ಮಾಜಿ ಸಚಿವ ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ, ತೋಟದ ಮನೆಗೆ ಪೊಲೀಸರು ದೌಡು

ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ನಾಪತ್ತೆಯಾಗಿದ್ದಾರೆ. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಏಕಾಏಕಿ ಕಾಣೆಯಾಗಿದ್ದಾರೆ. ಇದರಿಂದ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.

ಮಾಜಿ ಸಚಿವ ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ನಾಪತ್ತೆ, ತೋಟದ ಮನೆಗೆ ಪೊಲೀಸರು ದೌಡು
ಮಹಾದೇವಯ್ಯ ಯೋಗಿಶ್ವರ್
Updated By: ರಮೇಶ್ ಬಿ. ಜವಳಗೇರಾ

Updated on: Dec 02, 2023 | 4:14 PM

ರಾಮನಗರ (ಡಿಸೆಂಬರ್ 02): ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಕಾಣೆಯಾಗಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದಾರೆ. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ಅವರು ಆಗಾಗ ತೋಟದ‌ ಮನೆಗೆ ಬಂದು ತಂಗುತ್ತಿದ್ದರು. ಆದ್ರೆ, ಇಂದು(ಡಿಸೆಂಬರ್ 02) ಕಾಣೆಯಾಗಿದ್ದಾರೆ.

ಮಹದೇವಯ್ಯ ಅವರನ್ನು ಯಾರೋ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತೋಟದ ಮನೆಗೆ ಚನ್ನಪಟ್ಟಣ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಲ್ಲದೇ ಮಹದೇವಯ್ಯ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಇದರಿಂದ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.

ಇನ್ನು ಈ ಬಗ್ಗೆ ಯೋಗೇಶ್ವರ್ ಸಹೋದರ ಸಿ.ಪಿ.ರಾಜೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ತೋಟದ ಮನೆಗೆ ಬಂದು ನೋಡಿದಾಗ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆಗಿತ್ತು. ಬೇರೆ ಬೇರೆ ಕಾರು ಓಡಾಡಿರುವ ಸಾಧ್ಯತೆ ಇದೆ. ಹೀಗಾಗಿ ಮಹದೇವಯ್ಯರನ್ನು ಅಪಹರಣ ಮಾಡಿರುವ ಅನುಮಾನ ಇದೆ. ಅದಕ್ಕೆ ನಾವು ಪೊಲೀಸರಿಗೆ ಇರುವ ವಿಚಾರ ಹೇಳಿದ್ದೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sat, 2 December 23