ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ

ರಾಮನಗರದ ಐತಿಹಾಸಿಕ ಚಾಮುಂಡಿ ಕರಗ ಉತ್ಸವಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ಸಮರ್ಪಣೆ ಮಾಡುತ್ತಿರುವ ಬಗ್ಗೆ ವಿವಾದ ಎದ್ದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದ್ದಾರೆ.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ
ರಾಮನಗರದ ಚಾಮುಂಡೇಶ್ವರಿ ಕರಗ ಉತ್ಸವದ ಸಾಂಸ್ಕೃತಿ ಕಾರ್ಯಕ್ರಮಕ್ಕೆ ಅಟ್ಟಿಕಾ ಗೋಲ್ಡ್​ ಕಂಪನಿಯಿಂದ ದೇಣಿಗೆ ಪಡೆದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನಿಡಿದ್ದಾರೆ
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on: Jul 02, 2023 | 4:01 PM

ರಾಮನಗರ: ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಉತ್ಸವವು (Chamandi Karaga Festival) ಜುಲೈ 4 ರಂದು ನಡೆಯಲಿದೆ. ಈ ಉತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ (Attica Gold Company) ದೇಣಿಗೆ ಸಂಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆರೋಪ ಎದಿರುಸುತ್ತಿರುವ ಕಂಪನಿ ಬಳಿಯಿಂದ ದೇಣಿಗೆ ಸಂಗ್ರಹ ಯಾಕೆ ಎಂದು ಪ್ರಶ್ನಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಇಕ್ಬಾಲ್ ಹುಸೇನ್, ಅಟ್ಟಿಕಾ ಗೋಲ್ಡ್ ಕಂಪನಿ ಜಾಹಿರಾತು ನೀಡಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಕ್ರಮ ವಹಿಸುತ್ತೇನೆ. ಇಡೀ ಕರಗ ಮಹೋತ್ಸವ ನಮ್ಮ ಖರ್ಚಿನಿಂದ ಆಗಲಿದೆ. ಪ್ರತಿಯೊಂದು ವೆಚ್ಚ ನಾವೇ ಭರಿಸಲಿದ್ದೇವೆ. ಕಾರ್ಯಕ್ರಮಕ್ಕೆ ನಟರು, ಕಲಾವಿದರು ಬರಲಿದ್ದಾರೆ ಎಂದರು.

ಇದನ್ನೂ ಓದಿ: KDP Meeting; ರಾಮನಗರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ, ಕನಕಪುರ ಶಾಸಕನಾಗಿ ಬಂದಿದ್ದೇನೆ: ಡಿಕೆ ಶಿವಕುಮಾರ್

ರಾಮನಗರದ ಮಿನಿ ದಸರಾ ಎಂದೇ ಕರೆಯಲಾಗುವ ಕಗರ ಮಹೋತ್ಸವ ಪ್ರಯುಕ್ತ ನಡೆಯುವ ಸಾಂಸ್ಕೃತಿ ಕಾರ್ಯಕ್ರಮದ ಆಯೋಜಕತ್ವದಲ್ಲಿ ರಾಜಕೀಯ ಬೆರೆತುಕೊಂಡಿದೆ. ಅದರಂತೆ ಕಳೆದ 2004 ರಿಂದ ಜೆಡಿಎಸ್​ ಈ ಕಾರ್ಯಕ್ರಮದ ಆಯೋಜಕತ್ವ ಮಾಡಿಕೊಂಡು ಬಂದಿದೆ. ಆದರೆ ಈ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದು, ಇದರಿಂದಾಗಿ ಕರಗ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜಕತ್ವ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಅಷ್ಟೇ ಅಲ್ಲದೆ, ಕಾರ್ಯಕ್ರಮ ಆಯೋಜಕತ್ವ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಟಾಪಟಿಯೂ ನಡೆದಿದೆ. ಹಲವು ವರ್ಷಗಳಿಂದ ನಾವೇ ಆಯೋಜಕತ್ವ ವಹಿಸಿದ್ದೇವೆ. ಈ ಬಾರಿಯೂ ನಮಗೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದ ಜೆಡಿಎಸ್ ಶಾಸಕರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ಕಾರ್ಯಕ್ರಮದ ಆಯೋಜಕತ್ವವನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ