Karnataka High Court: ಕರ್ನಾಟಕ ಹೈಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ
ಇಬ್ಬರು ಜಿಲ್ಲಾ ನ್ಯಾಧೀಶರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು: ರಾಮಚಂದ್ರ ದತ್ತಾತ್ರೇಯ ಹುದ್ದಾರ್(Ramachandra Dattatray Huddar) ಹಾಗೂ ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ್ (Venkatesh Naik Thavaryanaik) ಅವರನ್ನು ಕರ್ನಾಟಕ ಹೈಕೋರ್ಟ್ (Karnataka High Court) ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲಾಗಿದೆ. ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಅವರು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿದ್ದರು. ಇನ್ನು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದರು. ಇದೀಗ ಇವರನ್ನು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಶನಿವಾರ (ಜನವರಿ21) ಅಧಿಸೂಚನೆ ಹೊರಡಿಸಿದೆ.
ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ್ ಅವರು ಎರಡು ವರ್ಷಗಳ ಕಾಲ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅಭಿನಂದನೆಗಳನ್ನು ತಿಳಿಸಿ ಟ್ವೀಟ್ ಮಾಡಿದ್ದಾರೆ.
As per the provisions under the Constitution of India, the following Judges are appointed for the Karnataka High Court. I extend my best wishes to them. pic.twitter.com/fDxBLsUu5v
— Kiren Rijiju (@KirenRijiju) January 21, 2023
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್ ಕೊಲಿಜಿಯಂ, ವಿವಿಧ ಹೈಕೋರ್ಟ್‌ಗಳಿಗೆ ಏಳು ಮಂದಿ ನ್ಯಾಯಾಂಗ ಇಲಾಖಾ ಅಧಿಕಾರಿಗಳ ಪದೋನ್ನತಿಗೆ ಹಾಗೂ ಇಬ್ಬರು ವಕೀಲರಿಗೆ ನ್ಯಾಯಮೂರ್ತಿಗಳನ್ನಾಗಿ ಬಡ್ತಿ ನೀಡಲು ಶಿಫಾರಸು ಮಾಡಿತ್ತು. ಜಿಲ್ಲಾ ನ್ಯಾಯಾಧೀಶರಾದ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ತವರನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಪದೋನ್ನತಿಗೊಳಿಸುವ ಪ್ರಸ್ತಾವಕ್ಕೆ ಕೊಲಿಜಿಯಂ ಸಭೆಯಲ್ಲಿ ಅಂಗೀಕಾರವಾಗಿತ್ತು. ಬಳಿಕ ಹೈಕೋರ್ಟ್ ಜಡ್ಜ್ ಆಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿತ್ತು. ಅದರಂತೆ ಇಂದು ಕೇಂದ್ರ ಸರ್ಕಾರ ಇಂದು ಇಬ್ಬರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ,
ಭಾರತ ಸರ್ಕಾರದ ವರದಿಯ ಪ್ರಕಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಒಟ್ಟು 62 ನ್ಯಾಯಮೂರ್ತಿ ಹುದ್ದೆಗಳಿದ್ದು, ಈ ಪೈಕಿ ಇಬ್ಬರ ನೇಮಕಾತಿಯೊಂದಿಗೆ 49 ಹುದ್ದೆ ಭರ್ತಿಯಾಗಿವೆ. ಇನ್ನು 13 ಹುದ್ದೆಗಳು ಖಾಲಿ ಉಳಿದಿವೆ ಎಂದು ಬಾರ್ ಆ್ಯಂಡ್ ಬೆಂಚ್ ವರದಿ ಮಾಡಿದೆ
Published On - 11:23 pm, Sat, 21 January 23