AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿರುಪತಿ-ತಿರುಮಲಕ್ಕೆ ಭೇಟಿ ನೀಡಿ, ಕರ್ನಾಟಕ ಸರ್ಕಾರದ ಅತಿಥಿ ಗೃಹಗಳು ಮತ್ತು ಛತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಶಾಸಕರ ದೂರಿನ ಹಿನ್ನೆಲೆಯಲ್ಲಿ ಈ ಭೇಟಿ ನೀಡಿದ್ದಾರೆ, ಮಾರ್ಚ್ 2026ರೊಳಗೆ ಎಲ್ಲಾ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಟಿಟಿಡಿ ಅಧಿಕಾರಿಗಳಿಗೆ ಸೂಚಿಸಿದರು. ಭೂಮಿ ಗುತ್ತಿಗೆ, ಭಕ್ತರ ದರ್ಶನ ಸೇರಿ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ತಿರುಪತಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ
ರಾಮಲಿಂಗಾರೆಡ್ಡಿ
ಅಕ್ಷಯ್​ ಪಲ್ಲಮಜಲು​​
|

Updated on: Dec 26, 2025 | 10:41 AM

Share

ತಿರುಪತಿ, ಡಿ.26: ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy )ಭೇಟಿ ನೀಡಿದರು. ಅಲ್ಲಿ ನಡೆಯುತ್ತಿರುವಂತಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಪರಿಷತ್ ಸದಸ್ಯ ಶರವಣ ತಿರುಪತಿ ತಿರುಮಲದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿರುವುದಾಗಿ ಪ್ರಸ್ತಾಪಿಸಿದ್ದರು. ಆ ಸಂದರ್ಭದಲ್ಲಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಾವೇ ಖುದ್ದು ಭೇಟಿ ನೀಡಿ ಪರಿವೀಕ್ಷಣೆ ನಡೆಸುವುದಾಗಿ ಉತ್ತರಿಸಿದ್ದರು.

ಅದರಂತೆ ನಿನ್ನೆಯ ಮಂಗಳವಾರದಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಮಲಕ್ಕೆ ಭೇಟಿ ನೀಡಿ, ಟಿಟಿಡಿ ಅಧಿಕಾರಿಗಳೊಂದಿಗೆ ತಿರುಮಲದಲ್ಲಿರುವ ಕರ್ನಾಟಕ ಸರ್ಕಾರದ 3 ಅತಿಥಿ ಗೃಹಗಳು ಹಾಗೂ ಛತ್ರದ ಪರಿಶೀಲನೆ ನಡೆಸಿದರು.ಬಾಕಿ ಉಳಿದಿರುವ ಎಲ್ಲಾ ಸಮಸ್ಯೆ ಹಾಗೂ ಕಾಮಗಾರಿಗಳನ್ನು ಮಾರ್ಚ್ 2026ರೊಳಗೆ ಪೂರ್ಣ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್

ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಕೆಳಕಂಡ ವಿಷಯಗಳ ಕುರಿತು ಚರ್ಚೆ ನಡೆಸಿದರು.

1. ತಿರುಮಲದಲ್ಲಿನ ಭೂಮಿಯ ಲೀಸ್ ವಿಷಯ

2. ಟಿಟಿಡಿ ವಾಪಸ್ ಪಡೆದ ಭೂಮಿಗೆ ಬದಲಾಗಿ ತಿರುಪತಿಯಲ್ಲಿ 30 ಸೆಂಟ್ಸ್ ಪರ್ಯಾಯ ಭೂಮಿ ಒದಗಿಸುವುದು.

3. ತಿರುಮಲದಲ್ಲಿ ನಮ್ಮ ಪರವಾಗಿ ಟಿಟಿಡಿ ಕೈಗೊಂಡ ನಾಗರಿಕ ಕಾಮಗಾರಿಗಳ ಮೇಲೆ ವಿಧಿಸಲಾಗುವ ಸೆಂಟೇಜ್ ಶುಲ್ಕಕ್ಕೆ ವಿನಾಯಿತಿ ನೀಡುವುದು.

4. ತಿರುಮಲದಲ್ಲಿರುವ ಎಲ್ಲಾ ಅತಿಥಿ ಗೃಹಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಹಸ್ತಾಂತರಿಸುವುದು.

5. ಪ್ರೀಫ್ಯಾಬ್ರಿಕೇಟೆಡ್ ನಾಗರಿಕ ರಚನೆಗಳಿಂದ ಉಂಟಾಗುವ ನೀರು ಸೋರಿಕೆ ಸಮಸ್ಯೆಯನ್ನು ತಡೆಯುವುದು.

6. ಎಕ್ಸ್ಹಾಸ್ಟ್ ಡಕ್ಟ್‌ಗಳಿಗೆ ಸೂಕ್ತ ವಾತಾಯನ ವ್ಯವಸ್ಥೆ ಒದಗಿಸುವುದು.

7. ಎಲ್ಲಾ ಸ್ನಾನಗೃಹಗಳಲ್ಲಿ ಇರುವ PoP ಮೇಲ್ಚಾವಣಿಯನ್ನು PVC ಮೇಲ್ಚಾವಣಿಯಿಂದ ಬದಲಿಸುವುದು.

8. ಛತ್ರಕ್ಕೆ ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆಯುವುದು.

9. HT ಲೈನ್ ಅನುಮತಿ ಪಡೆಯಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು.

10. ಹೊರಾಂಗಣ ಪೋರ್ಟಿಕೋದಲ್ಲಿರುವ PoP ಮೇಲ್ಚಾವಣಿಯನ್ನು PVC ಮೇಲ್ಚಾವಣಿಯಿಂದ ಬದಲಿಸುವುದು.

11. ಕರ್ನಾಟಕದ ಭಕ್ತರಿಗೆ ದರ್ಶನ ಸೌಲಭ್ಯ ಒದಗಿಸುವುದು.

ಈ‌ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಆಯುಕ್ತರಾದ ಶರತ್, ಟಿಟಿಡಿ ಟ್ರಸ್ಟ್ ಸದಸ್ಯ ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ