ರಾಮನಗರ ನ.13: ಕೆಎಸ್ಆರ್ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮನಕರೆ ಏರಿ ಮೇಲೆ ನಡೆದಿದೆ. ಸಿದ್ದಪ್ಪ (65), ಅರುಣ (23) ಮೃತ ದುರ್ದೈವಿಗಳು. ತಿಟ್ಟಮಾರನಹಳ್ಳಿಯಿಂದ ಚನ್ನಪಟ್ಟಣ ಕಡೆಗೆ ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಮೃತ ದೇಹಗಳು ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ್ದು, ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬೆಂಗಳೂರು-ಬನ್ನೇರುಘಟ್ಟ ಮುಖ್ಯರಸ್ತೆಯ ಕಾಳೇನ ಅಗ್ರಹಾರದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ಭಯಾನಕ ದೃಶ್ಯ ಮತ್ತೊಂದು ಕಾರಿನ ಡ್ಯಾಶ್ಬೋಡ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ 3 ಪ್ರತ್ಯೇಕ ಅಪಘಾತ: ಒಟ್ಟು ನಾಲ್ವರು ಸಾವು
ಡಿಕ್ಕಿಯ ರಭಸಕ್ಕೆ ಬೈಕ್ ಸವಾರರಾದ ಕಿರಣ್, ಜಸ್ಮಿತಾ ಹಾಗೂ ಬಸಂತ್ ಕುಮಾರ್ ಎಂಬುವರಿಗೆ ಗಾಯಗಳಾಗಿವೆ. ಅಭಿಷೇಕ್ ಅಗರವಾಲ್ ಕಾರು ಚಾಲಕ ಎಂದು ತಿಳಿದುಬಂದಿದೆ. ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ಮಧುಗಿರಿ ತಾಲೂಕಿನ ಬಣವೇನಹಳ್ಳಿ ಬಳಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ಮೂಲದ ಹಾಲಪ್ಪನಹಳ್ಳಿ ನಿವಾಸಿ ಮುನಿರಾಜು (26) ಮೃತದುರ್ದೈವಿ. ಹಿಂಬದಿ ಸವಾರನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾಂಟರ್ ತುಮಕೂರು ಕಡೆಯಿಂದ ಮಧುಗಿರಿ ಪಟ್ಟಣಕ್ಕೆ ಹೋಗುತ್ತಿತ್ತು. ಬೈಕ್ ಮಧುಗಿರಿ ಕಡೆಯಿಂದ ಕೊರಟಗೆರೆ ಕಡೆ ಬರುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ