AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP-JDS Padayatra: ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು, ಓರ್ವ ಮುಖಂಡ ಅಸ್ವಸ್ಥ

ಮುಡಾ, ವಾಲ್ಮೀಕಿ ಹಗರಣ ಆರೋಪದ ಮೇಲೆ ಕಾಂಗ್ರೆಸ್​​ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್​​​ ಬೆಂಗಳೂರು ಮೈಸೂರು ಪಾದಯಾತ್ರೆ ಮಾಡುತ್ತಿದ್ದು, ಇಂದು ಮೂರನೇ ದಿನದ ಪಾದಯಾತ್ರೆ ರಾಮನಗರ ಜಿಲ್ಲೆ ತಲುಪಿದೆ. ಇನ್ನು ಚನ್ನಪಟ್ಟಣದಲ್ಲಿ ಪಾದಯಾತ್ರೆ ನಡೆಯುತ್ತಿರುವ ವೇಳೆ ಬಿಜೆಪಿ ಕಾರ್ಯಕರ್ತೆ ಮೃತಪಟ್ಟಿದ್ದಾಳೆ.

BJP-JDS Padayatra: ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು, ಓರ್ವ ಮುಖಂಡ ಅಸ್ವಸ್ಥ
ಪಾದಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತೆ ಸಾವು
Sunil MH
| Updated By: ರಮೇಶ್ ಬಿ. ಜವಳಗೇರಾ|

Updated on: Aug 05, 2024 | 2:53 PM

Share

ರಾಮನಗರ, (ಆಗಸ್ಟ್​.05): ವಾಲ್ಮೀಕಿ ಮತ್ತಯ ಮುಡಾ ಹಗರಣ ಸಂಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ- ಜೆಡಿಎಸ್​ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆ ನಡೆಸಿದ್ದು, ಇಂದು (ಆಗಸ್ಟ್ 05) ಮೂರನೇ ದಿನ ದೋಸ್ತಿ ಪಕ್ಷಗಳ ಪಾದಯಾತ್ರೆ ರಾಮನಗರ ಜಿಲ್ಲೆ ಪ್ರವೇಶಿಸಿದ್ದು, ಈ ವೇಳೆ ಬಿಜೆಪಿ​​ ಕಾರ್ಯಕರ್ತೆ ಗೌರಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಪಾದಯಾತ್ರೆಯಲ್ಲಿ ನಡೆಯುತ್ತಿರುವ ವೇಳೆ ಬೆಂಗಳೂರಿನ ಬಸವನಗುಡಿಯ ಬಿಜೆಪಿ ಕಾರ್ಯಕರ್ತೆ ಗೌರಮ್ಮ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಚನ್ನಪಟ್ಟಣದಲ್ಲಿ ಮಾದಯಾತ್ರೆ ನಡೆಯುತ್ತಿರುವ ವೇಳೆ ಗೌರಮ್ಮ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನ ಚನ್ನಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಅಷ್ಟರಾಗಲೇ ಗೌರಮ್ಮ ಕೊನೆಯುಸಿರೆಳೆದಿದ್ದಾರೆ. ಸದ್ಯ ಗೌರಮ್ಮ ಮೃತದೇಹ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿದ್ದು, ಜೆಡಿಎಸ್​​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತ ಕಾರ್ಯಕರ್ತೆಯ ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ: BJP JDS Padayatra Live: ಮೈತ್ರಿ ನಾಯಕರ ಮೂರನೇ ದಿನದ ಪಾದಯಾತ್ರೆ, ಲೈವ್​ ವೀಕ್ಷಿಸಿ

ಪಾದಯಾತ್ರೆ ವೇಳೆ ಬಿಜೆಪಿ ಮುಖಂಡ ಅಸ್ವಸ್ಥ

ಇನ್ನು ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ಜಯನಗರದ ಮಂಡಳ ಉಪಾಧ್ಯಕ್ಷ ಶಂಕರ್ ಅವರು ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆ್ಯಂಬುಲೆನ್ಸ್​ ಮೂಲಕ ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಬಿ.ವೈ.ವಿಜಯೇಂದ್ರ ಮತ್ತು ಬಿಜೆಪಿ ಶಾಸಕರಾದ ಸಿ.ಕೆ.ರಾಮಮೂರ್ತಿ ಹಾಗೂ ರವಿಸುಬ್ರಹ್ಮಣ್ಯ ಅವರು ಆಸ್ಪತ್ರಗೆ ಭೇಟಿ ನೀಡಿ ಶಂಕರ್ ಅವರ ಆರೋಗ್ಯ ವಿಚಾರಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ