AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ಚನ್ನಪಟ್ಟಣದಲ್ಲಿ ಬಿಹಾರ್ ಮೂಲದ ಯುವಕನ ಹತ್ಯೆ, ಗೋಕರ್ಣಕ್ಕೆ ಬಂದಿದ್ದ ಜಪಾನ್ ಮಹಿಳೆ ನಾಪತ್ತೆ

ರಾಜ್ಯದಲ್ಲಿ ಅಪರಾಧ ಸಂಖ್ಯೆಗಳು ಹೆಚ್ಚಳವಾಗುತ್ತಿದೆ. ಕ್ಷುಲ್ಲಕ ಕಾರಣಗಳಿಗೆ ಕೊಲೆಗಳು ನಡೆಯುತ್ತಿದ್ದು, ಅದರಂತೆ ಇದೀಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸಾತನೂರು ವೃತ್ತದ ಬಳಿ ಭೀಕರ ಹತ್ಯೆ ನಡೆದಿದೆ. ಇತ್ತ ಯಾದಗಿರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದರೆ, ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದ ಜಪಾನ್​ ಮಹಿಳೆ ಕಾಣೆಯಾಗಿದ್ದಾರೆ.

ಪ್ರತ್ಯೇಕ ಘಟನೆ: ಚನ್ನಪಟ್ಟಣದಲ್ಲಿ ಬಿಹಾರ್ ಮೂಲದ ಯುವಕನ ಹತ್ಯೆ, ಗೋಕರ್ಣಕ್ಕೆ ಬಂದಿದ್ದ ಜಪಾನ್ ಮಹಿಳೆ ನಾಪತ್ತೆ
ಗೋಕರ್ಣದಲ್ಲಿ ಜಪಾನ್​ ಮಹಿಳೆ ನಾಪತ್ತೆ, ಚನ್ನಪಟ್ಟಣದಲ್ಲಿ ಯುವಕನ ಹತ್ಯೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on:Feb 07, 2024 | 4:22 PM

Share

ರಾಮನಗರ, ಫೆ.07: ತಲೆ ಮೇಲೆ‌ ಕಲ್ಲು ಹಾಕಿ‌ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚನ್ನಪಟ್ಟಣ (Channapatana) ನಗರದ ಸಾತನೂರು ವೃತ್ತದ ಬಳಿ ನಡೆದಿದೆ. ಬಿಹಾರ ಮೂಲದ ಸಂಜಿತ್ ಕುಮಾರ್ ಠಾಕೂರ್ ( 30) ಮೃತ ಯುವಕ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚನ್ನಪಟ್ಟಣಪುರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ  ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಚನ್ನಪಟ್ಟಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಗೋಕರ್ಣಕ್ಕೆ ಆಗಮಿಸಿದ್ದ ಜಪಾನ್ ಮಹಿಳೆ ನಾಪತ್ತೆ

ಉತ್ತರ ಕನ್ನಡ: ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿದ್ದಾರೆ. ಎಮಿ ಯಮಾಝಕಿ(40) ಕಾಣೆಯಾದ ಮಹಿಳೆ. ಫೆ.5ರಂದು ಗೋಕರ್ಣದ ಬಂಗ್ಲೆಗುಡ್ಡದ ನೇಚರ್ ಕ್ಯಾಂಪಸ್​ನಲ್ಲಿ ತನ್ನ ಪತಿಯ ಜೊತೆ ಮಹಿಳೆ ತಂಗಿದ್ದರು. ಮುಂಜಾನೆ 10.30 ರ ಸಮಯಕ್ಕೆ ನೇಚರ್ ಕ್ಯಾಂಪಸ್ ನಿಂದ ಹೊರ ಹೋಗಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ. ಈ ಕುರಿತು ಮಹಿಳೆಯ ಪತಿ ದೈ ಯಮಾಝಕಿ ಎಂಬುವವರು ಕೂಡಲೇ ಪತ್ನಿಯನ್ನು ಹುಡುಕಿಕೊಡುವಂತೆ ಗೋಕರ್ಣ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಡ್ರೈ ಫ್ರೂಟ್ಸ್​​ ಕೆಲಸ ಮಾಡಿಕೊಂಡಿದ್ದ ಯುವಕ, ರಂಜಾನ್​ಗೆ ಊರಿಗೆ ಹೋದ ಎರಡನೇ ದಿನವೇ ಬರ್ಬರವಾಗಿ ಹತ್ಯೆಗೀಡಾದ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಯಾದಗಿರಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಹೊರ ಭಾಗದಲ್ಲಿ ಪತ್ತೆಯಾಗಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಮೃತ ವ್ಯಕ್ತಿಯು 50 ವರ್ಷ ವಯಸ್ಸಿನ ಆಸುಪಾಸಿನವನು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಯಾದಗಿರಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Wed, 7 February 24

Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ