AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿ.ಪಿ. ಯೋಗೇಶ್ವರ್ ಬಾವನ ಕೊಲೆ ಪ್ರಕರಣ; ಹಾವು ಕಚ್ಚಿ‌ ಟ್ರೀಟ್ಮೆಂಟ್ ಪಡೀತಿದ್ದ ತಮಿಳುನಾಡು ಮೂಲದ ವ್ಯಕ್ತಿ ವಶಕ್ಕೆ

ಸಿ.ಪಿ. ಯೋಗೇಶ್ವರ್ ಬಾವ ಮಹದೇವಯ್ಯ ಪಿ. ಅವರ ಕೊಲೆ ಪ್ರಕರಣ ಸಂಬಂಧ ತಮಿಳುನಾಡು ಮೂಲದ ಆರೋಪಿಯನ್ನು‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುರುಗೇಶ್​ ಬಲಗಾಲಿಗೆ ಹಾವು ಕಚ್ಚಿದ ಕಾರಣ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಈಗ ಆರೋಪಿ ಮುರುಗೇಶ್​ಗೆ ಚನ್ನಪಟ್ಟಣ ‌ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಸಿ.ಪಿ. ಯೋಗೇಶ್ವರ್ ಬಾವನ ಕೊಲೆ ಪ್ರಕರಣ; ಹಾವು ಕಚ್ಚಿ‌ ಟ್ರೀಟ್ಮೆಂಟ್ ಪಡೀತಿದ್ದ ತಮಿಳುನಾಡು ಮೂಲದ ವ್ಯಕ್ತಿ ವಶಕ್ಕೆ
ಚನ್ನಪಟ್ಟಣ ಗ್ರಾಮಾಂತರ ಪೊಲೀಸರ್ ಠಾಣೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಆಯೇಷಾ ಬಾನು|

Updated on:Dec 16, 2023 | 12:14 PM

Share

ರಾಮನಗರ, ಡಿ.16: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ (CP Yogeshwar) ಬಾವ ಮಹದೇವಯ್ಯ ಪಿ. ಅವರ ಕೊಲೆ (Murder) ಪ್ರಕರಣ ಸಂಬಂಧ ತಮಿಳುನಾಡು ಮೂಲದ ಆರೋಪಿಯನ್ನು‌ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಶುಕ್ರವಾರ ತಮಿಳುನಾಡಿನ ಧರ್ಮಪುರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಮುರುಗೇಶ್ ವಶಕ್ಕೆ ಪಡೆಯಲಾದ ಆರೋಪಿ. ಮುರುಗೇಶ್​ ಬಲಗಾಲಿಗೆ ಹಾವು ಕಚ್ಚಿದ ಕಾರಣ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಈಗ ಆರೋಪಿ ಮುರುಗೇಶ್​ಗೆ ಚನ್ನಪಟ್ಟಣ ‌ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದೇ‌ ತಿಂಗಳ 2‌ನೇ‌ ತಾರೀಖು ಶುಕ್ರವಾರ ಮಧ್ಯ ರಾತ್ರಿ‌ ಆರೋಪಿ ಮುರುಗೇಶ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆ ಮಾಡಿದ ನಂತರ ಹಂತಕರು ಕಾಡಿನಲ್ಲಿ ಮೃತದೇಹ ಅಡಗಿಸಿಟ್ಟಿದ್ದರು. ಮೂರು ಜನರ ಪೈಕಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹದೇವಯ್ಯ ಪಕ್ಕದ‌ ಜಮೀನಿನಲ್ಲಿ ಆರೋಪಿ ಮುರುಗೇಶ್ ಕೆಲಸ ಮಾಡುತ್ತಿದ್ದ. ಎರಡು ತಿಂಗಳ ಹಿಂದಿನಿಂದ ಕೆಲಸಕ್ಕೆ ಬರ್ತಾ ಇರಲಿಲ್ಲ. ಹಲವು ಸಿಸಿ ಟಿವಿ ಪರಿಶೀಲನೆ ಬಳಿಕ ವಶಕ್ಕೆ ಪಡೆಯಲಾಗಿದೆ. ಚಿಕಿತ್ಸೆ ಬಳಿಕ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೋರ್ಟ್ ಗೆ ಪ್ರೊಡ್ಯೂಸ್ ಮಾಡಲಿದ್ದಾರೆ.

ಇದನ್ನೂ ಓದಿ: ಸಿಪಿ ಯೋಗೇಶ್ವರ್ ಸಂಬಂಧಿ ರಿಯಲ್ಟರ್ ಮಹದೇವಯ್ಯ ಹತ್ಯೆಗೆ ಸುಪಾರಿ ನೀಡಲಾಗಿತ್ತೇ?

ಘಟನೆ ಹಿನ್ನೆಲೆ

ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ರವರ ಬಾವ ಮಹಾದೇವಯ್ಯ ಚನ್ನಪಟ್ಟಣದ ವಡ್ಡರದೊಡ್ಡಿಯ ತೋಟದ ಮನೆಯಿಂದ ತಡರಾತ್ರಿ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದರು. ಪ್ರಕರಣ ಸುತ್ತ ಸಾಕಷ್ಟು ಅನುಮಾನ ವ್ಯಕ್ತವಾಗಿತ್ತು. ಮಹದೇವಯ್ಯರನ್ನ ಕಿಡ್ನಾಪ್ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಕುಟುಂಬಸ್ಥರು ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಿಸಿದ್ರು. ಪ್ರಕರಣ ಬೆನ್ನತ್ತಿದ ಪೊಲೀಸರಿಗೆ ಚಾಮರಾಜನಗರ ಜಿಲ್ಲೆ ಹನೂರಿನ ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯ ಕಾರು ಪತ್ತೆಯಾಗಿ, ಕಾರಿನ ಹಿಂಭಾಗ ರಕ್ತದ ಕಲೆ ಇದ್ದ ಹಿನ್ನೆಲೆ ಮಹದೇವಯ್ಯರನ್ನ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಕಾರು ನಿಲ್ಲಿಸಿದ್ದ ಸುತ್ತಮುತ್ತಿನ ಸ್ಥಳಗಳ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಕಿಡ್ನಾಪ್ ಮಾಡಿದ್ದ ಆರೋಪಿಗಳ ಚಲನವಲನಗಳ ಆಧರಿಸಿ ರಾಮಾಪುರ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಪರಿಶೀಲನೆ ನಡೆಸಿದಾಗ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆಗೈದು ಶವ ಬಿಸಾಡಿ ಹೋಗಿದ್ದು ಬೆಳಕಿಗೆ ಬಂದಿತ್ತು.

ರಿಯಲ್ ಎಸ್ಟೇಟ್ ಉದ್ಯಮ, ಜಮೀನು ವ್ಯವಹಾರ ನೋಡಿಕೊಳ್ತಿದ್ದ ಮಹದೇವಯ್ಯ ಅವರನ್ನು ಇಷ್ಟೊಂದು ಕ್ರೂರವಾಗಿ ಹತ್ಯೆಗೈಯಲು ಕಾರಣ ಏನು ಎಂಬುದರ ಹಿಂದೆ ಹೊರಟ ಪೋಲಿಸರಿಗೆ ಕೆಲವೊಂದು ಸಾಕ್ಷ್ಯಾಧಾರಗಳು ಸಿಕ್ಕಿದ್ದವು. ತನಿಖೆ ಚುರುಕುಗೊಳಿಸಿದ ಪೊಲೀಸರು ಮೂವರು ಆರೋಪಿಗಳ ಪೈಕಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:08 pm, Sat, 16 December 23

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್