AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಬೈ ಎಲೆಕ್ಷನ್: ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ ಫೈಟ್‌, ದಿಲ್ಲಿಯಿಂದ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಅಖಾಡ ರಂಗೇರುತ್ತಿದೆ. ಈಗಾಗಲೇ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಅಖಾಡಕ್ಕೆ ಧುಮುಕಿದ್ದಾರೆ. ಇತ್ತ ದೋಸ್ತಿ ಪಕ್ಷಗಳಾದ ​ ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. ಜೆಡಿಎಸ್​ ಅಭ್ಯರ್ಥಿಯನ್ನು ಕಣಕ್ಕಿಸಬೇಕಾ ಅಥವಾ ಬಿಜೆಪಿ ಕ್ಯಾಂಡಿಡೇಟ್ ಹಾಕಬೇಕಾ ಎನ್ನುವ ಚರ್ಚೆಗಳು ನಡೆದಿವೆ. ಹೀಗಾಗಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್​ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.

ಚನ್ನಪಟ್ಟಣ ಬೈ ಎಲೆಕ್ಷನ್: ಬಿಜೆಪಿ-ಜೆಡಿಎಸ್‌ ನಡುವೆ ಟಿಕೆಟ್‌ ಫೈಟ್‌, ದಿಲ್ಲಿಯಿಂದ ಯೋಗೇಶ್ವರ್ ಸ್ಫೋಟಕ ಹೇಳಿಕೆ
ಸಿಪಿ ಯೋಗೇಶ್ವರ್
ಹರೀಶ್ ಜಿ.ಆರ್​.
| Updated By: ರಮೇಶ್ ಬಿ. ಜವಳಗೇರಾ|

Updated on: Jun 26, 2024 | 3:28 PM

Share

ನವದೆಹಲಿ, (ಜೂನ್ 26): ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಆದ್ರೆ, ಇನ್ನೂ ಬೈ ಎಲೆಕ್ಷನ್​ಗೆ ದಿನಾಂಕ ಘೋಷಣೆ ಮಾಡಿಲ್ಲ. ಆಗಲೇ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ. ಅದರಲ್ಲೂ ದೋಸ್ತಿಗಳಾದ ಜೆಡಿಎಸ್ ಮತ್ತು ಬಿಜೆಪಿ ನಡುವೆ ಟಿಕೆಟ್​ ಫೈಟ್​ ಜೋರಾಗಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಯಾಗಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ದೆಹಲಿಗೆ ತೆರಳಿದ್ದು, ಟಿಕೆಟ್​ಗಾಗಿ ಕಸರತ್ತು ನಡೆಸಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಪಿ ಯೋಗೇಶ್ವರ್, ಸ್ಪರ್ಧೆ ಬಗ್ಗೆ ಬಹುಪಾಲು ನಿರ್ಣಯ ಕುಮಾರಸ್ವಾಮಿ ಮಾಡುತ್ತಾರೆ. ಕುಮಾರಸ್ವಾಮಿ ಆಶೀರ್ವಾದ ಇಲ್ಲದೆ ಏನು ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಇಂದು (ಜೂನ್ 26) ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್, ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ಎನ್​ಡಿಎಗೆ ನನ್ನ ಬೆಂಬಲವಿದೆ. ನಮ್ಮ ಪಕ್ಷದ ವರಿಷ್ಠರು ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ. ನಿಖಿಲ್ ಸ್ಪರ್ಧೆ ಮಾಡೋದಾದ್ರೆ ನನ್ನ ಸಂಪೂರ್ಣ ಬೆಂಬಲ ಇದೆ. ನಾನು ಯಾವುದೇ ಒಳಸಂಚು ಮಾಡಲ್ಲ, ಸಹಕಾರ ನೀಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್ ಸ್ಪರ್ಧಿಸಲ್ಲ: ಡಿಕೆಶಿ ರಾಜಕೀಯ ತಂತ್ರ ಬಿಚ್ಚಿಟ್ಟ ಜಿಟಿಡಿ

ಉಪಚುನಾವಣೆ ಹಿನ್ನೆಲೆ ರಾಷ್ಟ್ರೀಯ ನಾಯಕರನ್ನ ಭೇಟಿಯಾಗಿದ್ದೇನೆ. ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲು ಇನ್ನೂ ಕಾಲಾವಕಾಶ ಬೇಕು. ಡಿಸಿಎಂ ವಾರದಲ್ಲಿ ಎರಡು ದಿನ ಕ್ಷೇತ್ರದಲ್ಲಿ ಠಿಕಾಣಿ ಹೂಡುತ್ತಿದ್ದಾರೆ. ಈ ಹಿಂದೆ ಚನ್ನಪಟ್ಟಣಕ್ಕೆ ತಿರುಗಿನೋಡದವರು ಮತ್ತೆ ಬಂದಿದ್ದಾರೆ. ಕಾಂಗ್ರೆಸ್​ನಿಂದ ಡಿಕೆ ಕುಟುಂಬದವರೇ ನಿಲ್ತಾರೆಂಬುದು ನಮ್ಮ ಅಭಿಪ್ರಾಯ. ಡಿಕೆಶಿ ಕುಟುಂಬದವರೇ ನಿಂತರೆ ದೊಡ್ಡ ಹೋರಾಟ ನಡೆಯಲಿದೆ. ಚನ್ನಪಟ್ಟಣ ಮತದಾರರು ಕುಮಾರಸ್ವಾಮಿ ಮತ್ತು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಡಿಕೆ ಉಪಚುನಾವಣೆ ಗೆದ್ದು ರಾಜ್ಯ ಗೆಲ್ಲಬೇಕು ಅಂದುಕೊಂಡಿದ್ದಾರೆ ಎಂದರು.

ಜೋರಾದ ಟಿಕೆಟ್‌ ಫೈಟ್

ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಜೆಡಿಎಸ್ ಕಾರ್ಯಕರ್ತರಿಂದ ಕ್ಯಾಂಪೇನ್ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ಒತ್ತಾಯ ಕೇಳಿಬರುತ್ತಿದೆ. ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಿಳಿಸುವಂತೆ ಎನ್‌ಡಿಎ ಮೈತ್ರಿಕೂಟಕ್ಕೆ ಆಗ್ರಹ ಮಾಡಲಾಗುತ್ತಿದೆ. ಎರಡು ಬಾರಿ ಸೋತಿರೋ ನಿಖಿಲ್‌ಗೆ ಚನ್ನಪಟ್ಟಣ ಟಿಕೆಟ್ ನೀಡಲು ಒತ್ತಾಯ ಕೇಳಿಬರುತ್ತಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲು ನಿಖಿಲ್ ನಿಲ್ಲುವಂತೆ ಒತ್ತಡ ಹೇರಲಾಗುತ್ತಿದೆ. ನಿಖಿಲ್ ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದಾಗಿ ಕಾರ್ಯಕರ್ತರು ಹೇಳುತ್ತಿದ್ದು, ಸಿ.ಪಿ.ಯೋಗೇಶ್ವರ್ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ.

ಸಿಪಿ ಯೋಗೇಶ್ವರ್​​ಗೆ ತಾಲೂಕಿನ ನಾಡಿಮಿಡಿತ ಗೊತ್ತಿದೆ. ಕಾಂಗ್ರೆಸ್ ಎದುರಿಸಲು ಸಿಪಿವೈ ಸಮರ್ಥ ಅಭ್ಯರ್ಥಿ ಎಂದು ಬೆಂಬಲಿಗರು ಹೇಳುತ್ತಿದ್ದಾರೆ. ಡಾ.ಮಂಜುನಾಥ್ ಗೆಲುವಿಗೆ ಸಿ.ಪಿ.ಯೋಗೇಶ್ವರ್ ಹೋರಾಟ ನಡೆಸಿದ್ದು, ಉಪಚುನಾವಣೆ ಟಿಕೆಟ್ ನೀಡುವಂತೆ ಚನ್ನಪಟ್ಟಣ ತಾಲೂಕು ಬಿಜೆಪಿ ಘಟಕ ಒತ್ತಾಯ ಮಾಡುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ