ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆ: ಬಿವೈ ವಿಜಯೇಂದ್ರ

ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ. ಸದ್ಯ ನಗರದ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದ್ದು, ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶಿಲ್ಪಿ ಅರುಣ್ ಯೋಗಿರಾಜ್ ಅವರಿ​ಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆ: ಬಿವೈ ವಿಜಯೇಂದ್ರ
ರಾಮಲಲ್ಲಾ ಮೂರ್ತಿ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
Edited By: Rakesh Nayak Manchi

Updated on: Jan 01, 2024 | 8:00 PM

ಬೆಂಗಳೂರು, ಜ.1: ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ. ಸದ್ಯ ನಗರದ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆಯ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದ್ದು, ಇಡೀ ರಾಜ್ಯವೇ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra), ಶಿಲ್ಪಿ ಅರುಣ್ ಯೋಗಿರಾಜ್ ಅವರಿ​ಗೆ ತುಂಬು ಹೃದಯದ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವುದು ಅತ್ಯಂತ ಸಂತಸದ ವಿಚಾರ. ಜನವರಿ 22ರಂದು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ವಿಷಯ ಅತ್ಯಂತ ಖುಷಿಯನ್ನು ತಂದಿತ್ತಿದೆ ಎಂದರು.

ಇದನ್ನೂ ಓದಿ: ಕರ್ನಾಟಕದ ಶಿಲ್ಪಿ ಅರುಣ್​ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಫೈನಲ್, ಮೂರ್ತಿ ಹೇಗಿದೆ ಗೊತ್ತಾ?

ಶ್ರೀರಾಮನಿಗೂ ಕರ್ನಾಟಕಕ್ಕೂ ವಿಶೇಷವಾದ ಬಾಂಧವ್ಯವಿದೆ. ಹನುಮಂತನು ಕರ್ನಾಟಕದಲ್ಲೇ ಜನಿಸಿದ್ದು, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ವಿಜಯೇಂದ್ರ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us