AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Expressway:ಇಂದಿನಿಂದಲೇ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಟೋಲ್​ ಶುರು, ಎಷ್ಟು ಹಣ ಪಾವತಿಸಬೇಕು?

ಇಂದಿನಿಂದ ಮೊದಲ ಹಂತದ ಟೋಲ್ ಸಂಗ್ರಹ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಸುಮಾರು 55 ಕಿಲೋ ಮೀಟರ್ ಹೈವೇಗೆ ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹಿಸಲು ನಿರ್ಧರಿಸಲಾಗಿದೆ.

Bengaluru-Mysuru Expressway:ಇಂದಿನಿಂದಲೇ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಟೋಲ್​ ಶುರು, ಎಷ್ಟು ಹಣ ಪಾವತಿಸಬೇಕು?
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇ
ಆಯೇಷಾ ಬಾನು
|

Updated on:Mar 14, 2023 | 9:10 AM

Share

ರಾಮನಗರ: ಪ್ರಧಾನಿ ನರೇಂದ್ರ ಮೋದಿ(Narendra Modi) ಮಾರ್ಚ್ 12ರಂದು ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಹೈವೇ(Bengaluru-Mysuru Expressway) ಲೋಕಾರ್ಪಣೆ ಮಾಡಿದರು. ಮೋದಿ ಹೈವೇ ಉದ್ಘಾಟನೆ ಮಾಡಿದ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ಮುಂದಾಗಿದೆ. ಹೈವೇನಲ್ಲಿ ಸಂಚರಿಸುವ ಸವಾರರಿಗೆ ಇಂದಿನಿಂದಲೇ(ಮಾರ್ಚ್ 14) ಜೇಬಿಗೆ ಕತ್ತರಿ ಬೀಳಲಿದೆ. ಸುಮಾರು 55 ಕಿಲೋ ಮೀಟರ್ ಹೈವೇಗೆ ಬೆಳಗ್ಗೆ 8 ಗಂಟೆಯಿಂದ ಟೋಲ್ ಸಂಗ್ರಹಿಸಲು ನಿರ್ಧರಿಸಲಾಗಿದೆ.

ಇಂದಿನಿಂದ ಮೊದಲ ಹಂತದ ಟೋಲ್ ಸಂಗ್ರಹ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಾಗುತ್ತದೆ.

ಇದನ್ನೂ ಓದಿ: Bengaluru Mysuru Expressway: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ; ದಶಪಥ ಹೆದ್ದಾರಿಯ ವಿಶೇಷಗಳಿವು

ಯಾವುದಕ್ಕೆ ಎಷ್ಟು ಶುಲ್ಕ?

  • ಕಾರು, ಜೀಪ್​​, ವ್ಯಾನ್​ಗೆ ಏಕಮುಖ ಸಂಚಾರಕ್ಕೆ 135 ರೂ ದರ
  • ಕಾರು, ಜೀಪ್​​​, ವ್ಯಾನ್​​ಗೆ​ ಎರಡು ಕಡೆ ಸಂಚಾರಕ್ಕೆ 205 ರೂ.
  • ಸ್ಥಳೀಯ ವಾಹನಗಳ ಏಕಮುಖ ಸಂಚಾರಕ್ಕೆ 70 ರೂ. ನಿಗದಿ
  • ಕಾರು, ಜೀಪ್​​​, ವ್ಯಾನ್​​ಗಳಿಗೆ ತಿಂಗಳ ಪಾಸ್​​ ದರ 4,425 ರೂ.
  • ಲಘು ಸರಕುವಾಹನ, ಮಿನಿ ಬಸ್​ಗಳ ಏಕಮುಖ ಸಂಚಾರಕ್ಕೆ 220 ರೂ
  • ಲಘು ಸರಕುವಾಹನ, ಮಿನಿ ಬಸ್​ಗಳ ಎರಡು ಕಡೆ ಸಂಚಾರಕ್ಕೆ 330 ರೂ
  • ಲಘು ಸರಕುವಾಹನ, ಮಿನಿ ಬಸ್​ಗಳಿಗೆ ತಿಂಗಳ ಪಾಸ್​ ದರ 7315 ರೂ
  • ಟ್ರಕ್‌/ಬಸ್‌ ಏಕಮುಖ ಸಂಚಾರಕ್ಕೆ ಟೋಲ್​ ದರ 460 ರೂ. ನಿಗದಿ
  • ಟ್ರಕ್‌/ಬಸ್‌ ಎರಡು ಕಡೆ ಸಂಚಾರಕ್ಕೆ 690 ರೂಪಾಯಿ ನಿಗದಿ
  • ಟ್ರಕ್‌/ಬಸ್​​ಗಳ ತಿಂಗಳ ಟೋಲ್ ಪಾಸ್​ ದರ 15,325 ರೂ. ನಿಗದಿ
  • 3 ಆಕ್ಸೆಲ್‌ ವಾಣಿಜ್ಯ ವಾಹನ ಏಕಮುಖ ಸಂಚಾರ ₹500, ಎರಡು ಕಡೆ ₹750
  • ಅತಿ ಭಾರದ ವಾಹನಗಳು ಏಕಮುಖ ಸಂಚಾರಕ್ಕೆ 880 ರೂ. ನಿಗದಿ
  • ಅತಿ ಭಾರದ ವಾಹನಗಳು ಎರಡು ಕಡೆ ಸಂಚಾರಕ್ಕೆ ₹1315 ದರ ನಿಗದಿ
  • ಟೋಲ್ ಸಂಗ್ರಹ ವಿರೋಧಿಸಿ ಇಂದು ಪ್ರತಿಭಟನೆಗೆ ನಿರ್ಧಾರ

    ಇನ್ನು ಈ ಹಿಂದೆ ಟೋಲ್ ಸಂಗ್ರಹಕ್ಕೆ ಮುಂದಾದಾಗ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಇಂದು ಕೂಡ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸರ ಭದ್ರತೆ ಒದಗಿಸಲು ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ರಾಮನಗರ ಡಿಸಿ, ಎಸ್ ಪಿಗೆ ಮನವಿ ಮಾಡಿದ್ದಾರೆ. ಅದರಂತೆ 3 ಕೆಎಸ್​ಆರ್​ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ 200‌ಕ್ಕೂ ಹೆಚ್ಚು ಪೊಲೀಸರ ನಿಯೋಜಿಸಲಾಗಿದೆ. ಎಸ್ ಪಿ ಕಾರ್ತಿಕ್ ರೆಡ್ಡಿ,‌ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಟೋಲ್ ಸಂಗ್ರಹ ವಿರೋಧಿಸಿ ಇಂದು ಬೆಳಗ್ಗೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಧರಣಿಗೆ ಕರೆ ಹಿನ್ನೆಲೆ ಸವಾರರಿಗೆ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯಿದೆ.

    ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:10 am, Tue, 14 March 23

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್