AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಕೆ ಆರೋಪ: ಅನುಮಾನಾಸ್ಪದ ಯುವಕ ಪೊಲೀಸ್ ವಶಕ್ಕೆ

ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಕೆ ಆರೋಪ: ಅನುಮಾನಾಸ್ಪದ ಯುವಕ ಪೊಲೀಸ್ ವಶಕ್ಕೆ
ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮರಾ ಅಳವಡಿಕೆ ಆರೋಪ: ಅನುಮಾನಾಸ್ಪದ ಯುವಕ ಪೊಲೀಸ್ ವಶಕ್ಕೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Sep 20, 2024 | 4:10 PM

Share

ರಾಮನಗರ, ಸೆಪ್ಟೆಂಬರ್​ 20: ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಶೌಚಾಲಯದಲ್ಲಿ (washroom) ಮೊಬೈಲ್ ಇರಿಸಿ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಕೇಳಿಬಂದಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಯುವಕನನ್ನು ಬಂಧಿಸುವಂತೆ ಆಗ್ರಹಿಸಲಾಗಿದೆ. ಸ್ಥಳಕ್ಕೆ ಕುಂಬಳಗೋಡು ಪೊಲೀಸರು ಭೇಟಿ ನೀಡಿದ್ದು, ಅನುಮಾನಾಸ್ಪದ ಯುವಕ ಮತ್ತು ಆತನ ಮೊಬೈಲ್​ನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಆರೋಪ ಕೇಳಿಬರುತ್ತಿದ್ದಂತೆ ವಿದ್ಯಾರ್ಥಿನಿಯರಿಂದ ಗಲಾಟೆ ಮಾಡಲಾಗಿದೆ. ಯುವಕನನ್ನು ಬಂಧಿಸುವಂತೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ನ್ಯಾಯ ಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸದ್ಯ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದಾರೆ.

ಸರಗಳ್ಳತನ ಮಾಡಲು ಬಂದ ಅಪರಿಚಿತ ಕಿಡಿಗೇಡಿಗಳಿಂದ ಮಹಿಳೆಗೆ ಲೈಂಗಿಕ ದೌರ್ಜನ್ಯ‌ 

ದೇವನಹಳ್ಳಿ: ಮಧ್ಯರಾತ್ರಿ ಶೌಚಾಲಯಕ್ಕೆ ಅಂತ ಹೊರಗಡೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೆರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸರಗಳ್ಳತನ ಮಾಡಲು ಬಂದ ಅಪರಿಚಿತ ಕಿಡಿಗೇಡಿಗಳು ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ, ಮೌಲ್ವಿ ಬಂಧನ

ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನ ಇಬ್ಬರು ಅಪರಿಚಿತರು ಎಳೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆ. ಮಹಿಳೆಯನ್ನು ಪ್ರಜ್ನೆ ತಪ್ಪಿಸಿ ಬಟ್ಟೆಗಳನ್ನ ಹರಿದು ಹಾಕಿ ಅಟ್ಟಹಾಸ ಮೆರೆದಿದ್ದಾರೆ. ನಿತ್ಯ ಮಧ್ಯರಾತ್ರಿ ಮನೆಗಳ ಬಳಿ ಬಂದು ಕಿಡಿಗೇಡಿಗಳು ಬಾಗಿಲು ಬಡಿಯುತ್ತಿದ್ದಾರೆ. ಹೊರಗಡೆ ಬರುವ ಮಹಿಳೆಯರ ಬಳಿ ಸರಗಳ್ಳತನ ಮಾಡಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಲಾಗುತ್ತಿದೆ.

ಕಳೆದ ರಾತ್ರಿಯು ಇದೇ ರೀತಿ ಮನೆ ಬಾಗಿಲು ಬಡಿದು ಸರಗಳ್ಳತನಕ್ಕೆ ಯತ್ನಿಸಲಾಗಿದೆ. ಈ ವೇಳೆ ಕಿಡಿಗೇಡಿಗಳನ್ನ ಗ್ರಾಮಸ್ಥರು ಹಿಡಿಯಲು ಮುಂದಾದಾಗ ಬೈಕ್ ಬಿಟ್ಟು ಪರಾರಿ ಆಗಿದ್ದಾರೆ. ಇದೀಗ ಸೆರೆ ಸಿಕ್ಕ ಬೈಕ್ ಮೂಲಕ ಕಿಡಿಗೇಡಿಗಳನ್ನ ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಮದುವೆ ಮಾಡಿಸೋದಾಗಿ ವಂಚನೆ, ಲೈಂಗಿಕ ಕಿರುಕುಳ ಆರೋಪ; ಕಟ್ಟುಕಥೆ ಎಂದ ಸದಸ್ಯ

ಗ್ರಾಮದಲ್ಲಿ ಬೀದಿ ದೀಪಗಳಿಲ್ಲದ ಕಾರಣ ಅಪರಿಚಿತರಿಂದ ದುಷ್ಕ್ರತ್ಯ ಅಂತ ಆಕ್ರೋಶ ವ್ಯಕ್ತವಾಗಿದೆ. ಗ್ರಾಮದ ಮಹಿಳೆಯರು, ಯುವತಿಯರಿಗೆ ರಕ್ಷಣೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:56 pm, Fri, 20 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್