ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ವ್ಯಕ್ತಿಗಳು ದುರ್ಮರಣ ಹೊಂದಿದ್ದಾರೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂಬ ಮಾಹಿತಿ ಇದೆ. ಕಾರಿನಲ್ಲಿದ್ದ ನಾಯಿ ಮರಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ.

ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 17, 2024 | 6:19 PM

ರಾಮನಗರ, ಸೆಪ್ಟೆಂಬರ್​ 17: ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ವ್ಯಕ್ತಿಗಳು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ನಾಯಿ ಮರಿ ಹೊರತುಪಡಿಸಿ ಉಳಿದವರೆಲ್ಲರೂ ಸಾವು

ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕುಣಿಗಲ್​ನಿಂದ ಬೆಂಗಳೂರು ಕಡೆ ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರಿನ ಏರ್​ಬ್ಯಾಗ್ ಓಪನ್ ಆದರೂ ಕಾರಿನಲ್ಲಿದ್ದ ನಾಯಿ ಮರಿ ಹೊರತುಪಡಿಸಿ ಉಳಿದವರೆಲ್ಲರೂ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು

ಗಾಯಗೊಂಡಿರುವ ನಾಯಿ ಮರಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಲಿಸುತ್ತಿದ್ದ ಬಸ್​ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ: ಸಾವು

ಧಾರವಾಡ: ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಓರ್ವ ಪ್ರಯಾಣಿಕರಿಗೆ ಮಾರ್ಗ ಮಧ್ಯದಲ್ಲಿಯೇ ಹೃದಯಾಘಾತ ಸಂಭವಿರುವಂತಹ ಘಟನೆ ನಡೆದಿದೆ. ತಕ್ಷಣವೇ ಬಸ್​ನ್ನು ಚಾಲಕ ಧಾರವಾಡ ಜಿಲ್ಲಾಸ್ಪತ್ರೆಗೆ ತಂದಿದ್ದಾರೆ. ಆದರೆ ಅಷ್ಟರಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಶೀಲ ಶಂಕಿಸಿ ಹೆಂಡತಿಯ ಕೊಲೆ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ದಾಂಡೇಲಿಯಿಂದ ಧಾರವಾಡಕ್ಕೆ ಬಸ್​ ಆಗಮಿಸುತ್ತಿತ್ತು. ಹಳಿಯಾಳದಲ್ಲಿ ಬಸ್ ಏರಿದ್ದ ವ್ಯಕ್ತಿಗೆ ಹಳಿಯಾಳ-ಧಾರವಾಡ ಮಾರ್ಗ ಮಧ್ಯದಲ್ಲಿ ಹೃದಯಾಘಾತ ಸಂಭವಿಸಿದೆ. ವ್ಯಕ್ತಿಯ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲಿ ಹೀಗಾಗಿ ಮೃತನ ಹೆಸರು ತಿಳಿದು ಬಂದಿಲ್ಲ. ಜಿಲ್ಲಾಸ್ಪತ್ರೆಗೆ ಪೊಲೀಸರು ಭೇಟಿ ನೀಡಿದ್ದು, ಮೃತರ ಸಂಬಂಧಿಗಳ ಪತ್ತೆ ಕಾರ್ಯ ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:33 pm, Tue, 17 September 24

ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ