ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ರಾಮಲಿಂಗಾ ರೆಡ್ಡಿ ಅಧ್ಯಕ್ಷ; ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ
ರಾಜ್ಯಪಾಲರ ಆದೇಶದ ಮೇರೆಗೆ ನಿಗಮಗಳ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಾಮಲಿಂಗಾ ರೆಡ್ಡಿ ಅವರು ನೇಮಕವಾಗಿದ್ದಾರೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಸಾರಿಗೆ ಇಲಾಖೆಯ 4 ನಿಗಮಗಳ ಅಧ್ಯಕ್ಷರಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರನ್ನು ನೇಮಕ ಮಾಡಿ ಸೋಮವಾರ ಸಂಜೆ ಆದೇಶ ಹೊರಡಿಸಲಾಗಿದೆ. ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಸಾಮಾನ್ಯವಾಗಿ ಈ ನಾಲ್ಕೂ ನಿಗಮಗಳಿಗೆ ಪ್ರತ್ಯೇಕವಾಗಿ ಅಧ್ಯಕ್ಷರ ನೇಮಕ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಒಬ್ಬರನ್ನೇ ನೇಮಕ ಮಾಡಲಾಗಿದೆ.
ರಾಜ್ಯಪಾಲರ ಆದೇಶದ ಮೇರೆಗೆ ನಿಗಮಗಳ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ರಾಮಲಿಂಗಾ ರೆಡ್ಡಿ ಅವರು ನೇಮಕವಾಗಿದ್ದಾರೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈ ಮಧ್ಯೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಪ್ರಾಣಿಗಳನ್ನು ಕೊಲ್ಲಬಾರದು. ನಾನು ಪ್ರಾಣಿಹತ್ಯೆ ನಿಷೇಧದ ಪರ. ಆದರೆ ಸಂಪುಟದಲ್ಲಿ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಬೇಕು ಶಕ್ತಿ ಸ್ಮಾರ್ಟ್ಕಾರ್ಡ್; ಅರ್ಜಿ ಸಲ್ಲಿಸುವುದು ಹೇಗೆ?
84 ಲಕ್ಷ ಜೀವ ರಾಶಿಗಳನ್ನೂ ಹತ್ಯೆ ಮಾಡಬಾರದೆಂಬ ನಿಲುವು ನನ್ನದರು. ಎಲ್ಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:15 pm, Mon, 5 June 23