ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯಾರು ಬರಬೇಡಿ ಹುಷಾರ್​.! ಫೇಸ್​ಬುಕ್​​ನಲ್ಲಿ ಜನರನ್ನು ಭಯಗೊಳಿಸುವ ಪೋಸ್ಟ್​​

ರಾತ್ರಿ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯಾರು ಬರಬೇಡಿ. ಹೆದ್ದಾರಿಯಲ್ಲಿ ದರೋಡೆಕೋರರಿದ್ದಾರೆ ಎಂದು ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ.

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಯಾರು ಬರಬೇಡಿ ಹುಷಾರ್​.! ಫೇಸ್​ಬುಕ್​​ನಲ್ಲಿ ಜನರನ್ನು ಭಯಗೊಳಿಸುವ ಪೋಸ್ಟ್​​
ವೈರಲ್​ ಆದ ಫೇಸ್​ಬುಕ್​ ಪೋಸ್ಟ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ವಿವೇಕ ಬಿರಾದಾರ

Updated on: Aug 11, 2023 | 2:17 PM

ರಾಮನಗರ: ರಾತ್ರಿ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysore National Highway) ಯಾರು ಬರಬೇಡಿ. ಹೆದ್ದಾರಿಯಲ್ಲಿ ದರೋಡೆಕೋರರಿದ್ದಾರೆ ಎಂದು ಸಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಮಾಡಲಾಗಿದೆ. ಅಮಿತ್ ಗೌಡ ಎಂಬುವರ ಫೇಸ್​ಬುಕ್ (Facebook) ಅಕೌಂಟ್​ನಿಂದ ಫೋಸ್ಟ್​​ ಮಾಡಲಾಗಿದೆ. ವಾಹನ ಕೆಟ್ಟು ನಿಂತ ಸಮಯದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ದರೋಡೆ ಮಾಡುತ್ತಿದ್ದಾರೆ. ಚಾಕು, ಕತ್ತಿ ತೋರಿಸಿ ಹಣ, ಚಿನ್ನಾಭರಣ ದರೋಡೆ ಮಾಡುತ್ತಿದ್ದಾರೆ ಎಂದು ಪೋಸ್ಟ್​​ ಹಾಕಲಾಗಿದೆ.

ಶ್ರೀರಂಗಪಟ್ಟಣದಿಂದ ಕೇಂಗೇರಿವರೆಗೂ ಯಾವುದೇ ಅಂಗಡಿ, ಕಟ್ಟಡವಿಲ್ಲ. ಸಹಾಯಕ್ಕಾಗಿ ಕಿರುಚಾಡಿದ್ರೂ ಯಾರು ಬರುವುದಿಲ್ಲ. ಹೆದ್ದಾರಿಯಲ್ಲಿ ರಾತ್ರಿ ವೇಳೆ ಮೊಳೆ ಬಡಿದಿರುವ ಮಣೆಯನ್ನು ರಸ್ತೆ ಮೇಲೆ ಹಾಕಿ, ವಾಹನ ಪಂಚರ್​ ಅಗುವಂತೆ ಮಾಡಿ ದರೋಡೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ರಸ್ತೆ ಎಕ್ಸಪ್ರೆಸ್​ ವೇ ಅಲ್ಲ ಪ್ರವೇಶ ನಿಯಂತ್ರಿತ ಹೆದ್ದಾರಿ: ಎನ್​ಹೆಚ್​ಎಐ

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಉಡಾಫೆ ಉತ್ತರ ನೀಡುತ್ತಾರೆ. ಪ್ರತಿನಿತ್ಯ ಕಾರು, ಲಾರಿ ದರೋಡೆ ನಡೆಯುತ್ತಿವೆ. ಆದರೆ ಸತ್ಯ ಯಾರಿಗೂ ಗೊತ್ತಿಲ್ಲ. ಈಗಾಗಿ ಯಾರು ಹೆದ್ದಾರಿಯಲ್ಲಿ ವಾಹನ ನಿಲ್ಲಿಸಿ ಮಲಗಬೇಡಿ. ದರೋಡೆ, ಮಾರಣಾಂತಿಕ ಹಿಂಸೆಗೆ ಒಳಗಾಗಬೇಡಿ ಎಂದಯ ಹೆದ್ದಾರಿ ಬಗ್ಗೆ ಭಯ ಹುಟ್ಟಿಸುವ ರೀತಿಯಲ್ಲಿ ಫೋಸ್ಟ್​ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಸ್ಟ್ ಹಾಕಿರುವ ವ್ಯಕ್ತಿ‌ಗಾಗಿ ರಾಮನಗರ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us