ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ

ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ರಾಮನಗರ ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ.

ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ
ಬಿಡದಿ ಬಳಿ ಐದು ಕೋಟಿ ಜಪ್ತಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 22, 2024 | 4:57 PM

ರಾಮನಗರ, ಮಾ.22: ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ. ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ಇಂದು(ಮಾ.22) ತಪಾಸಣೆ ವೇಳೆ ಕಂತೆ ಕಂತೆ‌ ನೋಟು ಪತ್ತೆಯಾಗಿದ್ದು, ಬ್ಯಾಂಕಿಗೆ ಸೇರಿರುವ ಹಣ ಎಂದು ವಾಹನ ಮಾಲೀಕರು ಹೇಳುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಬ್ಯಾಂಕ್ ದಾಖಲೆ ಕೇಳಿರುವ ಬಿಡದಿ ಪೊಲಿಸರು, ಸಮರ್ಪಕ ದಾಖಲೆಗಾಗಿ ಕಾಯುತಿದ್ದಾರೆ.

8 ಲಕ್ಷ ರೂ. ಮೌಲ್ಯದ 480 ಮಿಕ್ಸರ್ ವಶಕ್ಕೆ

ಹುಬ್ಬಳ್ಳಿ: ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್​ನಲ್ಲಿದ್ದ ಎಂಟು ಲಕ್ಷ ಮೌಲ್ಯದ 480 ಮಿಕ್ಸರ್​ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯಾವುದೇ ದಾಖಲೆ‌ ಇಲ್ಲದೆ 24 ರಟ್ಟಿನ ಬಾಕ್ಸ್​ನಲ್ಲಿ 480 ಮಿಕ್ಸರ್​ಗಳನ್ನು ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ಅನಧಿಕೃತ ಮಿಕ್ಸರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇದು ‌ಲೋಕಸಭೆ ಚುನಾವಣೆ ಹಿನ್ನಲೆ ತರಿಸಿರಬಹುದು ಎನ್ನುವ ಮಾಹಿತಿ ಇದೆ. ಈ ಕುರಿತು ಮಿಕ್ಸರ್ ಸೀಜ್ ಮಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಚರಣೆ; 7 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

38.50 ಲಕ್ಷ ಮೌಲ್ಯದ 778 ಗ್ರಾಂ ಚಿನ್ನಾಭರಣ ಪೊಲೀಸರ ವಶಕ್ಕೆ

ಧಾರವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 38.50 ಲಕ್ಷ ಮೌಲ್ಯದ 778 ಗ್ರಾಂ ಚಿನ್ನಾಭರಣವನ್ನ ಧಾರವಾಡ ಹೊರವಲಯದ ತೇಗೂರು ಚೆಕ್‌ಪೋಸ್ಟ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ-ಗಂಗಾವತಿ ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಿಂದ ಸಿಂಧನೂರು ಕಡೆ ಹೊರಟಿದ್ದ ಪ್ರಕಾಶ ಕುಮಾರ ಎಂಬಾತನ ಬಳಿ ಇತ್ತು. ತಪಾಸಣೆ ವೇಳೆ ಬಿಲ್ ಮತ್ತು ಚಿನ್ನಾಭರಣಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿನ್ನಾಭರಣವನ್ನ ವಶಕ್ಕೆ ಪಡೆದು, ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಭಾರತದ ಅತಿದೊಡ್ಡ ಸಕ್ಕರೆ ಕಾರ್ಖಾನೆ ಚಿಂಚೋಳಿಯಲ್ಲಿ ಸ್ಥಾಪಿಸಿರುವೆ: ಯತ್ನಾಳ್
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ಕೊಪ್ಪಳದಲ್ಲಿ ಶುರುವಾದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
ರಹಸ್ಯವಾಗಿ ನಡೆದ ಮಾತುಗಳು ಹೊರಬಿತ್ತು; ಮುಖವಾಡ ಕಳಚಿದಾಗ ನಡೆಯಿತು ಕಿತ್ತಾಟ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Devotional: ಮಕ್ಕಳು ಹಠ ಮಾಡ್ತಿದ್ರೆ ಇಲ್ಲಿದೆ ಸುಲಭ ಉಪಾಯ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!