ಮಾಗಡಿ: ಬಂಡೆಮಠದ ಬಸವಲಿಂಗಶ್ರೀ ಶಿವಗಣಾರಾಧನೆ ಇಂದು; ಸಿದ್ದಗಂಗಾಶ್ರೀಗಳ ನೇತೃತ್ವ, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ
ಕಂಚುಗಲ್ ಬಂಡೆಮಠದ ಆವರಣದಲ್ಲೇ 11ನೇ ದಿನದ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ನಡೆದಿದ್ದು ಹಲವು ಶ್ರೀಗಳು ಭಾಗಿಯಾಗಲಿದ್ದಾರೆ. ಶಿವಗಣಾರಾಧನೆ ಅಂಗವಾಗಿ 1 ಸಾವಿರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀಗಳ (Bande Mutt Swamiji) 11ನೇ ದಿನದ ಕಾರ್ಯ ಇಂದು ನಡೆಯಲಿದೆ. ಸಿದ್ಧಗಂಗಾಶ್ರೀಗಳ ನೇತೃತ್ವದಲ್ಲಿ ಇಂದು ಶಿವಗಣಾರಾಧನೆ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದೆ. ಕಂಚುಗಲ್ ಬಂಡೆಮಠದ ಆವರಣದಲ್ಲೇ 11ನೇ ದಿನದ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ನಡೆದಿದ್ದು ಹಲವು ಶ್ರೀಗಳು ಭಾಗಿಯಾಗಲಿದ್ದಾರೆ. ಶಿವಗಣಾರಾಧನೆ ಅಂಗವಾಗಿ 1 ಸಾವಿರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಘಟನೆ ಹಿನ್ನೆಲೆ
ರಾಮನಗರ: ಮರ್ಯಾದೆಗೆ ಅಂಜಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ.
ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.
ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ; ಹನಿಟ್ರ್ಯಾಪ್ ಆರೋಪದಲ್ಲಿ ಯುವತಿ, ಕಣ್ಣೂರು ಮಠದ ಸ್ವಾಮೀಜಿ ಪೊಲೀಸರ ವಶಕ್ಕೆ
ಬಂಡೆಮಠದ ಬಸವಲಿಂಗ ಸ್ವಾಮೀಜಿ (Bande Mutt Swamiji) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಟ್ರ್ಯಾಪ್ (Honeytrap) ಮಾಡಿಸಿದ್ದ ಆರೋಪದ ಮೇಲೆ ಮಾಗಡಿ ತಾಲ್ಲೂಕು ಕಣ್ಣೂರು ಮಠದ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದಾಳೆ ಎಂಬ ಆರೋಪ ಹೊತ್ತ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಸುದೀರ್ಘ ವಿಚಾರಣೆ ನಡೆಯುತ್ತಿದ್ದು, ಮತ್ತಷ್ಟು ಜನರ ಹೆಸರು ಹಾಗೂ ಮಾಹಿತಿ ಹೊರಬರುವ ನಿರೀಕ್ಷೆಯಿದೆ.
Published On - 7:42 am, Thu, 3 November 22