ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್ ಬಳಕೆ; ಬಸ್ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಕುಣಿಗಲ್ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.
ರಾಮನಗರ, ಮಾ.1: ಕುಣಿಗಲ್ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ (Congress Convention) ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ (2nd PU Exam) ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.
ಕುಣಿಗಲ್ಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋನಿಂದ ಬಸ್ಗಳನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಸಾರಿಗೆ ಅಧಿಕಾರಿಗಳು ನಿನ್ನೆ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದ ಬಸ್ಗಳನ್ನು ರಾತ್ರೋರಾತ್ರಿ ಘಟಕಕ್ಕೆ ವಾಪಸ್ ಕರೆಸಿಕೊಂಡಿದ್ದಾರೆ. ಸಮಾವೇಶಕ್ಕೆ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಯಿಂದ 300ಕ್ಕೂ ಅಧಿಕ ಬಸ್ಗಳನ್ನ ಒಪ್ಪಂದದ ಮೇರೆಗೆ ಸರ್ಕಾರ ಪಡೆದುಕೊಂಡಿದೆ.
ಇದನ್ನೂ ಓದಿ: 2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್
ಇತ್ತ ಪರೀಕ್ಷೆ ಸಮಯದಲ್ಲಿ ಬಸ್ಗಳಲಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ