ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ: ಸತ್ಯ ಬಾಯಿಬಿಟ್ಟ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿತ್ತು. ಇದೇ ವೇಳೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಪುಷ್ಠಿ ಎಂಬಂತಿದೆ ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಅವರ ಮಾತು. ಹೌದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಗೆಲುವಿಗೆ ಸಹಯಾ ಮಾಡಿದ್ದೆ ಎಂದು ಸ್ವತಃ ಸಿಪಿ ಯೋಗೇಶ್ವರ್ ಅವರೇ ಬಾಯಿಬಿಟ್ಟಿದ್ದಾರೆ.

ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ: ಸತ್ಯ ಬಾಯಿಬಿಟ್ಟ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಡಿಕೆ ಸುರೇಸ್ ಗೆಲುವಿಗೆ ಸಹಾಯ ಮಾಡಿದ್ದೆ ಎಂದು ಹೇಳಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
Follow us
| Updated By: Rakesh Nayak Manchi

Updated on:Mar 25, 2024 | 4:25 PM

ರಾಮನಗರ, ಮಾ.25: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿತ್ತು. ಇದೇ ವೇಳೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು. ಇದಕ್ಕೆ ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ (CP Yogeshwar) ಅವರ ಹೇಳಿಕೆ ಪುಷ್ಟಿ ಎಂಬಂತಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ (DK Suresh) ಅವರ ಗೆಲುವಿಗೆ ಸಹಾಯ ಮಾಡಿದ್ದೆ ಎಂದು ಯೋಗೇಶ್ವರ್ ಅವರೇ ಬಾಯಿಬಿಟ್ಟಿದ್ದಾರೆ.

ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಹೆಚ್ಚು ಆರೋಪ ಮಾಡಿದವರ ಪೈಕಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ಯತ್ನಾಳ್, ಯಾವುದೇ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ ಸೋಲು ಖಚಿತ ಎಂದು ಹೇಳಿದ್ದರು. ಆ ಮೂಲಕ ಪರೋಕ್ಷವಾಗಿ ಬಿಜೆಪಿಯಲ್ಲಿನ ಕೆಲವು ನಾಯಕರಿಗೆ ಟಾಂಗ್ ಕೊಟ್ಟಿದ್ದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಲಾಗಿತ್ತು ಎಂದು ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದರು. ಈ ಆರೋಪವು ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಅವರಿಗೆ ಸಂಬಂಧಿಸಿದ್ದಾಗಿದೆ ಎಂಬ ಚರ್ಚೆಗಳು ನಡೆದಿದ್ದವು. ಹೊಂದಾಣಿಕೆ ರಾಜಕಾರಣದ ಬಗ್ಗೆ ವಿಧಾನಸಭೆ ಅಧಿವೇಶದಲ್ಲೂ ಸಿದ್ದರಾಮಯ್ಯ ಮತ್ತು ಯತ್ನಾಳ್ ನಡುವೆ ವಾಗ್ವಾದ ನಡೆದಿತ್ತು.

ಇದನ್ನೂ ಓದಿ: ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ: ವಿಜಯೇಂದ್ರ ಕ್ಷೇತ್ರದಲ್ಲಿ ಗುಡುಗಿದ ಕೆಎಸ್ ಈಶ್ವರಪ್ಪ

ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಅವರು ಹಣ ಕಳುಹಿಸಿದ್ದರು. ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಅಡ್ಜೆಸ್ಟ್​ಮೆಂಟ್ ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ಅವರು ಪಂಚಮಸಾಲಿ ಸಮುದಾಯದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮುಂದೆ ಹೇಳಿಕೊಂಡಿದ್ದರು. ನಿನ್ನೆಯಷ್ಟೇ ಮಾತನಾಡಿದ್ದ ಶಿವಮೊಗ್ಗ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಅವರು ಶಿಕಾರಿಪುರದಲ್ಲಿ ಕಾಂಗ್ರೆಸ್​ ಜತೆ ಹೊಂದಾಣಿಕೆ ಮಾಡಿಕೊಂಡು ವಿಜಯೇಂದ್ರ ಅವರು ಗೆದ್ದಿದ್ದಾರೆ ಆರೋಪಿಸಿದ್ದರು. ಈ ಎಲ್ಲಾ ಬೆಳವಣಿಗಳ ನಡುವೆ ತಾನು ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಜೊತೆ ಹೊಂದಾಣಿಕೆ ಮಾಡಿಕೊಂಡ ಬಗ್ಗೆ ಯೋಗೇಶ್ವರ್ ಹೇಳಿಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ರಾಮನಗರ ಜಿಲ್ಲೆ ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆಯಲ್ಲಿ ಸಿಪಿ ಯೋಗೇಶ್ವರ್ ಅವರು ಈ ಸತ್ಯಸಂಗತಿಯನ್ನು ಬಾಯಿಬಿಟ್ಟಿದ್ದಾರೆ. ನನ್ನ ತಮ್ಮನನ್ನು ಗೆಲ್ಲಿಸಿಕೊಡಿ ಎಂದು ಡಿ.ಕೆ.ಶಿವಕುಮಾರ್ ಅವರು ಕಾಲಿಗೆ ಬಿದ್ದಿದ್ದರು. ಹೀಗಾಗಿ ಅಂದು ನಾನು ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ ಎಂದಿದ್ದಾರೆ. ಅಲ್ಲದೆ, ರಾಜಕೀಯ ವ್ಯವಸಾಯದಲ್ಲಿ ಡಿಕೆ ಬ್ರದರ್ಸ್ ಪ್ರವೀಣರು ಎಂದು ಹೇಳಿದ ಯೋಗೇಶ್ವರ್, ಡಿಕೆ ಬ್ರದರ್ಸ್ ಪ್ರತಿ ವರ್ಷ ಆಸ್ತಿ ಹೆಚ್ಚಿಸಿಕೊಂಡು ಶ್ರೀಮಂತರಾಗುತ್ತಿದ್ದಾರೆ ಎಂದರು.

ಚನ್ನಪಟ್ಟಣದಲ್ಲಿ ಬಿಜೆಪಿ, ಜೆಡಿಎಸ್​ನವರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಉಳಿದ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಸಿಗುತ್ತದೆ ಎಂದ ಯೋಗೇಶ್ವರ್, ಶಿವಮೊಗ್ಗದಲ್ಲಿ ಡಾ.ಮಂಜುನಾಥ್ ಮೋದಿರನ್ನು ಭೇಟಿ ಮಾಡಿದ್ದರು. ಹೆಚ್ಚು ಮತಗಳ ಅಂತರದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್​ ಅವರನ್ನು ಗೆಲ್ಲಿಸಲು ಮೋದಿ ಕರೆ ಕೊಟ್ಟಿದ್ದಾರೆ. ಮಂಜುನಾಥ್ ಗೆಲ್ಲಿಸಲು ಎರಡೂ ಪಕ್ಷಗಳು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೂಡಾ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಹೆಚ್ ಡಿ ಕುಮಾರಸ್ವಾಮಿ ಕುಕ್ಕರ್ ಬಾಂಬ್! ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸುರೇಶ್ 4 ಲಕ್ಷಕ್ಕೂ ಹೆಚ್ಚು ಕುಕ್ಕರ್ ಹಂಚಿಕೆ?

ಡಿ.ಕೆ.ಬ್ರದರ್ಸ್​​ಗೆ ಆಡಳಿತ ವಿರೋಧಿ ಅಲೆ ಇದೆ. ರಾಮನಗರ ಕ್ಷೇತ್ರದ ಶಾಸಕ ಗಂಡಸ್ತನದ ವಿಚಾರ ಚರ್ಚೆ ಮಾಡುತ್ತಾನೆ. ಅವನಿಗೆ ಜನ ತಕ್ಕಪಾಠ ಕಲಿಸುತ್ತಾರೆ. ಡಿ.ಕೆ.ಸುರೇಶ್ ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಕನಕಪುರ ಇಬ್ಬಾಗ ಮಾಡಾಯ್ತು, ಈಗ ದೇಶ ಇಬ್ಭಾಗ ಮಾಡಲು ಹೋಗುತ್ತಿದ್ದಾರೆ. ಸ್ಟಾಲಿನ್ ಜೊತೆ ಸೇರಿ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದಾರೆ. ಈ ಚುನಾವಣೆಯಲ್ಲಿ ಡಿಕೆ ಬ್ರದರ್ಸ್​ಗೆ ತಕ್ಕ ಪಾಠ ಕಲಿಸಬೇಕು ಎಂದರು.

ಚುನಾವಣೆ ಕೊನೆ ದಿನದವರೆಗೂ ನಾನು ನಿಮ್ಮ ಜೊತೆ ನಿಲ್ಲುತ್ತೇನೆ. ನೀವು ಯಾರಿಗೂ ಹೆದರದೇ ಚುನಾವಣೆ ಮಾಡಿ. ಇಲ್ಲಿ ಫ್ರಾಕ್ಸಿ ಮತಗಳು (ಕಳ್ಳ ವೋಟ್) ಬೀಳುವ ಆತಂಕ ಇದೆ. ಫ್ಯಾರಾಮಿಲಿಟರಿ ಕರೆಸಿ ಇಲ್ಲಿ ಪಾರದರ್ಶಕ ಚುನಾವಣೆ ಮಾಡುತ್ತೇವೆ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿ ಆಗಿದೆ. ಈ ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳು ನಿಲ್ಲುತ್ತವೆ. ಸರ್ಕಾರದಲ್ಲಿ ಹಣ ಇಲ್ಲ ಎಂಬುದು ಗೊತ್ತಾಗುತ್ತಿದೆ. ಕಾಂಗ್ರೆಸ್ ನಾಯಕರು ಸರ್ಕಾರದ ಖಜಾನೆ ಖಾಲಿ ಮಾಡಿದ್ದಾರೆ. ಹಾಗಾಗಿ ಇದನ್ನ ಜನ ಗಮನದಲ್ಲಿಟ್ಟುಕೊಂಡು ಮತಹಾಕಬೇಕು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Mon, 25 March 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!