ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ

ರಾಮನಗರ ಜಿಲ್ಲೆಯ ಕನಕಪುರ(Kanakapura) ತಾಲೂಕಿನ ಹೊರವಲಯದ ಬನ್ನಿಮುಕೋಡ್ಲು ಬಳಿ ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆ(wild elephant)ಗೆ ಬಲಿಯಾದ ಘಟನೆ ನಡೆದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ
ಮೃತ ವ್ಯಕ್ತಿ ಚಂದ್ರಣ್ಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 2:41 PM

ರಾಮನಗರ, ಡಿ.27: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆ(wild elephant)ಗೆ ಬಲಿಯಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ(Kanakapura) ತಾಲೂಕಿನ ಹೊರವಲಯದ ಬನ್ನಿಮುಕೋಡ್ಲು ಬಳಿ ನಡೆದಿದೆ. ಚಂದ್ರಣ್ಣ(55) ಮೃತ ವ್ಯಕ್ತಿ. ಕಳೆದ ಎರಡು ದಿನದ ಹಿಂದೆ ಅರಣ್ಯ ಪ್ರದೇಶಕ್ಕೆ‌‌ ನುಗ್ಗಿದ್ದ ಕಾಡಾನೆಗಳನ್ನು ಪಳಗಿಸುತ್ತೇನೆ ಎಂದು ಬನ್ನೇರುಘಟ್ಟ ಅರಣ್ಯಕ್ಕೆ ಹೋಗಿದ್ದ.

ಆದರೆ, ಎರಡು ದಿನಗಳಾದರೂ ಚಂದ್ರಣ್ಣ ಮನೆಗೆ ವಾಪಾಸ್ ಆಗಿರಲಿಲ್ಲ. ಈ ಹಿನ್ನಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಡಿದಾಗ  ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಶವಪತ್ತೆಯಾಗಿದ್ದು, ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಕಾಡಾನೆ ಸ್ಥಳಾಂತರ ಕಾರ್ಯಚರಣೆ ವೇಳೆ ಆನೆ ದಾಳಿಗೆ ETF ಸಿಬ್ಬಂದಿ ಬಲಿ, DRFOಗೆ ಗಂಭೀರ ಗಾಯ

ಹೆಚ್ಚಿದ ಹುಚ್ಚು ಮಂಗನ ಹಾವಳಿ; 30ಕ್ಕೂ ಅಧಿಕ ಜಾನುವಾರಗಳಿಗೆ ಕಚ್ಚಿದ ಕೋತಿಗಳು

ಹಾವೇರಿ: ಜಿಲ್ಲೆಯ ಮಾಸನಕಟ್ಟಿ ಗ್ರಾಮದಲ್ಲಿ ಒಂದು ತಿಂಗಳಿಂದ ಹುಚ್ಚು ಮಂಗಗಳ ಹಾವಳಿ ಹೆಚ್ಚಾಗಿದ್ದು, 30ಕ್ಕೂ ಅಧಿಕ ಜಾನುವಾರಗಳಿಗೆ ಕಚ್ಚಿ ಗಾಯಗೊಳಿಸಿವೆ. ಮಂಗನ ಭಯಕ್ಕೆ ವಿದ್ಯಾರ್ಥಿಗಳು ಶಾಲೆಗೆ ಹೋಗುವುದನ್ನೇ ಬಿಟ್ಟಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಜಾನುವಾರುಗಳಿಗೆ ಗಾಯವಾದರೂ, ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಕೈ ಕಟ್ಟಿ ಕುಳಿತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Wed, 27 December 23

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us