AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಎಫೆಕ್ಟ್​: ತೆವಳುತ್ತಾ ಸಾಗಿದೆ ದಶಪಥ ಹೆದ್ದಾರಿ ವಿಸ್ತರಣೆ

ರಾಮನಗರ: ಲಾಕ್‌ಡೌನ್ ಕಾರಣಾದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣಾ ಕಾಮಗಾರಿ ಕುಂಟುತ್ತಲೇ ಸಾಗಿದೆ. ಮಧ್ಯಪ್ರದೇಶ ಮೂಲದ ದಿಲೀಪ್‌ ಬಿಲ್ಡ್‌ಕಾನ್‌ ಕಂಪನಿಯು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆ ಪಡೆದಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ: ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ ಲಾಕ್‌ಡೌನ್‌ ಘೋಷಣೆಗೆ ಮುನ್ನ ಭರದಿಂದ ಸಾಗಿತ್ತು. ಅದರಲ್ಲೂ ಉತ್ತರ ಭಾರತ ಮೂಲದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಯಂತ್ರಗಳೂ ದೊಡ್ಡದಾಗಿ ಸದ್ದು ಮಾಡುತ್ತಿದ್ದವು. ಆದರೆ ಲಾಕ್‌ಡೌನ್‌ ಘೋಷಣೆ ಆದಾಗಿನಿಂದ […]

ಲಾಕ್​ಡೌನ್​ ಎಫೆಕ್ಟ್​: ತೆವಳುತ್ತಾ ಸಾಗಿದೆ ದಶಪಥ ಹೆದ್ದಾರಿ ವಿಸ್ತರಣೆ
ಸಾಧು ಶ್ರೀನಾಥ್​
|

Updated on:May 23, 2020 | 10:29 AM

Share

ರಾಮನಗರ: ಲಾಕ್‌ಡೌನ್ ಕಾರಣಾದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣಾ ಕಾಮಗಾರಿ ಕುಂಟುತ್ತಲೇ ಸಾಗಿದೆ. ಮಧ್ಯಪ್ರದೇಶ ಮೂಲದ ದಿಲೀಪ್‌ ಬಿಲ್ಡ್‌ಕಾನ್‌ ಕಂಪನಿಯು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆ ಪಡೆದಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ: ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ ಲಾಕ್‌ಡೌನ್‌ ಘೋಷಣೆಗೆ ಮುನ್ನ ಭರದಿಂದ ಸಾಗಿತ್ತು. ಅದರಲ್ಲೂ ಉತ್ತರ ಭಾರತ ಮೂಲದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಯಂತ್ರಗಳೂ ದೊಡ್ಡದಾಗಿ ಸದ್ದು ಮಾಡುತ್ತಿದ್ದವು. ಆದರೆ ಲಾಕ್‌ಡೌನ್‌ ಘೋಷಣೆ ಆದಾಗಿನಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿತ್ತು. ನಂತರದಲ್ಲಿ ಕೇಂದ್ರ ಸರ್ಕಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಹೀಗಾಗಿ ನಂತರದಲ್ಲಿ ಕಾಮಗಾರಿಗೆ ಮರು ಚಾಲನೆ ದೊರೆತಿದ್ದರೂ ಮೊದಲಿನಷ್ಟು ವೇಗ ಇಲ್ಲದಾಗಿದೆ.

ಊರುಗಳಿಗೆ ಮರಳಿರುವ ಕಾರ್ಮಿಕರು: ಅರ್ಧದಷ್ಟು ಕಾರ್ಮಿಕರು ತಮ್ಮೂರುಗಳಿಗೆ ಮರಳಿದ್ದು, ಇರುವವರನ್ನೇ ಬಳಸಿಕೊಂಡು ಕೆಲಸ ಮಾಡಿಸಲಾಗುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಹಳೆಯ ನಾಲ್ಕು ಪಥದ ರಸ್ತೆಯು ಸುಮಾರು 25ರಿಂದ 30 ಮೀಟರ್‌ ಅಗಲ ಇದ್ದು, ಇದನ್ನು 60 ಮೀಟರ್‌ಗೆ ಹಾಗೂ ಎಲಿವೇಟೆಡ್‌ ಕಾರಿಡಾರ್‌ ಬಳಿ 45 ಮೀಟರ್‌ಗೆ ವಿಸ್ತರಣೆ ಮಾಡಲಾಗುತ್ತಿದೆ.

ಬೆಂಗಳೂರು-ಮೈಸೂರು ನಡುವೆ ಸದ್ಯ 135 ಕಿಲೋ ಮೀಟರ್‌ ಅಂತರವಿದೆ. ಇದರಲ್ಲಿ ಬೆಂಗಳೂರು ಹೊರವಲಯದ ನೈಸ್ ಜಂಕ್ಷನ್‌ ಬಳಿಯ 18ನೇ ಕಿ.ಮೀ. ಮೈಲಿಗಲ್ಲಿನ ಬಳಿ ಪಂಚಮುಖಿ ದೇವಸ್ಥಾನದಿಂದ ರಸ್ತೆ ವಿಸ್ತರಣೆ ಕಾರ್ಯ ಆರಂಭಗೊಂಡು ಮೈಸೂರಿನ ಕೊಲಂಬಿಯಾ ಏಷ್ಯಾ ಜಂಕ್ಷನ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಒಟ್ಟು 118 ಕಿ.ಮೀ ಉದ್ದಕ್ಕೆ ಹತ್ತು ಪಥಗಳ ರಸ್ತೆ ಬರಲಿದೆ.

ಮೈಸೂರು-ಬೆಂಗಳೂರು ನಡುವೆ ಒಟ್ಟು ಎರಡು ಹಂತದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ನೈಸ್‌ ಜಂಕ್ಷನ್‌ ರಸ್ತೆ ಸಮೀಪದಿಂದ ಮಂಡ್ಯ ಜಿಲ್ಲೆಯ ನಿಡಘಟ್ಟವರೆಗಿನ ಮೊದಲ ಹಂತದ ಕಾಮಗಾರಿಯು ಭಾಗಶಃ ಮುಗಿದಿದೆ. ಇಲ್ಲಿ ಒಟ್ಟಾರೆ 56.2 ಕಿ.ಮೀ ಉದ್ದದ ರಸ್ತೆಯು ವಿಸ್ತರಣೆ ಆಗುತ್ತಿದೆ. ಇದಕ್ಕಾಗಿ ಸರ್ಕಾರ ರೂ 3,900 ಕೋಟಿ ವೆಚ್ಚ ವ್ಯಯಿಸುತ್ತಿದೆ.

Published On - 7:25 am, Sat, 23 May 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ