AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ; ಹನಿಟ್ರ್ಯಾಪ್ ಆರೋಪದಲ್ಲಿ ಯುವತಿ, ಕಣ್ಣೂರು ಮಠದ ಸ್ವಾಮೀಜಿ ಪೊಲೀಸರ ವಶಕ್ಕೆ

ಕಣ್ಣೂರು ಮಠದ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದಾಳೆ ಎಂಬ ಆರೋಪ ಹೊತ್ತ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Breaking News: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ; ಹನಿಟ್ರ್ಯಾಪ್ ಆರೋಪದಲ್ಲಿ ಯುವತಿ, ಕಣ್ಣೂರು ಮಠದ ಸ್ವಾಮೀಜಿ ಪೊಲೀಸರ ವಶಕ್ಕೆ
ಬಂಡೆಮಠದ ಬಸವಲಿಂಗ ಸ್ವಾಮೀಜಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 30, 2022 | 12:26 PM

Share

ರಾಮನಗರ: ಜಿಲ್ಲೆಯ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ (Bande Mutt Swamiji) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಟ್ರ್ಯಾಪ್​ (Honeytrap) ಮಾಡಿಸಿದ್ದ ಆರೋಪದ ಮೇಲೆ ಮಾಗಡಿ ತಾಲ್ಲೂಕು ಕಣ್ಣೂರು ಮಠದ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದಾಳೆ ಎಂಬ ಆರೋಪ ಹೊತ್ತ ಯುವತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಸುದೀರ್ಘ ವಿಚಾರಣೆ ನಡೆಯುತ್ತಿದ್ದು, ಮತ್ತಷ್ಟು ಜನರ ಹೆಸರು ಹಾಗೂ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

ತೀವ್ರಗೊಂಡ ಹುಡುಕಾಟ

ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವ ಪಡೆದುಕೊಳ್ಳುತ್ತಿದೆ. ಸ್ವಾಮೀಜಿಗೆ ಬ್ಲಾಕ್​ಮೇಲ್ ಮಾಡುತ್ತಿದ್ದ ಆರೋಪ ಹೊತ್ತಿರುವ ಗುಂಪು ದಿನಕ್ಕೊಂದು ವಿಡಿಯೊ ಬಿಡುಗಡೆ ಮಾಡುತ್ತಿದೆ. ಈವರೆಗೆ ಒಟ್ಟು ಮೂರು ಇಂಥ ವಿಡಿಯೊಗಳು ಬಿಡುಗಡೆಯಾಗಿದ್ದು, ಹನಿಟ್ರ್ಯಾಪ್ ಮಾಡಿದ್ದ ಯುವತಿಯನ್ನು ಪೊಲೀಸರು ಹುಡುಕುತ್ತಿದ್ದಾರೆ. ಪ್ರಕರಣದ ತನಿಖೆಗಾಗಿ ರಾಮನಗರ ಜಿಲ್ಲಾ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದಾರೆ. ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಬಸವಲಿಂಗ ಸ್ವಾಮೀಜಿ ಮೊಬೈಲ್​ನಲ್ಲಿ ದಾಖಲಾಗಿರುವ ಮೊಬೈಲ್ ಕರೆಗಳ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಹನಿಟ್ರ್ಯಾಪ್ ಮಾಡಿರುವ ಯುವತಿಯನ್ನು ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಿದರೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ವಿವರಗಳು ಬಯಲಾಗಲಿವೆ. ತಂಡವೇ ಪತ್ತೆಯಾದರೆ ನಿಜವಾದ ಬ್ಲ್ಯಾಕ್​ಮೇಲ್​ನ ನಿಜವಾದ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಅನುಮಾನ ಬಂದ ಹಲವರನ್ನು ಪೊಲೀಸರು ಠಾಣೆಗೆ ಕರೆಸಿಕೊಂಡು ವಿಚಾರಣೆ ಮಾಡಿದ್ದಾರೆ.

ಸ್ವಾಮೀಜಿ ನಾಪತ್ತೆ

ಈ ನಡುವೆ ಬಸವಲಿಂಗ ಸ್ವಾಮೀಜಿ ತಮ್ಮ ಡೆತ್​ನೋಟ್​ನಲ್ಲಿ ಪ್ರಸ್ತಾಪಿಸಿದ್ದ ಸ್ವಾಮೀಜಿಯೊಬ್ಬರು ನಾಪತ್ತೆಯಾಗಿರುವುದು ಹಲವರ ಹುಬ್ಬೇರಿಸಿದೆ. ಆರೋಪಿ ಸ್ವಾಮೀಜಿ ತಮ್ಮ ಮಠದಿಂದ ನಾಪತ್ತೆಯಾಗಿದ್ದು, ಬಂಧನ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಅಜ್ಞಾತ ಸ್ಥಳದಿಂದಲೇ ಅವರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದೀಗ ಪೊಲೀಸರ ವಶದಲ್ಲಿರುವ ಕಣ್ಣೂರು ಮಠದ ಸ್ವಾಮೀಜಿ ಹಾಗೂ ಬಂಡೇಮಠದ ಸ್ವಾಮೀಜಿ ಡೆತ್​ನೋಟ್​ನಲ್ಲಿ ಉಲ್ಲೇಖಿಸಿರುವ ಸ್ವಾಮೀಜಿ ಒಬ್ಬರೇನಾ ಎನ್ನುವ ಬಗ್ಗೆ ಪೊಲೀಸರು ಯಾವುದೇ ಹೇಳಿಕೆ ನೀಡಿಲ್ಲ.

ಮತ್ತೊಂದು ವಿಡಿಯೊ ಬಿಡುಗಡೆ

ಆತ್ಮಹತ್ಯೆ ಮಾಡಿಕೊಂಡಿರುವ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಮತ್ತೊಂದು ವಿಡಿಯೊ ವೈರಲ್ ಆಗಿದೆ. ಈ ವಿಡಿಯೊದಲ್ಲಿ ಸ್ವಾಮೀಜಿ ಬೆತ್ತಲೆಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೊದಲು ಬಿಡುಗಡೆಯಾಗಿದ್ದ ವಿಡಿಯೊದಲ್ಲಿ ಸ್ವಾಮೀಜಿಯನ್ನು ಬ್ಲಾಕ್​ಮೇಲ್ ಮಾಡುತ್ತಿದ್ದ ಯುವತಿಯ ಚಿತ್ರ ಬಹಿರಂಗಗೊಂಡಿತ್ತು.

Published On - 12:11 pm, Sun, 30 October 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್