ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಬಿ ಎಸ್​ ಯಡಿಯೂರಪ್ಪ ತಿರುಗೇಟು

ಭಾರತ್​ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಿಸಿದೆ: ರಾಹುಲ್​ ಗಾಂಧಿ ಆರೋಪಕ್ಕೆ ಯಡಿಯೂರಪ್ಪ ತಿರುಗೇಟು
ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 09, 2022 | 4:16 PM

ರಾಮನಗರ: ಆ ಮನುಷ್ಯನಿಗೆ (ರಾಹುಲ್​ ಗಾಂಧಿ) (Rahul Gandhi)  ಗೆ ನಾನು ಪ್ರಶ್ನೆ ಮಾಡುತ್ತೇನೆ, ಉತ್ತರ ಪ್ರದೇಶದಲ್ಲಿ ನಿಮ್ಮ ತಂಗಿ (ಪ್ರಿಯಾಂಕಾ ಗಾಂಧಿ), ಮಹಿಳೆಯರನ್ನು ಸೇರಿಸಿ ಪ್ರಚಾರ ಮಾಡಿದರಲ್ಲಾ ಏನಾಯ್ತು? ಹಾಗೇ  ಭಾರತ್ ಜೋಡೋ (Bharat Jodo Yatra)  ದಿಂದ ಏನೂ ಆಗಲ್ಲ ಎಂದು ಕಾಂಗ್ರೇಸ್​ನ ಭಾರತ್ ಜೋಡೋ ಯಾತ್ರೆಗೆ ಹೆದರಿ ಬಿಜೆಪಿ ಮೀಸಲಾತಿ ಹೆಚ್ಚಳ ಮಾಡಿದೆ ಎಂಬ ರಾಹಲ್​ ಗಾಂಧಿ ಹೇಳಿಕೆಗೆ ರಾಮನಗರದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಬಿ ಎಸ್​ ಯಡಿಯೂರಪ್ಪ (BS Yadiyurappa) , ರಾಹುಲ್​ ಗಾಂಧಿ ವಿರುದ್ಧ  ತಿರುಗೇಟು ನೀಡಿದ್ದಾರೆ ಮಾಡಿದ್ದಾರೆ.

ದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಹೇಳ ಹೆಸರು ಇಲ್ಲದಂತಾಗಿದೆ. ರಾಜ್ಯದಲ್ಲಿ ಮಾತ್ರ ಉಸಿರಾಡುತ್ತಿದೆ. ಇಲ್ಲಿ ಬಂದು ಮನಬಂದಂತೆ ಮಾತಾಡಿದರೆ ಪ್ರಯೋಜನವಾಗಲ್ಲ. ಕರ್ನಾಟಕದಲ್ಲೂ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಟಿಪ್ಪು ಎಕ್ಸ್​ಪ್ರೆಸ್ ರೈಲಿಗೆ, ಒಡೆಯರ್​ ಎಕ್ಸ್​ಪ್ರೆಸ್ ಎಂದು ಮರುನಾಮಕರಣ ಮಾಡಿರುವುದಕ್ಕೆ ವಿರೋಧ ಪಕ್ಷಗಳು ವಿರೋಧಿಸಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಅವರು ಸಿದ್ದರಾಮಯ್ಯ ಅವರಿಗೆ ಅಲ್ಪ ಸಂಖ್ಯಾತರನ್ನು ಒಲೈಸುವ ಚಟ ಇದೆ. ಹೀಗಾಗಿ ಈ ರೀತಿಯ ಮಾತುಗಳನ್ನು ಆಡುತ್ತಾರೆ. ಇಡೀ ದೇಶ ಹಾಗೂ ರಾಜ್ಯದ ಜನರು ಇದನ್ನು ಸ್ವಾಗತಿಸಿದ್ದಾರೆ. ಎಲ್ಲರೂ ಸ್ವಾಗತ ಮಾಡುವ ಈ ಸಂಧರ್ಭದಲ್ಲಿ ಕೆಲವರಿಗೆ ಬೇಜಾರಾಗೋದು ಸಹಜ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಅದನ್ನು ನನ್ನ ಹತ್ತಿರ ಕೇಳಬೇಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕೇಳಿ. ರಾಜ್ಯದಲ್ಲಿ 140 ಸ್ಥಾನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಯಾರೇ ಎಷ್ಟೇ ಬೊಬ್ಬೆ ಹೊಡೆದರೂ ನಾವೇ ಅಧಿಕಾರಕ್ಕೆ ಬರುತ್ತೇವೆ. 2 ದಿನದ ಬಳಿಕ 2 ತಂಡವಾಗಿ ರಾಜ್ಯ ಪ್ರವಾಸ ಆರಂಭ ಮಾಡುತ್ತೇವೆ. ಸುಮಾರು 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ