ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಚಿಂತನೆ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವಿಷ್ಯ ಶ್ರೀರಾಮ ಮಂದಿರ ನಿರ್ಮಾಣ ಆಗುತ್ತಿದ್ದು, ಜನವರಿ 22 ರಂದು ರಾಮಲಲ್ಲಾ (ಬಾಲರಾಮ) ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದ ಆಹ್ವಾನದ ವಿಚಾರವಾಗಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಕೆಸರೆರಚಾಟದ ನಡುವೆ ರಾಮನ ವಿಗ್ರಹ ಪ್ರತಿಷ್ಠಾಪನೆಯಂದು ರಾಜ್ಯದ ಮುಜರಾಯಿ ಇಲಾಖೆಯ ರಾಮ ಮಂದಿರ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಚಿಂತನೆ
ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆಗೆ ರಾಜ್ಯ ಸರ್ಕಾರ ಚಿಂತನೆ
Follow us
| Updated By: Rakesh Nayak Manchi

Updated on: Jan 06, 2024 | 9:23 PM

ಬೆಂಗಳೂರು, ಜ.6: ಅಯೋಧ್ಯೆ (Ayodhya) ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ರಾಮಲಲ್ಲಾನ (ಬಾಲರಾಮ) ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಆಹ್ವಾನದ ವಿಚಾರವಾಗಿ ಕರ್ನಾಟಕದಲ್ಲಿ (Karnataka) ನಡೆಯುತ್ತಿರುವ ರಾಜಕೀಯ ಕೆಸರೆರಚಾಟದ ನಡುವೆ ಅಂದು ರಾಜ್ಯದ ಮುಜರಾಯಿ ಇಲಾಖೆಯ ರಾಮ ಮಂದಿರ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.

ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ವಿಶೇಷ ಪೂಜೆ, ರಾಮಜಪ ಮಾಡಲು ಸರ್ಕಾರವೇ ಚಿಂತನೆ ನಡೆಸಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಅಯೋಧ್ಯೆ ರಾಮಮಂದಿರ ಹೋರಾಟ ವಿಚಾರದಲ್ಲಿ ಕಾಂಗ್ರೆಸ್ ತುಷ್ಠೀಕರಣದ ರಾಜಕಾರಣ ಮಾಡಿಕೊಂಡೇ ಬಂದಿತ್ತು. ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲ್ಲ ಎಂದು ಸಿದ್ದರಾಮಯ್ಯ ಅವರು ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಇಂತಹ ಒಂದು ಪರಿವರ್ತನೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Ayodhya Ram Mandir Muhurat Analysis: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಮುಹೂರ್ತ ಹೇಗಿದೆ? ಇಲ್ಲಿದೆ ವಿಶ್ಲೇಷಣೆ

ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ, ಕರ್ನಾಟಕದಲ್ಲಿ ಈ ಬಗ್ಗೆ ರಾಜಕೀಯ ಕೆಸರೆರಚಾಟಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಆಹ್ವಾನ ನೀಡಿಲ್ಲ ಎಂದು ಕೈ ನಾಯಕರು ತಗಾದೆ ಎತ್ತಿದ್ದಾರೆ. ಆಹ್ವಾನ ಬಂದಿಲ್ಲ, ಬಂದರೆ ಕಾರ್ಯಕ್ರಮಕ್ಕೆ ಹೋಗವ ಚಿಂತನೆ ನಡೆಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಬಿಜೆಪಿ ಪ್ರತ್ಯುತ್ತರ ನೀಡುತ್ತಿದೆ. ರಾಮಭಕ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಹೇಳುತ್ತಿದ್ದಾರೆ. ಅಲ್ಲದೆ, ಸ್ಥಳಾವಕಾಶದ ಕೊರತೆ ಹಿನ್ನೆಲೆ ಜನಸಂಧಣಿ ತಡೆಯಲು ಕರ್ನಾಟಕದ ಮುಖ್ಯಮಂತ್ರಿ ಮಾತ್ರವಲ್ಲದೆ, ಯಾವುದೇ ರಾಜ್ಯದ ಮುಖ್ಯಮಂತ್ರಿಗಳಿಗೂ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಆಹ್ವಾನ ನೀಡಿಲ್ಲ. ಕೆಲವರಿಗಷ್ಟೇ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ