ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆಗೆ ಹೊರಟ ಕರ್ನಾಟಕದ ಪ್ರಮುಖ ಮಠಾಧೀಶರು

|

Updated on: Jan 20, 2024 | 4:12 PM

ಜನವರಿ 22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ದಿನ ಅಯೋಧ್ಯೆ ಗಣ್ಯಾತಿಗಣ್ಯರಿಂದ ತುಂಬಿಹೋಗಲಿದೆ. ವಿವಿಧ ಕ್ಷೇತ್ರಗಳ ಸಾಧಕರೆಲ್ಲಾ ಆ ಮಹಾನ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿಲಿದ್ದಾರೆ. ಹರಿಹರದ ವಚನಾನಂದ ಸ್ವಾಮೀಜಿ ಸೇರಿದಂತೆ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲು ಕರ್ನಾಟಕದಿಂದ ಅಯೋಧ್ಯೆಗೆ ರಾಜ್ಯದ ಪ್ರಮುಖ ಮಠಾಧೀಶರು ಹೊರಟಿದಿದ್ದಾರೆ.

ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆಗೆ ಹೊರಟ ಕರ್ನಾಟಕದ ಪ್ರಮುಖ ಮಠಾಧೀಶರು
ಅಯೋಧ್ಯೆಗೆ ಹೊರಟ ಮಠಾಧೀಶರು
Follow us on

ಬೆಂಗಳೂರು, ಜನವರಿ 20: ಅಯೋಧ್ಯೆ (Ayodhya) ಯಲ್ಲಿ ಅಕ್ಷರಶಃ ಸ್ವರ್ಗವೇ ಧರೆಗಿಳಿದಂತಿದೆ. ಇಡೀ ರಾಮನೂರು ದೀಪಾಲಂಕಾರಗಳಿಂದ ಜಗಮಗಿಸುತ್ತಿದೆ. ಜನವರಿ 22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ದಿನ ಅಯೋಧ್ಯೆ ಗಣ್ಯಾತಿಗಣ್ಯರಿಂದ ತುಂಬಿಹೋಗಲಿದೆ. ವಿವಿಧ ಕ್ಷೇತ್ರಗಳ ಸಾಧಕರೆಲ್ಲಾ ಆ ಮಹಾನ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿಲಿದ್ದಾರೆ. ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲು ಕರ್ನಾಟಕದಿಂದ ಅಯೋಧ್ಯೆಗೆ ರಾಜ್ಯದ ಪ್ರಮುಖ ಮಠಾಧೀಶರು ಹೊರಟಿದಿದ್ದಾರೆ.

ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಮಹಾಸ್ವಾಮಿಜಿ, ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಶಾಂತವೀರ ಮಹಾಸ್ವಾಮೀಜಿ, ಸಿದ್ದರಾಮೇಶ್ವರ ಮಹಾ ಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದ ಇಮ್ಮಡಿ ಸಿದ್ದರಾಮಯ್ಯ ಮಹಾಸ್ವಾಮೀಜಿ.

ಇದನ್ನೂ ಓದಿ: ಕರ್ನಾಟಕದಲ್ಲಿದೆ ತಾಳೆ ಗರಿಗಳಲ್ಲಿ ಬರೆದ ಏಳು ರೀತಿಯ ರಾಮಾಯಣಗಳ ಸಂಗ್ರಹ ಗ್ರಂಥಗಳು! ಅಯೋಧ್ಯೆ ರಾಮ ಮಂದಿರಕ್ಕೆ ಒಪ್ಪಿಸಲು ನಿರ್ಧಾರ

ಶ್ರೀ ವಾಲ್ಮೀಕಿ ಗುರುಪೀಠ ರಾಜನಳ್ಳಿ ಹರಿಹರದ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಜಿ, ಮಹಾಸ್ವಾಮೀಜಿ ಪಂಚಮಸಾಲಿ ಗುರುಪೀಠ ಹರಿಹರದ ವಚನಾನಂದ ಸ್ವಾಮೀಜಿ ಮತ್ತು ಮಹಾಸ್ವಾಮೀಜಿ ಭಗೀರಥ ಪೀಠ ಮಧುರೆದ  ಪುರುಷೋತ್ತಮಾನಂದ ಪುರಿ ಮಠಾಧೀಶರು ಹೊರಟಿದಿದ್ದಾರೆ.

ಅರ್ಧ ದಿನ ರಜೆ

ಜನವರಿ 22ರಂದು ರಾಮಮಂದಿರ ಉದ್ಘಾಟನೆಯ ನೇರ ಪ್ರಸಾರ ವೀಕ್ಷಿಸಲಿಕ್ಕಾಗಿ ಈಗಾಗಲೇ ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಈಗಾಗಲೇ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಮಾಂಸ, ಮದ್ಯ ಮಾರಾಟವನ್ನು ಬಂದ್ ಮಾಡಿಸಲಾಗಿದೆ.

ಇದನ್ನೂ ಓದಿ: ಜನವರಿ 22 ರಂದು ಶ್ರೀರಾಮನ ದೇವಾಲಯ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ

ಬೇರೆ ಬೇರೆ ರಾಜ್ಯಗಳಲ್ಲಿ ರಜೆ ಘೋಷಣೆಯಾಗುತ್ತಿರವ ಬೆನ್ನಲ್ಲೇ ಕರ್ನಾಟಕದಲ್ಲೂ ಜನವರಿ 22ರಂದು ಸರ್ಕಾರಿ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.

ಬೆಂಗಳೂರು ವಕೀಲರ ಸಂಘವೂ ಸೋಮವಾರ ರಜೆ ಘೋಷಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಸಿಎಂಗೆ ಪತ್ರ ಬರೆದಿದ್ದಾರೆ.

ಕರಸೇವೆಯಲ್ಲಿ ಭಾಗವಹಿಸಿದ್ದ ಹುಬ್ಬಳ್ಳಿಯ ರಾಮಭಕ್ತ ರಮೇಶ್ ಅನ್ನೋರು ತಮ್ಮ ಸ್ನೇಹಿತರ ಜತೆ ಅಯೋಧ್ಯೆಗೆ ನಿನ್ನೆ ಸಂಜೆ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.