗಳ ನಂತರ ಪ್ರಕರಣವನ್ನು ರೀಓಪನ್ ಮಾಡಿ ಬಂಧಿಸಿದ್ದಾರೆ. ಇದು ಬಿಜೆಪಿ ಆಕ್ರೋಶಕ್ಕೆ ಕಾರಣವಾಗಿದ್ದು, ಬಂಧನ ಖಂಡಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ: ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Jan 02, 2024 | 8:19 PM

ಬೆಂಗಳೂರು, ಜ.2: ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ನಾಳೆ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಸರ್ಕಾರ ಹಿಂದೂ ಬಿಜೆಪಿ‌ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ‌ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ‌ ಸರ್ಕಾರ ಎಂದರು.

ಇದು ಅಲ್ಪಸಂಖ್ಯಾತರ ಕಲ್ಯಾಣ ಮಾತ್ರ ಬಯಸುವ ಸರ್ಕಾರವಾಗಿದೆ. ಅಲ್ಪಸಂಖ್ಯಾತರನ್ನು‌ ಖುಷಿ ಪಡಿಸಲು ಹಿಂದೂಗಳ ಬಂಧನ ಮಾಡಲಾಗಿದೆ. ಸರ್ಕಾರ ಲೋಕಸಭೆ ವೇಳೆ ಹಿಂದೂ, ಬಿಜೆಪಿ‌ ಕಾರ್ಯಕರ್ತರನ್ನು ಬೆದರಿಸುವ ಕೆಲಸ ಮಾಡುತ್ತಿದೆ ಎಂದರು.

ತಪ್ಪು ಮಾಡಿದ್ದಾರೋ ಇಲ್ವೋ ಇವರು ತೀರ್ಮಾನ ಮಾಡುವುದಲ್ಲ. ಈ ಸಂದರ್ಭದಲ್ಲಿ ರಾಮಭಕ್ತರನ್ನು ಬಂಧಿಸುತ್ತಾರೆ ಅಂದರೆ ಏನರ್ಥ? ನಾಳೆ ದಿನ ನಡೆಯುವ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಕಾಂಗ್ರೆಸ್​ನವರ ನಾಲಗೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್​ನವವರ ಹುಚ್ಚು ಹೇಳಿಕೆಗೆ ಉತ್ತರ ಕೊಡುವ ಅಗತ್ಯ ಇಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಅವರಿಗೆ ಖುಷಿ ಕೊಡುತ್ತದೆ ಎಂದರು.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ಶಾಂತಿ ಸುವ್ಯವಸ್ಥೆ ಕದಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

31 ವರ್ಷಗಳ ಹಳೇ ಕೇಸ್​ನ್ನು ಈಗ ಓಪನ್ ಮಾಡಬೇಕಾ? ಕಾನೂನು ಸುವ್ಯವಸ್ಥೆ ಹದಗೆಡುವ ದುಸ್ಸಾಹಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕುತ್ತಿದ್ದಾರೆ. ಮುಂದೆ ನಡೆಯುವ ಘಟನೆಗಳಿಗೆ ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಹೊಣೆ. ಕೂಡಲೇ ಬಂಧಿತ ಶ್ರೀಕಾಂತ ಪೂಜಾರಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಆರ್.ಅಶೋಕ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಶ್ರೀಕಾಂತ್ ಬಂಧನ ಖಂಡಿಸಿ ನಾಳೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ನಾಳೆ ಬೆಳಗ್ಗೆ 11.30ಕ್ಕೆ ಹುಬ್ಬಳ್ಳಿಯ ಶಹರ ಠಾಣೆ ಎದುರು ಪ್ರತಿಭಟನೆ ನಡೆಯಲಿದ್ದು, ಆರ್.ಅಶೋಕ್ ನೇತೃತ್ವದಲ್ಲಿ ಠಾಣೆಗೆ ಮುತ್ತಿಗೆ ಹಾಕಲು ನಿರ್ಧಾರಿಸಲಾಗಿದೆ. ಪ್ರತಿಭಟನೆ ನಂತರ ಶ್ರೀಕಾಂತ್ ಮನೆಗೆ ಭೇಟಿ ನೀಡಲಿರುವ ಅಶೋಕ್ ಅವರಿಗೆ ಸ್ಥಳೀಯ ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸಾಥ್ ನೀಡಲಿದ್ದಾರೆ.

ಬಿಜೆಪಿ ಪ್ರತಿಭಟನೆಗೆ ಎಸ್​ಎಸ್​ಕೆ ಸಮಾಜ ಸಾಥ್

ಶ್ರೀಕಾಂತ್ ಪೂಜಾರಿ ಬಂಧನ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿದ ಎಸ್​ಎಸ್​ಕೆ ಸಮಾಜದ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಶಾಸಕ ಅಶೋಕ ಕಾಟವೆ, ರಾಜ್ಯ ಸರ್ಕಾರ ಹಿಂದೂ ಸಮಾಜವನ್ನ ಟಾರ್ಗೆಟ್ ಮಾಡುತ್ತಿದೆ. ರಾಮಜನ್ಮ ಭೂಮಿ ಹೋರಾಟಗಾರ ಬಂಧನ ಖಂಡನಿಯ. ಎಸ್​ಎಸ್​ಕೆ ಸಮಾಜದ ಹಿಂದೂ ಕಾರ್ಯಕರ್ತರನ್ನ ಪೊಲೀಸರು ಗುರಿಯಾಗಿಸಿಕೊಂಡಿದ್ದು ಸರಿಯಲ್ಲ ಎಂದರು.

ನಾಳಿನ ಬಿಜೆಪಿ ಪ್ರತಿಭಟನೆಗೆ ನಮ್ಮ ಸಮಾಜ ಸಂಪೂರ್ಣ ಬೆಂಬಲ ನೀಡುತ್ತದೆ. ಶ್ರೀಕಾಂತ್ ಪೂಜಾರಿ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುತ್ತೇವೆ. ಜೈಲಿನಿಂದ ತಕ್ಷಣ ಬಿಡುಗಡೆ ಮಾಡಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಪ್ರಕರಣ ಸಂಬಂಧ ಮುಂದೆ ಯಾರನ್ನು ಬಂಧಿಸಬಾರದು ಎಂದರು.

ವಿಜಯಪುರ ನಗರದಲ್ಲಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧನ ಕಂಡಿಸಿ ನಾಳೆ ಜಿಲ್ಲಾ ಬಿಜೆಪಿ ಘಟಕದಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್​ಎಸ್ ಪಾಟೀಲ್ ಕೂಚಬಾಳ‌ ನೇತೃತ್ವದಲ್ಲಿ ನಾಳೆ ಬೆಳಗ್ಗೆ 11:30ಕ್ಕೆ ವಿಜಯಪುರ ನಗರದ ಗಾಂಧಿ ಚೌಕಿನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ