ರಾಮನಗರ: ಜಾತ್ರೆ ಮುಗಿಸಿ ಹಿಂದಿರುಗುವಾಗ ಬೈಕ್ ಅಪಘಾತ, ಇಬ್ಬರು ಸಾವು
ಜಿಲ್ಲೆಯ ಮಾಗಡಿ ತಾಲೂಕಿನ ಸೂರಪ್ಪನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜಾತ್ರೆ ಮುಗಿಸಿ ಹಿಂದಿರುಗುವಾಗ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಗಿರೀಶ್(22) ಯಶವಂತ್(23) ಮೃತ ರ್ದುದೈವಿಗಳು.
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಸೂರಪ್ಪನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜಾತ್ರೆ ಮುಗಿಸಿ ಹಿಂದಿರುಗುವಾಗ ಬೈಕ್ ಅಪಘಾತವಾಗಿ(Accident)ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಗಿರೀಶ್(22) ಯಶವಂತ್(23) ಮೃತ ರ್ದುದೈವಿಗಳು. ಮಾಕಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರಿಬ್ಬರು, ಹೆಬ್ಬಳಲು ಗ್ರಾಮದ ಜಾತ್ರೆಗೆ ಹೋಗಿ ವಾಪಸ್ ಬರುವಾಗ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನೆಲಮಂಗಲ: ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಸಾವು
ಬೆಂಗಳೂರು ಗ್ರಾಮಾಂತರ: ಹಿಂಬದಿಯಿಂದ ಕಾರೊಂದು ಬಂದು ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ನೆಲಮಂಗಲದ ಅರಶಿನಕುಂಟೆ ಬಳಿ ನಡೆದಿದೆ. ಮೃತ ಬೈಕ್ ಸವಾರ ಶ್ರೀನಾಥ್ (49) ನೆಲಮಂಗಲದ ಬಸವನಹಳ್ಳಿ ನಿವಾಸಿಯಾಗಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕನಾಗಿದ್ದ. ದಾಸನಪುರದ ಬ್ಯಾಂಕ್‌ವೊಂದಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ನಡೆದಿದೆ. ಬಳಿಕ ಆತನನ್ನ ಆಸ್ಪತ್ರೆಗೆ ಸೇರಿಸಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನಲೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Bangarpet: ಎರಡು ಬೈಕ್ಗಳ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಎರಡು ಬೈಕ್ಗಳ ನಡುವೆ ಅಪಘಾತ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಕೋಲಾರ: ಎರಡು ಬೈಕ್ಗಳ ನಡುವೆ ಅಪಘಾತ ನಡೆದಿದ್ದು, ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿಯಲ್ಲಿ ನಡೆದಿದೆ. ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ್(25), ಪರವನಹಳ್ಳಿಯ ನಿವಾಸಿ ನವೀನ್(26) ಮೃತ ಸವಾರರು. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಘಟನೆ ನಡೆದಿದ್ದು, ಮೃತ ಭಾರತಿ(26) ಸಂಬಂಧಿಕರಿಂದ ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದ್ದಾರೆ.
ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ