AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ; ಇಬ್ಬರ ಸಾವು

ಸೋಮವಾರ ಬೆಳಂಬೆಳಿಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ರಾಮನಗರ: ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ; ಇಬ್ಬರ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 13, 2023 | 9:52 AM

Share

ರಾಮನಗರ ನ.13: ಕೆಎಸ್​ಆರ್​ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮನಕರೆ ಏರಿ ಮೇಲೆ ನಡೆದಿದೆ. ಸಿದ್ದಪ್ಪ (65), ಅರುಣ (23) ಮೃತ ದುರ್ದೈವಿಗಳು. ತಿಟ್ಟಮಾರನಹಳ್ಳಿಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಮೃತ ದೇಹಗಳು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಸರಣಿ ಅಪಘಾತ; ಮೂವರು ಬೈಕ್​ ಸವಾರರಿಗೆ ಗಾಯ

ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ​ತಾಲೂಕಿನ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಕಾಳೇನ ಅಗ್ರಹಾರದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ಭಯಾನಕ ದೃಶ್ಯ ಮತ್ತೊಂದು ಕಾರಿನ ಡ್ಯಾಶ್​ಬೋಡ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ 3 ಪ್ರತ್ಯೇಕ ಅಪಘಾತ: ಒಟ್ಟು ನಾಲ್ವರು ಸಾವು

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಾದ ಕಿರಣ್​, ಜಸ್ಮಿತಾ ಹಾಗೂ ಬಸಂತ್ ಕುಮಾರ್ ಎಂಬುವರಿಗೆ ಗಾಯಗಳಾಗಿವೆ. ಅಭಿಷೇಕ್ ಅಗರವಾಲ್ ಕಾರು ಚಾಲಕ ಎಂದು ತಿಳಿದುಬಂದಿದೆ. ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಹಾಗೂ ಕ್ಯಾಂಟರ್ ನಡುವೆ ಅಪಘಾತ, ಸವಾರ ಸ್ಥಳದಲ್ಲೇ ಸಾವು

ತುಮಕೂರು: ಮಧುಗಿರಿ ತಾಲೂಕಿನ ಬಣವೇನಹಳ್ಳಿ ಬಳಿ ಬೈಕ್​ಗೆ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ಮೂಲದ ಹಾಲಪ್ಪನಹಳ್ಳಿ ನಿವಾಸಿ ಮುನಿರಾಜು (26) ಮೃತದುರ್ದೈವಿ. ಹಿಂಬದಿ ಸವಾರನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾಂಟರ್ ತುಮಕೂರು ಕಡೆಯಿಂದ ಮಧುಗಿರಿ ಪಟ್ಟಣಕ್ಕೆ ಹೋಗುತ್ತಿತ್ತು. ಬೈಕ್​ ಮಧುಗಿರಿ ಕಡೆಯಿಂದ ಕೊರಟಗೆರೆ ಕಡೆ ಬರುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್​​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್