Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ: ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸಿದ್ದರಾಮಯ್ಯಗೆ ಯಶ್​ಪಾಲ್ ಸುವರ್ಣ ಮನವಿ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಕೋಟ್ಯಾಂತರ ರಾಮಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಟ್ವೀಟ್ ಮಾಡಿದ ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ, ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ: ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸಿದ್ದರಾಮಯ್ಯಗೆ ಯಶ್​ಪಾಲ್ ಸುವರ್ಣ ಮನವಿ
ಯಶ್​ಪಾಲ್ ಸುವರ್ಣ ಮತ್ತು ಸಿದ್ದರಾಮಯ್ಯ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on: Jan 01, 2024 | 4:13 PM

ಉಡುಪಿ, ಜ.1: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಉಡುಪಿ ಶಾಸಕ ಯಶ್​ಪಾಲ್ ಸುವರ್ಣ (Yashpal Suvarna) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರವನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಯಶ್​ಪಾಲ್ ಸುವರ್ಣ, ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಗೆ ನಾಡಿನ ಜನತೆಯ ಪರವಾಗಿ ಕೋರಿಕೆ ಎಂದರು.

ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ತಮ್ಮಲ್ಲಿ ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಯಶ್​ಪಾಲ್ ಸುವರ್ಣ ಟ್ವೀಟ್

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರಾಮಜನ್ಮಭೂಮಿ‌ ಹೋರಾಟ ಕೇಸ್​ಗೆ ಮರುಜೀವ: 31 ವರ್ಷದ ಬಳಿಕ ಆರೋಪಿಯ ಬಂಧನ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದ್ದು, ಜನವರಿ 22 ರಂದು ಇದರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಸದ್ಯ ಮೈಸೂರು ನಗರದ ಶಿಲ್ಪಿ ಅರುಣ್ ಯೋಗಿರಾಜ್​​ ಅವರು ಕೆತ್ತನೆ ಮಾಡಿದ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿದೆ. ಈ ಬಗ್ಗೆ ಈಗಾಗಲೇ ರಾಮಮಂದಿರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಲಲ್ಲಾ ವಿಗ್ರಹಕ್ಕೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದ ಕೃಷ್ಣ ಶಿಲೆ ಕಲ್ಲು ಬಳಕೆ ಮಾಡಲಾಗಿದೆ.

ಕರ್ನಾಟಕ, ರಾಜಸ್ಥಾನದಿಂದ ತಂದ ಶಿಲೆಗಳಲ್ಲಿ ರಾಜಸ್ಥಾನ ಶಿಲ್ಪಿಗಳು ಮತ್ತು ಕರ್ನಾಟಕದ ಇಬ್ಬರು ಶಿಲ್ಪಿಗಳಿಂದ ಬಾಲರಾಮನ ವಿಗ್ರಹ ಕೆತ್ತನೆ ಮಾಡಲಾಗಿದೆ. ಕರ್ನಾಟಕದ ಅರುಣ್​ ಯೋಗಿರಾಜ್​​, ಗಣೇಶ್ ಭಟ್​ರಿಂದ ವಿಗ್ರಹ ಕೆತ್ತನೆ ಮಾಡಿದ್ದು, ಅಂತಿಮವಾಗಿ ಮೈಸೂರಿನ ಅರುಣ್​ ಯೋಗಿರಾಜ್ ಕೆತ್ತಿರುವ ವಿಗ್ರಹ ಆಯ್ಕೆ ಮಾಡಲಾಗಿದೆ.

ಕೆತ್ತನೆಗೆ ಬಳಸಿರುವ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಕಬ್ಬಿಣ 850 ಡಿಗ್ರಿಯಲ್ಲಿ ಕಾಯಿಸಿದರೆ ಕರಗಿ ಹೋಗುತ್ತೆ. ಆದರೆ ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆಸಿಡ್ ಹಾಕಿದರು ಏನೂ ಆಗಲ್ಲ. ಮಳೆ, ಗಾಳಿ, ಬಿಸಿಲಿಗೂ ಏನು ಆಗಲ್ಲ. ಕೃಷ್ಣ ಶೀಲೆ ಸಾಕಷ್ಟು ಗಟ್ಟಿಯಾದ ಕಲ್ಲು. ಮೈಸೂರು ಅರಮನೆಯಲ್ಲಿರುವ ಮೂರ್ತಿಗಳು ಕೃಷ್ಣ ಶಿಲೆಯಲ್ಲೇ ಮಾಡಲಾಗಿದೆ ಎಂದು ಶಿಲ್ಪಿ ಸೂರ್ಯ ಪ್ರಕಾಶ್ ಹೇಳಿದ್ದಾರೆ. ಮೈಸೂರಿನ ಎಚ್.ಡಿ ಕೋಟೆ ಹಾಗೂ ಹಾಸನದಲ್ಲಿ ಮಾತ್ರ ಕೃಷ್ಣ ಶೀಲೆ ಕಲ್ಲುಗಳು ಸಿಗುತ್ತವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ