ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ತಡರಾತ್ರಿ ಪ್ರಭಾವಿ ಮುಖಂಡನ ಜೊತೆ ಶ್ರೀಗಳ ಚರ್ಚೆ, ತನಿಖೆ ವೇಳೆ ಸ್ಪೋಟಕ ಮಾಹಿತಿ

ಆತ್ಮಹತ್ಯೆಗೂ ಮುನ್ನ ರಾತ್ರಿ 1.30ರವರೆಗೂ ಸ್ವಾಮೀಜಿ ಪ್ರಭಾವಿ ಮುಖಂಡನೊಬ್ಬನ ಜೊತೆಗೆ ಫೋನ್ ಸಂಭಾಷಣೆಯಲ್ಲಿದ್ದರು ಎಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಾಮೀಜಿ ಅವರ ಮೊಬೈಲ್ ನಂಬರ್ ಕಾಲ್ ಡೀಟೈಲ್ಸ್ ಪರಿಶೀಲನೆ ಮಾಡುತ್ತಿದ್ದಾರೆ.

ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ತಡರಾತ್ರಿ ಪ್ರಭಾವಿ ಮುಖಂಡನ ಜೊತೆ ಶ್ರೀಗಳ ಚರ್ಚೆ, ತನಿಖೆ ವೇಳೆ ಸ್ಪೋಟಕ ಮಾಹಿತಿ
ಬಂಡೆಮಠದ ಬಸವಲಿಂಗ ಸ್ವಾಮೀಜಿ
Follow us
TV9 Web
| Updated By: ಆಯೇಷಾ ಬಾನು

Updated on: Oct 25, 2022 | 8:54 AM

ರಾಮನಗರ: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ದೊಡ್ಡ ಮಠ ಅಂತಾನೇ ಹೆಸರು ಪಡೆದಿರುವ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಈ ಸಂಬಂಧ ಪೊಲೀಸರು ತನಿಖೆ ಶುರು ಮಾಡಿದ್ದು ಕೆಲವು ಸ್ವಾಮೀಜಿ ಆತ್ಮಹತ್ಯೆಗೂ ಮುನ್ನ ಫೋನ್ ಸಂಭಾಷಣೆಯಲ್ಲಿದ್ದರು ಎಂಬ ಸಂಗತಿ ಪತ್ತೆಯಾಗಿದೆ.

ರಾತ್ರಿ 2 ಗಂಟೆಯಿಂದ 4 ಗಂಟೆಯ ಅವಧಿಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೂ ಮುನ್ನ ರಾತ್ರಿ 1.30ರವರೆಗೂ ಸ್ವಾಮೀಜಿ ಪ್ರಭಾವಿ ಮುಖಂಡನೊಬ್ಬನ ಜೊತೆಗೆ ಫೋನ್ ಸಂಭಾಷಣೆಯಲ್ಲಿದ್ದರು ಎಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಾಮೀಜಿ ಅವರ ಮೊಬೈಲ್ ನಂಬರ್ ಕಾಲ್ ಡೀಟೈಲ್ಸ್ ಪರಿಶೀಲನೆ ಮಾಡುತ್ತಿದ್ದಾರೆ. ಸ್ವಾಮೀಜಿಗೆ ಬಂದಿರುವ ಲಾಸ್ಟ್ ಕಾಲ್ ಮೇಲೆ ಅನುಮಾನಗಳು ಹೆಚ್ಚಾಗಿವೆ. ಇದರ ಜೊತೆಗೆ ಸ್ವಾಮೀಜಿ ಜೊತೆಗೆ ನಿರಂತರ ಸಂಪರ್ಕ ಹೊಂದಿದ್ದವರ ಬಗ್ಗೆ ಸಹ ಮಾಹಿತಿ ಸಂಗ್ರಹಿಸಲು ಕಾಲ್ ಡೀಟೈಲ್ಸ್ ನೆರವಾಗಿದೆ. ಇದನ್ನೂ ಓದಿ: ಕೂಡಲಸಂಗಮದಲ್ಲಿ 12ನೇ ಶತಮಾನದ ವೈಭವ: ಕಲೆಯಲ್ಲಿ ಅರಳಿದ ವಚನಲೋಕ ಶರಣರ ಜೀವನಚರಿತ್ರೆ

ಇನ್ನು ಪೊಲೀಸರು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡ ಕೊಠಡಿ ಸೀಲ್ ಮಾಡಿದ್ದಾರೆ. ಬಸವಲಿಂಗ ಸ್ವಾಮೀಜಿ ಮೊಬೈಲ್, ಡೈರಿ, ಡೆತ್​ ನೋಟ್​ ಜಪ್ತಿ ಮಾಡಿ ಮೊಬೈಲ್​​ನಲ್ಲಿರುವ ಮಾಹಿತಿ ಕಲೆಹಾಕಲು FSLಗೆ ರವಾನಿಸಿದ್ದಾರೆ. ಎಫ್​ಎಸ್​ಎಲ್​ ವರದಿ ಆಧರಿಸಿ ಮುಂದಿನ ತನಿಖೆ ನಡೆಸಲಾಗುತ್ತೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೂಕ್ತ ತನಿಖೆ ಮಾಡುವುವಂತೆ ಸಿದ್ಧಗಂಗಾ ಶ್ರೀಗಳಿಂದ ಮನವಿ

ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣ ಸಂಬಂಧ ಸೂಕ್ತ ತನಿಖೆ ಮಾಡುವಂತೆ ಸಿದ್ಧಗಂಗಾ ಶ್ರೀಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ. ಬಂಡೆಮಠದ ಬಸವಲಿಂಗಶ್ರೀಗಳು ಸಿದ್ದಗಂಗಾ ಮಠದ ಸಿದ್ದಲಿಂಗಶ್ರೀಗಳ ಜೊತೆ ನಿಖಟ ಸಂಬಂಧ ಹೊಂದಿದ್ದರು. ಆದ್ರೆ ಮೊನ್ನೆ ರಾತ್ರಿ ವಿದೇಶದಿಂದ ಆಗಮಿಸಿದ್ದ ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಲು ಬಂಡೆಮಠದ ಶ್ರೀಗಳು ಹೋಗಿರಲಿಲ್ಲ. ತಮ್ಮ ಕಾರಿನ ಚಾಲಕನಿಗೆ ಬೆಳಗಿನ ಜಾವ ಮೂರು ಗಂಟೆಗೆ ಹೋಗೋಣಾ ಅಂದಿದ್ದರಂತೆ. ಸದ್ಯ ಪ್ರಕರಣ ಸಂಬಂಧ ಸೂಕ್ತ ತನಿಖೆ ಮಾಡುವುವಂತೆ ಪೊಲೀಸರಿಗೆ ಸಿದ್ದಗಂಗಾ ಶ್ರೀಗಳು ಮನವಿ ಮಾಡಿದ್ದಾರೆ.

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ