AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ

ಕರ್ನಾಟಕ ಸರ್ಕಾರದಿಂದ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಈ ಪ್ರಸ್ತಾವಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒತ್ತಾಯಿಸಿದ್ದರು. ಕೇಂದ್ರದ ನಿರ್ಧಾರದಿಂದ ಅವರಿಗೆ ಹಿನ್ನಡೆಯಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಡಿಕೆ ಶಿವಕುಮಾರ್​ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ
ರಾಮನಗರ, ಡಿಕೆ ಶಿವಕುಮಾರ್
ಹರೀಶ್ ಜಿ.ಆರ್​.
| Edited By: |

Updated on:Mar 19, 2025 | 1:37 PM

Share

ನವದೆಹಲಿ/ಬೆಂಗಳೂರು, ಮಾರ್ಚ್​ 19: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರವನ್ನು (Ramanagara) ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಹೆಸರು ಬದಲಾವಣೆಗೆ ಒತ್ತಾಯಿಸಿದ ನಂತರ ಈ ನಿರ್ಧಾರ ಬಂದಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ (Bangalore South) ಜಿಲ್ಲೆ ಎಂದು ಮರುನಾಮಕರಣ ಮಾಡುವ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿತ್ತು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಕೂಡ ಸಲ್ಲಿಸಿತ್ತು. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದ ಕನಸನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಕಂಡಿದ್ದರು. ಆದರೆ, ಇದೀಗ ಕೇಂದ್ರ, ಕರ್ನಾಟಕ ಸರ್ಕಾರದ ನಿರ್ಧಾರವನ್ನು ತಿಸ್ಕರಿಸಿದ್ದರಿಂದ ಡಿಕೆ ಶಿವಕುಮಾರ್ ಅವರ ಕನಸು ಭಗ್ನವಾಗಿದೆ.

ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣದ ಕಿಡಿ ಹೊತ್ತಿಸಿದ್ದರು. ಇದು, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್​ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ
Image
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
Image
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
Image
ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ: ಕುಮಾರಸ್ವಾಮಿ ಪತ್ರ
Image
ರಾಮನಗರ ಜಿಲ್ಲೆ ಹೆಸರು ಬದಲಾವಣೆ ಹಿಂದಿನ ಡಿಕೆಶಿ ತಂತ್ರವೇನು?

ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣದ ಕಿಡಿ ಹೊತ್ತಿಸಿದ್ದರು. ಇದು, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್​ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಡಿಕೆ ಶಿವಕುಮಾರ್ ಅವರ ಈ ಯೋಚನೆ ತಮ್ಮ ಬೇನಾಮಿ ಆಸ್ತಿ ಸಕ್ರಮ ಮಾಡಿಕೊಳ್ಳುವ ಪ್ಲಾನ್ ಆಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ತೆರವು ಕಾರ್ಯಾಚರಣೆ: ಹೆಚ್​ಡಿ ಕುಮಾರಸ್ವಾಮಿ ಮುಂದಿನ ಪ್ಲಾನ್ ಹೀಗಿದೆಯಂತೆ!

ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು. ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚಾಗಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ನಾವು ಹೆಸರು ಬದಲಾವಣೆ ಮಾಡಲು ಮುಂದಾಗಿರುವುದರ ವಿರುದ್ಧ ಕೇಂದ್ರದಲ್ಲಿ ಹೋಗಿ ತಕರಾರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.

ಕನಕಪುರ ಜನತೆಗೆ ಭರವಸೆ ನೀಡಿದ್ದ ಡಿಕೆ ಶಿವಕುಮಾರ್

ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನು ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿʼ ಎಂದು ಡಿಕೆ ಶಿವಕುಮಾರ್ ಅವರು ಕನಕಪುರ ಜನತೆ ಮುಂದೆ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Wed, 19 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್