ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ

ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ
ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ
Edited By:

Updated on: Nov 09, 2024 | 7:44 PM

ರಾಮನಗರ, ನವೆಂಬರ್​ 09: ಲಾರಿ ಡಿಕ್ಕಿಯಾಗಿ (Collision) ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ನಡೆದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರಿನಲ್ಲೇ ಮೃತದೇಹಗಳು ಛಿದ್ರವಾಗಿವೆ. ಮೃತರ ಗುರುತು ಪತ್ತೆ ಆಗಿಲ್ಲ. ಘಟನಾ ಸ್ಥಳಕ್ಕೆ ಕನಕಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಂಗಮದಿಂದ ಕನಕಪುರ ಕಡೆಯಿಂದ ಕಾರು ಬಂದಿದ್ದು, ಸಂಗಮದ ಕಡೆ ಸರಕು ಲಾರಿ ತೆರಳುತ್ತಿತ್ತು. ಈ ವೇಳೆ ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ಮೃತದೇಹಗಳು ಶಿಫ್ಟ್ ಮಾಡಲಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ಒಂಟಿ ಮಹಿಳೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೊಮ್ಮನಹಳ್ಳಿಯ ಹೊಂಗಸಂದ್ರದ ಮನೆಯೊಂದರಲ್ಲಿ ನಡೆದಿದೆ. ಗೋಡೆಗೆ ತಲೆ ಡಿಕ್ಕಿ ಹೊಡೆಸಿ ಜಯಮ್ಮ(45) ಕೊಲೆ ಶಂಕೆ. ಮರಣೋತ್ತರ ಪರೀಕ್ಷೆಗಾಗಿ ಸೇಂಟ್​ಜಾನ್ಸ್ ಆಸ್ಪತ್ರೆಗೆ ಶವ ಶಿಫ್ಟ್ ಮಾಡಲಾಗಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಮ್ಮನ ಪುತ್ರ ಮತ್ತು ಪರಿಚಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ಪತ್ನಿ, ಮಗನನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಪ್ರತಿಕ್ರಿಯಿಸಿದ್ದು, ಹಣದ ವಿಚಾರವಾಗಿ ಜಯಮ್ಮ ಜತೆ ಪುತ್ರ ಗಲಾಟೆ ಮಾಡಿಕೊಳ್ಳುತ್ತಿದ್ದ. ಜಯಮ್ಮ ವಾಸವಿದ್ದ ಮನೆಯನ್ನು 30 ಲಕ್ಷಕ್ಕೆ ಮಾರಾಟ ಮಾಡಿದ್ದರು. ರಿಯಲ್ ಎಸ್ಟೇಟ್​ನಲ್ಲಿ ಹೂಡಿಕೆ ಮಾಡಲು ಪುತ್ರ ಹಣ ಕೇಳಿದ್ದ. ಮನೆ ಮಾರಿದ್ದ ಹಣವನ್ನು ಪುತ್ರನಿಗೆ ನೀಡಿಲ್ಲವೆಂಬ ಆರೋಪವಿದೆ. ಹೀಗಾಗಿ ಜಯಮ್ಮನ ಪುತ್ರನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ ಎಂದಿದ್ದಾರೆ.

ಜಯಮ್ಮನ ಬಳಿ ಹಣ ಇರುವುದನ್ನು ನೋಡಿ ಪರಿಚಯ ವ್ಯಕ್ತಿ ಸ್ನೇಹ ಬೆಳೆಸಿದ್ದ. ನಿನ್ನೆ ರಾತ್ರಿ ಆತ ಮನೆಗೆ ಬಂದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದ ಎಂದಿದ್ದಾನೆ. ಹತ್ಯೆಯಾದ ಮಹಿಳೆಗೆ ಪರಿಚಯವಾಗಿದ್ದ ವ್ಯಕ್ತಿ ವಶಕ್ಕೆ ಪಡೆದಿದ್ದೇವೆ. ವಿಚಾರಣೆ ವೇಳೆ ತಾನೇ ಕೊಂದಿದ್ದಾಗಿ ವ್ಯಕ್ತಿ ಹೇಳಿಕೆ ನೀಡಿದ್ದಾನೆ. ಆದರೆ ಮರಣೋತ್ತರ ಪರೀಕ್ಷೆ ನಂತರ ಕೊಲೆ ವಿಚಾರ ತಿಳಿಯಲಿದೆ. ಯಾವ ಕಾರಣಕ್ಕೆ ಯಾರು ಕೊಂದಿದ್ದಾರೆಂದು ಸ್ಪಷ್ಟವಾಗಿ ತಿಳಿಯುತ್ತೆ.  ಬೊಮ್ಮನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us