
ರಾಮನಗರ, (ಮೇ 19): ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ಜಿಲ್ಲೆ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್ನಲ್ಲಿ (YG Gudda reservoir) ನಡೆದಿದೆ. ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಬೆಂಗಳೂರು ಮೂಲದ ರಾಘವಿ(18) ಮಧುಮಿತ(20), ಹಾಗೂ ರಮ್ಯಾ(22) ಎನ್ನುವರು ಮೃತಪಟ್ಟಿದ್ದಾರೆ.ಜಲಾಶಯ ವೀಕ್ಷಣೆಗೆಂದು ತೆರಳಿದ್ದ ಏಳು ಯುವತಿಯರು ಹೋಗಿದ್ದರು. ಈ ಪೈಕಿ ಓರ್ವ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವೇಳೆ ಉಳಿದವರು ರಕ್ಷಣೆಗೆ ಧಾವಿಸಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎಲ್ಲರೂ ನೀರಿಗೆ ಬಿದ್ದಿದ್ದು, ಇದರಲ್ಲಿ ಮೂವರು ಯುವತಿಯರು ಮೃತಪಟ್ಟಿದ್ದಾರೆ. ಇನ್ನುಳಿದವರನ್ನು ಯುವಕನೋರ್ವ ರಕ್ಷಣೆ ಮಾಡಿದ್ದಾನೆ.
ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದ ಯುವತಿಯರು, ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಏಳು ಯುವತಿರು ನೀರಿಗೆ ಬಿದ್ದಾಗ ಸ್ಥಳದಲ್ಲಿದ್ದ ಯುವಕನೋರ್ವ ಕೆಲವರನ್ನು ರಕ್ಷಣೆ ಮಾಡಿದ್ದಾನೆ. ಆದ್ರೆ, ಏಳು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕೊಪ್ಪಳ: ಇನ್ನೊಂದೆಡೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಬಳಿಯ ತುಂಗಭದ್ರಾ ನದಿ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದಾರೆ. ಗಂಗಾವತಿ ನಿವಾಸಿಗಳಾದ ಪವನ್(14), ಗೌತಮ್(15) ನೀರುಪಾಲಾಗಿದ್ದು, ಸದ್ಯ ಪವನ್ ಮೃತದೇಹ ಪತ್ತೆಯಾಗಿದೆ. ಇನ್ನು ಗೌತಮ್ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.
ಬೆಂಗಳೂರು: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು (Techie) ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿಖಿಲ್ ಸೋಮವಂಶಿ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ಅಗರ ಕೆರೆಯಲ್ಲಿ ಶವ (Agara Lake) ಪತ್ತೆಯಾಗಿದ್ದು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ನಿಖಿಲ್ ಐಐಎಸ್‌ಸಿ ಪದವೀಧರನಾಗಿದ್ದು ಕೋರಮಂಗಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅಸಹಜ ಸಾವು ಪ್ರಕರಣದ ಅಡಿ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ನಗರದ ಹೆಚ್.ಎಸ್.ಗಾರ್ಡನ್ ಬಡಾವಣೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತು ಸಮೀವುಲ್ಲಾ(39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನಲೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Published On - 3:32 pm, Mon, 19 May 25