AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್​​​​ ನ್ಯೂಸ್​​​ ಸಿಗುವ ಸಾಧ್ಯತೆ: ಗೌರವ ಧನ ಹೆಚ್ಚಳಕ್ಕೆ ಪ್ರಸ್ತಾವನೆ

ರಾಮನಗರದಲ್ಲಿ ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಒತ್ತಡ ಹೆಚ್ಚಿದೆ. ಸಂಸದ ಡಾ. ಸಿ.ಎನ್. ಮಂಜುನಾಥ್ ₹1,500 ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ, ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಬೇಡಿಕೆಗೆ ವೈಜ್ಞಾನಿಕ ಆಧಾರವಿಲ್ಲ ಎಂದರು. STRR ಭೂಸ್ವಾಧೀನ ಪರಿಹಾರ ವಿಳಂಬದ ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವುದಾಗಿಯೂ ಅವರು ತಿಳಿಸಿದ್ದಾರೆ.

ಕೇಂದ್ರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್​​​​ ನ್ಯೂಸ್​​​ ಸಿಗುವ ಸಾಧ್ಯತೆ: ಗೌರವ ಧನ ಹೆಚ್ಚಳಕ್ಕೆ ಪ್ರಸ್ತಾವನೆ
ಡಾ.ಸಿ ಮಂಜುನಾಥ್, ನರೇಂದ್ರ ಮೋದಿ Image Credit source: Tv9 kannada
ಪ್ರಶಾಂತ್​ ಬಿ.
| Edited By: |

Updated on: Nov 26, 2026 | 8:21 AM

Share

ರಾಮನಗರ, ನ.26: ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯ ಹೋರಾಟ ಜೋರಾಗಿದೆ. ರಾಜ್ಯ ಸರ್ಕಾರ ಅವರ ಗೌರವ ಧನ 15 ಸಾವಿರ ರೂ. ಹೆಚ್ಚಿಸುವಂತೆ ಒತ್ತಡ ಹೆಚ್ಚಾಗಿದೆ. ಇದರ ನಡುವೆ ಕೇಂದ್ರ ಸರ್ಕಾರವೂ ಹೊಸ ಭರವಸೆಯನ್ನು ಮೂಡಿಸಿದೆ. ಇದೀಗ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಿಸುವುದು ಅತ್ಯಂತ ಮುಖ್ಯವಾಗಿದ್ದು, ಅವರ ಬೇಡಿಕೆ ನ್ಯಾಯಸಮ್ಮತವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಗೌರವ ಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಒತ್ತಾಯಿಸಿದರು.

ಇದರ ಜತೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಗೌರವ ಧನ ಪ್ರಸ್ತಾವನೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಹಾಗೂ ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಯ ಭೂಸ್ವಾಧೀನ ಪರಿಹಾರ ವಿಳಂಬದ ಕುರಿತು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರ ಗೌರವ ಧನ 1,500 ರೂ. ಹೆಚ್ಚಳಕ್ಕೆ ಪ್ರಸ್ತಾವನೆ:

“ಪ್ರಸ್ತುತ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ 5,000 ರೂ., ಕೇಂದ್ರ ಸರ್ಕಾರದಿಂದ 2,000 ರೂ. ಹಾಗೂ 1,000 ರೂ. ಕ್ಯಾಪಿಂಗ್ ಸಿಗುತ್ತಿದೆ. ಗೌರವ ಧನ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರದ ನ್ಯಾಷನಲ್ ಹೆಲ್ತ್ ಮಿಷನ್ (NHM) ಹೆಚ್ಚುವರಿ ಕಾರ್ಯದರ್ಶಿ ಜೊತೆ ಮಾತನಾಡಿದ್ದೇನೆ. ಗೌರವ ಧನವನ್ನು 1,500 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಕಳುಹಿಸಲಾಗಿದೆ. ಇದು ಆರೋಗ್ಯ ಮತ್ತು ಹಣಕಾಸು ಇಲಾಖೆಗಳ ಪರಿಶೀಲನೆಗೆ ಹೋಗಲಿದ್ದು, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆಯಾಗಲಿದೆ” ಎಂದು ಡಾ. ಮಂಜುನಾಥ್ ಮಾಹಿತಿ ನೀಡಿದರು. ದೇಶಾದ್ಯಂತ ಆಶಾ ಕಾರ್ಯಕರ್ತೆಯರ ಗೌರವ ಧನ ₹1,500 ಹೆಚ್ಚಳ ಮಾಡಲು ಸುಮಾರು 2,500 ಕೋಟಿ ರೂ. ಅಗತ್ಯವಿದೆ. ಈ ಮೊತ್ತ ದೊಡ್ಡದಲ್ಲ, ಸರ್ಕಾರ ಅವರ ಬೇಡಿಕೆಯನ್ನು ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ವೈಜ್ಞಾನಿಕ ಆಧಾರದಲ್ಲಿಲ್ಲ:

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕುರಿತು ಪ್ರತಿಕ್ರಿಯಿಸಿದ ಸಂಸದರು, “ಅನುದಾನಕ್ಕಿಂತ ಯೋಜನೆಗಳ ಅನುಷ್ಠಾನ ಮುಖ್ಯ. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಇಲ್ಲದಿದ್ದಾಗ ಮತ್ತೊಂದು ರೀತಿ ಮಾತನಾಡುತ್ತಾರೆ. ಪ್ರತ್ಯೇಕ ರಾಜ್ಯ ಮಾಡಿದರೆ ಏನು ಅನುಕೂಲವಾಗುತ್ತದೆ? ಇದರಿಂದ ಸಂಪನ್ಮೂಲ ಕಡಿಮೆಯಾಗಲಿದ್ದು, ಅನುದಾನವೂ ಕಡಿಮೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ರಾಜ್ಯದ ಬೇಡಿಕೆ ವೈಜ್ಞಾನಿಕ ಮಾಹಿತಿಯ ಆಧಾರದಲ್ಲಿಲ್ಲ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ

STRR ಭೂಸ್ವಾಧೀನ ಪರಿಹಾರ: ಶೇ. 10ರಷ್ಟು ರೈತರಿಗೆ ಮಾತ್ರ ಪರಿಹಾರ; ಪ್ರಧಾನಿಗೆ ಪತ್ರ

ಎಸ್‌ಟಿಆರ್‌ಆರ್ ಯೋಜನೆಯ ಭೂಸ್ವಾಧೀನ ಪರಿಹಾರ ವಿಚಾರವಾಗಿ ಮಾತನಾಡಿದ ಡಾ. ಮಂಜುನಾಥ್, “2021ರಲ್ಲೇ ಜಮೀನು ಸ್ವಾಧೀನ ಪ್ರಕ್ರಿಯೆ ನಡೆದಿದೆ. ಆದರೆ ಇನ್ನೂ ಕೇವಲ ಶೇ. 10ರಷ್ಟು ರೈತರಿಗೆ ಮಾತ್ರ ಪರಿಹಾರ ನೀಡಲಾಗಿದೆ. ರೈತರಿಗೆ ತ್ವರಿತವಾಗಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ್ದು, ಪ್ರಧಾನಮಂತ್ರಿ ಅವರಿಗೂ ಪತ್ರ ಬರೆದಿದ್ದೇನೆ” ಎಂದು ತಿಳಿಸಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More