ಮರ್ಯಾದೆಗೆ ಅಂಜಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ

ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರ್ಯಾದೆಗೆ ಅಂಜಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ
ಬಂಡೆಮಠದ ಬಸವಲಿಂಗ ಸ್ವಾಮೀಜಿ
Follow us
TV9 Web
| Updated By: ಆಯೇಷಾ ಬಾನು

Updated on:Oct 24, 2022 | 11:37 AM

ರಾಮನಗರ: ಮರ್ಯಾದೆಗೆ ಅಂಜಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್‌ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ ನೋಟ್​ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ.

ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.

ಸ್ವಾಮೀಜಿ ನಿಧನ ಹಿನ್ನೆಲೆ ಹಲವು ಮಠಾಧೀಶರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇನ್ನು ಡೆತ್ ನೋಟ್​ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಪೋಲಿಸರ ತನಿಖೆ ನಂತರ ಸತ್ಯ ಬಯಲಾಗಲಿದೆ. ಇದನ್ನೂ ಓದಿ: ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದ ಬಸವಲಿಂಗ ಸ್ವಾಮೀಜಿ

ಬಸವಲಿಂಗ ಸ್ವಾಮೀಜಿಯವರು ಚನ್ನಮಲ್ಲಯ್ಯ, ಪುಟ್ಟಗೌರಮ್ಮರ ಎಂಟನೇ ಪುತ್ರರಾಗಿದ್ದಾರು. ಶ್ರೀಗಳು ಸೇರಿದಂತೆ 5 ಮಂದಿ ಗಂಡು, 3 ಮಂದಿ ಹೆಣ್ಣು ಮಕ್ಕಳಿದ್ದಾರೆ. 1 ರಿಂದ 8 ನೇ ತರಗತಿಯವರೆಗೂ ಬಂಡೇಮಠದಲ್ಲೆ ವಿದ್ಯಾಭ್ಯಾಸ ಮಾಡಿದ ನಂತರ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಶ್ರೀಮಠದಲ್ಲೇ ವೇದ, ಉಪನಿಷತ್, ವಿದ್ವತ್ ವ್ಯಾಸಂಗ ಮಾಡಿದ್ದರು. ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ. ಬಂಡೆಮಠದಲ್ಲಿ ಮರಿಸ್ವಾಮಿಗಳಾಗಿ 2 ವರ್ಷದ ನಂತರ 25 ವರ್ಷಗಳ ಹಿಂದೆ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದರು.

ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ ಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಆಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ. ಕುದೂರು ಪೊಲೀಸ್‌ ಇನ್ಸ್ ಪೆಕ್ಟರ್ ಎಪಿ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಸದ್ಯ ನೆಲಮಂಗಲ ಶವಾಗಾರಕ್ಕೆ ಸ್ವಾಮೀಜಿ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಮಠದ ಆವರಣದಲ್ಲೇ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಶ್ರೀಗಳು ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿದ್ದರು. ಮಠದ ಕಟ್ಟಡಕ್ಕೆ ಸರ್ಕಾರದಿಂದ ಹಣ ಸಹ ಮಂಜೂರಾಗಿತ್ತು. ಇದೇ ಬುಧವಾರ 26 ರಂದು ಮಾಜಿ ಸಿಎಂ ಯಡಿಯೂರಪ್ಪನವರು ಗುದ್ದಲಿ ಪೂಜೆ ಮಾಡಬೇಕಿತ್ತು. ನೂತನ ಕಟ್ಟಡದ ಗುದ್ದಲಿ ಪೂಜೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಪರಮಶಿವಯ್ಯ ಬಿ.ಎಸ್ ತಿಳಿಸಿದರು.

Published On - 10:28 am, Mon, 24 October 22

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ