Ramadan 2021: ರಂಜಾನ್ ಹಬ್ಬದ ಪ್ರಾಮುಖ್ಯತೆ, ಉಪವಾಸದ ಆರಂಭ.. ಇವೆಲ್ಲದರ ಡಿಟೇಲ್ಸ್ ಇಲ್ಲಿದೆ

Ramadan Festival 2021: ರಂಜಾನ್ ಏಪ್ರಿಲ್ 13ರಿಂದ ಪ್ರಾರಂಭವಾಗಲಿದ್ದು, ಮೇ 12ರ ವರೆಗೆ ನಡೆಯಲಿದೆ. ಮುಸ್ಲಿಮರ ಈ ಅತ್ಯಂತ ಪವಿತ್ರ ಹಾಗೂ ಧಾರ್ಮಿಕವಾಗಿ ಹೆಚ್ಚಿನ ಮಹತ್ವವನ್ನು ಹೊಂದಿರುವ ರಂಜಾನ್ ಹಬ್ಬದ ಮಹತ್ವ, ದಿನಾಂಕ ಮತ್ತು ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ.

Ramadan 2021: ರಂಜಾನ್ ಹಬ್ಬದ ಪ್ರಾಮುಖ್ಯತೆ, ಉಪವಾಸದ ಆರಂಭ.. ಇವೆಲ್ಲದರ ಡಿಟೇಲ್ಸ್ ಇಲ್ಲಿದೆ
ರಂಜಾನ್
Follow us
ಆಯೇಷಾ ಬಾನು
| Updated By: Digi Tech Desk

Updated on:Apr 11, 2021 | 4:34 PM

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಶಬನ್ ಕೊನೆಯ ದಿನದ ನಂತರ 9ನೇ ತಿಂಗಳಾದ ರಂಜಾನ್ ಪ್ರಾರಂಭವಾಗುತ್ತದೆ. ಅದು ಈ ವರ್ಷ ಏಪ್ರಿಲ್ 13ರಿಂದ ನಡೆಯಲಿದೆ. ಏಪ್ರಿಲ್ 13ರಿಂದ ಮೇ 12ರ ವರೆಗಿನ ರಂಜಾನ್​ನ ಒಂದು ತಿಂಗಳು ಮುಸ್ಲಿಮರಿಗೆ ಅತ್ಯಂತ ಪವಿತ್ರ ಮಾಸ. ರಂಜಾನ್​ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ. ಅನಾರೋಗ್ಯ, ವೃದ್ಧರು, ಗರ್ಭಿಣಿಯರು, ಮಧುಮೇಹ ಅಥವಾ ಮುಟ್ಟಿನಂಥ ಸಮಸ್ಯೆಯಿಂದ ಬಳಲುತ್ತಿರುವವರು ಹೊರತುಪಡಿಸಿ ಎಲ್ಲ ಮುಸ್ಲಿಮರು ಉಪವಾಸವನ್ನು ಕಡ್ಡಾಯವಾಗಿದೆ ಮಾಡುತ್ತಾರೆ. ಈ ಒಂದು ತಿಂಗಳ ಅವಧಿಯನ್ನು ವಿಶ್ವದಾದ್ಯಂತ ಮುಸ್ಲಿಮರು ಪವಿತ್ರ ಕುರಾನ್ ಪಠಣೆ ಮಾಡುವುದು ಹಾಗೂ ಪ್ರಾರ್ಥನೆಗಳನ್ನು ಮಾಡುವ ಮೂಲಕ ದೇವರಿಗೆ ಹತ್ತಿರವಾಗಲೆಂದು ಮೀಸಲಿಡುತ್ತಾರೆ.

ರಂಜಾನ್ ಹಬ್ಬದ ಪ್ರಾಮುಖ್ಯತೆ ಪವಿತ್ರ ರಂಜಾನ್​ನಲ್ಲಿ ಒಂದು ತಿಂಗಳ ಉಪವಾಸ ಮಾಡುವ ಮೂಲಕ ನಮ್ಮ ಸಂಬಂಧ ದೇವರ ಜೊತೆ ಮತ್ತಷ್ಟು ಗಟ್ಟಿಯಾಗುತ್ತೆ. ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂದು ಮುಸ್ಲಿಮರು ನಂಬುತ್ತಾರೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟಸಂಕಷ್ಟಗಳು ಕಡಿಮೆಯಾಗುತ್ತವೆ ಎಂದು ಕೆಲವರು ನಂಬುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಬಡವರಿಗೆ ದಾನ-ಧರ್ಮ ಮಾಡುವುದು ಹಾಗೂ ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ.

ರಂಜಾನ್ ದಿನಾಂಕಗಳು ಈ ಪವಿತ್ರ ತಿಂಗಳ ಮೊದಲ ಮತ್ತು ಕೊನೆಯ ದಿನಾಂಕಗಳು ಚಂದ್ರನ ಇಸ್ಲಾಮಿಕ್ ಕ್ಯಾಲೆಂಡರ್ ಅನ್ನು ಅವಲಂಬಿಸಿರುತ್ತದೆ. ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತದೆ. ಒಂದು ತಿಂಗಳ ಅಮಾವಾಸ್ಯೆಯ ನಂತರ ಕಾಣಿಸಿಕೊಳ್ಳುವ ಅರ್ಧಚಂದ್ರಾಕೃತಿಯೊಂದಿಗೆ ಪ್ರಾರಂಭವಾಗುತ್ತದೆ. ಈ ವರ್ಷ ರಂಜಾನ್ ಏಪ್ರಿಲ್ 13 ರಿಂದ (ಮಂಗಳವಾರ) ಪ್ರಾರಂಭವಾಗುವ ಸಾಧ್ಯತೆಯಿದೆ ಮತ್ತು ಮೇ 12 ರ ಸಂಜೆ (ಬುಧವಾರ) ಕೊನೆಗೊಳ್ಳುತ್ತದೆ. ಆದರೆ ವಿವಿಧ ಪ್ರದೇಶಗಳಲ್ಲಿ ಚಂದ್ರನನ್ನು ನೋಡುವುದ ಮೂಲಕ ದಿನ ಅವಲಂಬಿಸಿರುವುದರಿಂದ ಈ ದಿನಾಂಕಗಳು ಬದಲಾಗಬಹುದು. ಈ ಹಬ್ಬವು ಈದ್-ಉಲ್-ಫಿತರ್​ನೊಂದಿಗೆ ಕೊನೆಗೊಳ್ಳುತ್ತದೆ.

ರಂಜಾನ್ ಉಪವಾಸ ಆಚರಣೆ ರಂಜಾನ್​ ತಿಂಗಳಲ್ಲಿ ರೋಜಾ ಅಥವಾ ಉಪವಾಸಕ್ಕೆ ಅದರದೇ ಆದ ಮಹತ್ವವಿದೆ. ಸೂರ್ಯೋದಯಕ್ಕೆ ಮುಂಚಿನ ತಿಂಡಿಯನ್ನು ಸೋಹರ್ ಎಂದು ಕರೆಯಲಾಗುತ್ತದೆ ಮತ್ತು ಸೂರ್ಯಾಸ್ತದ ನಂತರ ಉಪವಾಸವನ್ನು ಮುಕ್ತಾಯಗೊಳಿಸುವ ಪ್ರಕ್ರಿಯೆಯನ್ನು ಇಫ್ತಾರ್ ಎಂದು ಕರೆಯಲಾಗುತ್ತದೆ. ಇನ್ನು ರಂಜಾನ್ ಸಮಯದಲ್ಲಿ ಕೇವಲ ದೇಹಕ್ಕೆ ಮಾತ್ರವಲ್ಲ ಮನಸ್ಸಿಗೂ ಉಪವಾಸ ಮಾಡಿಸಲಾಗುತ್ತದೆ. ಮುಸ್ಲಿಮರು ಉಪವಾಸದ ವೇಳೆ ಸಿಗರೇಟ್, ಮದ್ಯ, ತಂಬಾಕು ಸೇವನೆ, ಲೈಂಗಿಕ ಸಂಬಂಧವನ್ನು ಬೆಳೆಸುವುದನ್ನೂ ಕೂಡ ತಪ್ಪಿಸುತ್ತಾರೆ. ಏಕೆಂದರೆ ಉಪವಾಸದ ಸಮಯದಲ್ಲಿ ಇಂಥ ಚಟುವಟಿಕೆಗಳನ್ನು ಪಾಪ ಎಂದು ಪರಿಗಣಿಸಲಾಗುತ್ತದೆ. ರಂಜಾನ್ ತಿಂಗಳಲ್ಲಿ ಮುಸ್ಲಿಮರು ತಮ್ಮನ್ನು ಅಧ್ಯಾತ್ಮ ಪ್ರವೃತ್ತಿಗೆ ಅರ್ಪಿಸಿಕೊಳ್ಳುತ್ತಾರೆ.

ಇದನ್ನೂ ಓದಿ: Ramzan Calendar: ರಂಜಾನ್ ಮಾಸದ ಆರಂಭ ಯಾವಗಿನಿಂದ ಗೊತ್ತಾ? ಇಲ್ಲಿದೆ ಉಪವಾಸದ ಕ್ಯಾಲೆಂಡರ್

Published On - 2:36 pm, Sun, 11 April 21

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್