Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಏಕಾಏಕಿ ಸ್ಫೋಟಗೊಂಡ ಕಾರು; ವ್ಯಕ್ತಿ ಸಜೀವ ದಹನ

Car Blast: ಸ್ಫೋಟದ ತೀವ್ರತೆಗೆ ವಸ್ತುಗಳು ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಮನಗರ: ಏಕಾಏಕಿ ಸ್ಫೋಟಗೊಂಡ ಕಾರು; ವ್ಯಕ್ತಿ ಸಜೀವ ದಹನ
Follow us
TV9 Web
| Updated By: ganapathi bhat

Updated on:Aug 16, 2021 | 5:06 PM

ರಾಮನಗರ: ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ ಸಂಭವಿಸಿದೆ. ಕೆಎ 51, ಪಿ 3384 ನೋಂದಣಿ ಕಾರು ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ವಸ್ತುಗಳು ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಫೋಟದ ತೀವ್ರತೆಗೆ ಕಾರಿನಲ್ಲಿದ್ದ ವಸ್ತುಗಳು ಸಹಿತ ಕಾರಿನ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ. ಕಾರ್ ಸ್ಫೋಟದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಾರ್ ಏಕಾಏಕಿ ಹೇಗೆ ಸ್ಫೋಟವಾಯಿತು, ಅದು ಯಾವ ಕಾರ್ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕಾರ್​ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಆದರೆ, ವ್ಯಕ್ತಿಯ ಪರಿಚಯದ ಬಗ್ಗೆಯೂ ಮಾಹಿತಿ ಲಭಿಸಿಲ್ಲ. ಪ್ರಕರಣವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Car Blast Burn Ramanagara

ಕಾರಿನ ಸ್ಫೋಟದ ತೀವ್ರತೆಗೆ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು

ಶಿವಮೊಗ್ಗ: ಹೊತ್ತಿಉರಿದ ಬೆಂಜ್ ಕಾರ್  ಆಕಸ್ಮಿಕ ಬೆಂಕಿಯಿಂದ ಬೆಂಜ್ ಕಾರ್ ಒಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದ ಸಮೀಪ ಭಾನುವಾರ (ಆಗಸ್ಟ್ 15) ನಡೆದಿತ್ತು. ಆಕಸ್ಮಿಕ ಬೆಂಕಿಯಿಂದಾಗಿ ಕಾರು ರಸ್ತೆಯಲ್ಲೇ ಹೊತ್ತಿ ಉರಿದಿತ್ತು. ಶಿವಮೊಗ್ಗದ ಮುರಳಿ ಎಂಬವರಿಗೆ ಸೇರಿದ ಬೆಂಜ್​ ಕಾರು ಅಗ್ನಿಗೆ ಆಹುತಿ ಆಗಿತ್ತು. ಗುಳಿಗುಳಿ ಶಂಕರ ದೇಗುಲದಿಂದ ಹಿಂದಿರುಗುವಾಗ ಘಟನೆ ಸಂಭವಿಸಿತ್ತು. ಅದೃಷ್ಟವಶಾತ್​ ಕಾರಿನಲ್ಲಿ ಇದ್ದ ಇಬ್ಬರು ಕೂಡ ಅಪಾಯದಿಂದ ಪಾರಾಗಿದ್ದರು. ರಿಪ್ಪನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕೊಪ್ಪಳದಲ್ಲಿ ಎರಡು ಲಾರಿಗಳ ನಡುವೆ ಅಪಘಾತ; ಲಾರಿಗಳ ನಡುವಲ್ಲಿ ಸಿಕ್ಕಿಕೊಂಡ ನಾಲ್ವರು

Afghanistan: ಕಾಬೂಲ್​ನಿಂದ ಅಮೆರಿಕಕ್ಕೆ ಹೋಗುತ್ತಿದ್ದ ವಿಮಾನದಿಂದ ಕೆಳಗೆ ಬಿದ್ದು ಇಬ್ಬರ ದುರ್ಮರಣ

(Car Blast in Ramanagara Kanakapur Marale Village One Person Died in incident)

Published On - 4:45 pm, Mon, 16 August 21

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್