AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ರಸ್ತೆ ಕಾಮಗಾರಿ ವಿಚಾರದಲ್ಲಿನ ರಾಜಕೀಯ ಜಟಾಪಟಿಗೆ ಹತ್ತಾರು ಹಳ್ಳಿಯ ಜನರಿಗೆ ತೊಂದರೆ

ಚುನಾವಣೆಗೆ ಇನ್ನು ಕೆಲವು ತಿಂಗಳು ಬಾಕಿ ಇರುವಾಗ ಬೊಂಬೆನಗರಿ ಚನ್ನಪಟ್ಟಣದಲ್ಲಿ ಚುನಾವಣಾ ಕಾವು ಜೋರಾಗಿದೆ. ಪ್ರತಿಯೊಂದು ವಿಚಾರಕ್ಕೂ ರಾಜಕೀಯ ಬೆರೆಯುತ್ತಿದೆ.

ರಾಮನಗರ: ರಸ್ತೆ ಕಾಮಗಾರಿ ವಿಚಾರದಲ್ಲಿನ ರಾಜಕೀಯ ಜಟಾಪಟಿಗೆ ಹತ್ತಾರು ಹಳ್ಳಿಯ ಜನರಿಗೆ ತೊಂದರೆ
ಕಾಮಗಾರಿ ವಿಚಾರದಲ್ಲಿ ಎಚ್​ಡಿಕೆ ಮತ್ತು ಯೋಗೇಶ್ವರ್ ನಡುವೆ ಜಟಾಪಟಿ
TV9 Web
| Edited By: |

Updated on: Nov 12, 2022 | 1:45 PM

Share

ರಾಮನಗರ: ಚುನಾವಣೆಗೆ ಇನ್ನು ಕೆಲವು ತಿಂಗಳು ಬಾಕಿ ಇರುವಾಗ ಬೊಂಬೆನಗರಿ ಚನ್ನಪಟ್ಟಣದಲ್ಲಿ ಚುನಾವಣಾ ಕಾವು ಜೋರಾಗಿದ್ದು, ರಸ್ತೆ ಕಾಮಗಾರಿ ವಿಚಾರದಲ್ಲೂ ರಾಜಕೀಯ ಜಟಾಪಟಿ ಏರ್ಪಟ್ಟಿದೆ. ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ (H.D.Kumara Swamy) ಮತ್ತು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ (C.P.Yogeshwar) ನಡುವಿನ ಈ ಜಟಾಪಟಿಯಲ್ಲಿ ಕಾಮಗಾರಿ ಆರಂಭವಾಗದೇ ನಿಂತಿದೆ. ರಸ್ತೆ ತುಂಬೆಲ್ಲಾ ಹೊಂಡ ಗುಂಡಿಗಳು ಬಿದ್ದಿದ್ದು, ವಾಹನ ಚಲಾಯಿಸಲು ಸವಾರರು ಹರಸಾಹಸ ಪಡುತ್ತಿದ್ದಾರೆ. ರಸ್ತೆಗುಂಡಿಗಳಿಂದಾಗಿ ಕೆಲವರು ಬಿದ್ದು ಮೈಕೈಗಳಿಗೆ ಗಾಯ ಮಾಡಿಕೊಂಡಿದ್ದಾರೆ. ಇದು ಹತ್ತಾರು ಗ್ರಾಮಗಳ ಜನರನ್ನು ಕೆರಳಿಸಿದ್ದು, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಹತ್ತಾರು ಹಳ್ಳಿಗಳು, ಸುಂದರವಾದ ಕಣ್ವ ಜಲಾಶಯವನ್ನ ಸಂಪರ್ಕ ಕಲ್ಪಿಸುವ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ತುಂಬೆಲ್ಲ ಸಾಲು ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿ ಒಂದು ಲಾರಿ ಹೋಯಿತು ಅಂದರೆ ತುಂಬೆಲ್ಲಾ ದೂಳು ಆವರಿಸಿಕೊಳ್ಳುತ್ತದೆ. ಇದರಿಂದಾಗಿ ಪ್ರತಿನಿತ್ಯ ವಾಹನ ಸವಾರರು ಪರದಾಡುವಂತೆ ಆಗಿದೆ. ಇನ್ನು ರಾತ್ರಿ ವೇಳೆ ಗ್ರಾಮಸ್ಥರು ತುರ್ತು ಸಂದರ್ಭದಲ್ಲಿ ಪ್ರಯಾಣಿಸಬೇಕು ಎಂದರೆ ಸಾಕಷ್ಟು ಹರಸಾಹಸ ಪಡಬೇಕು. ಎಷ್ಟೋ ಜನ ರಾತ್ರಿ ಆಯಾತಪ್ಪಿ ಬಿದ್ದು ಗಾಯಗೊಂಡಿದ್ದೂ ಇದೆ.

ಚನ್ನಪಟ್ಟಣ ತಾಲೂಕಿನ ಕೆಂಗಲ್ ಗ್ರಾಮದಿಂದ ದಶವಾರ ಗ್ರಾಮದವರೆಗೂ ಸಂಪರ್ಕ ಕಲ್ಪಿಸುವ ಈ ರಸ್ತೆ ಹದಗೆಟ್ಟು ಐದು ವರ್ಷಗಳೇ ಆಗಿವೆ. ರಸ್ತೆ ಅಭಿವೃದ್ಧಿಗಾಗಿ ಈಗಾಗಲೇ ಸರ್ಕಾರದಿಂದ ಹದಿನೈದು ಕೋಟಿ ಅನುದಾನ ಸಹಾ ಬಿಡುಗಡೆಯಾಗಿದೆ. ಆದರೆ ಚನ್ನಪಟ್ಟಣ ತಾಲೂಕಿನಲ್ಲಿ ಪ್ರತಿಯೊಂದು ಕಾಮಗಾರಿ ವಿಚಾರವಾಗಿ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ ಏರ್ಪಟ್ಟು ಕಾಮಗಾರಿಗಳು ನಡೆಯುತ್ತಿಲ್ಲ. ಹೀಗಾಗಿ ಅನುದಾನ ಬಿಡುಗಡೆಯಾಗಿದರೂ ಕಾಮಗಾರಿ ಆರಂಭಿಸುತ್ತಿಲ್ಲ.

ಇಬ್ಬರ ನಡುವಿನ ಜಗಳದಲ್ಲಿ ಜನಸಾಮಾನ್ಯರು ಮಾತ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿಮ್ಮಿಬ್ಬರ ಗಲಾಟೆ ನಡುವೆ ಜನ ಸಾಮಾನ್ಯರಿಗೆ ತೊಂದರೆ ಕೊಡಬೇಡಿ. ಶೀಘ್ರವೇ ಕಾಮಗಾರಿ ಆರಂಭಿಸಿ ಎಂದು ಜನರು ಒತ್ತಾಯ ಮಾಡುತ್ತಿದ್ದಾರೆ. ಒಟ್ಟಾರೆ ಇಬ್ಬರು ಮದಗಜಗಳ ಕಾಳಗದಲ್ಲಿ ಕಾಮಗಾರಿಗೆ ವಿಘ್ನ ಏರ್ಪಟ್ಟಿದೆ. ಇದರಿಂದ ಜನಸಾಮಾನ್ಯರು ಪ್ರತಿನಿತ್ಯ ನರಕಯಾತನೆ ಅನುಭಿಸುವಂತಾಗಿದೆ. ಇನ್ನಾದರೂ ಜನಪ್ರತಿನಿಧಿಗಳು ತಮ್ಮ ರಾಜಕೀಯವನ್ನು ಬದಿಗಿಟ್ಟು ಜನಸಾಮಾನ್ಯರ ಸಮಸ್ಯೆಯನ್ನು ಸರಿಪಡಿಸುವತ್ತ ಗಮನಹರಿಸಬೇಕಾಗಿದೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್