AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನ ರಾಮನಗರ ತಾಲೂಕಿನ ಅವರಗೆರೆ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಕೇರಳದ ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಡದಿ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ, ಸಂಚಾರ ಸುಗಮಗೊಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ
ಪ್ರಶಾಂತ್​ ಬಿ.
| Edited By: |

Updated on: Aug 08, 2026 | 9:16 AM

Share

ಮುಖ್ಯಾಂಶಗಳು

  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು.
  • ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕೇರಳದ ಸಾರಿಗೆ ಬಸ್.
  • ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ, ಆಗಸ್ಟ್ 08: ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ (Ramanagar) ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ್ದು ಹೇಗೆ?

ಕೇರಳದಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ರಾಮನಗರ ತಾಲೂಕಿನ ಅವರಗೆರೆ ಗೇಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಸೈನ್ ಬೋರ್ಡ್‌ಗೆ (ದಿಕ್ಸೂಚಿ ಫಲಕ) ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತಕ್ಷಣ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್‌ನಲ್ಲಿದ್ದ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಂಚಾರ ಅಸ್ತವ್ಯಸ್ತ

ಭೀಕರ ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.ವಿಷಯ ತಿಳಿಯುತ್ತಿದ್ದಂತೆ ಬಿಡದಿ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಭೀಕರ ಅಪಘಾತದ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ