ನವದೆಹಲಿ/ಬೆಂಗಳೂರು, ಮಾರ್ಚ್ 19: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಮನಗರವನ್ನು (Ramanagara) ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಹೆಸರು ಬದಲಾವಣೆಗೆ ಒತ್ತಾಯಿಸಿದ ನಂತರ ಈ ನಿರ್ಧಾರ ಬಂದಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ (Bangalore South) ಜಿಲ್ಲೆ ಎಂದು ಮರುನಾಮಕರಣ ಮಾಡುವ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿತ್ತು. ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಕೂಡ ಸಲ್ಲಿಸಿತ್ತು. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣದ ಕನಸನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಂಡಿದ್ದರು. ಆದರೆ, ಇದೀಗ ಕೇಂದ್ರ, ಕರ್ನಾಟಕ ಸರ್ಕಾರದ ನಿರ್ಧಾರವನ್ನು ತಿಸ್ಕರಿಸಿದ್ದರಿಂದ ಡಿಕೆ ಶಿವಕುಮಾರ್ ಅವರ ಕನಸು ಭಗ್ನವಾಗಿದೆ.
ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣದ ಕಿಡಿ ಹೊತ್ತಿಸಿದ್ದರು. ಇದು, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿತ್ತು.
ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣದ ಕಿಡಿ ಹೊತ್ತಿಸಿದ್ದರು. ಇದು, ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿತ್ತು. ಡಿಕೆ ಶಿವಕುಮಾರ್ ಅವರ ಈ ಯೋಚನೆ ತಮ್ಮ ಬೇನಾಮಿ ಆಸ್ತಿ ಸಕ್ರಮ ಮಾಡಿಕೊಳ್ಳುವ ಪ್ಲಾನ್ ಆಗಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ವಾಗ್ದಾಳಿ ಮಾಡಿದ್ದರು.
ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ತೆರವು ಕಾರ್ಯಾಚರಣೆ: ಹೆಚ್ಡಿ ಕುಮಾರಸ್ವಾಮಿ ಮುಂದಿನ ಪ್ಲಾನ್ ಹೀಗಿದೆಯಂತೆ!
ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು. ಹೆಚ್ಡಿ ಕುಮಾರಸ್ವಾಮಿ ಅವರಿಗೆ ಅಭಿವೃದ್ಧಿಗಿಂತ ದ್ವೇಷ ರಾಜಕಾರಣವೇ ಹೆಚ್ಚಾಗಿದೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ನಾವು ಹೆಸರು ಬದಲಾವಣೆ ಮಾಡಲು ಮುಂದಾಗಿರುವುದರ ವಿರುದ್ಧ ಕೇಂದ್ರದಲ್ಲಿ ಹೋಗಿ ತಕರಾರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದರು.
ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನು ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿʼ ಎಂದು ಡಿಕೆ ಶಿವಕುಮಾರ್ ಅವರು ಕನಕಪುರ ಜನತೆ ಮುಂದೆ ಹೇಳಿದ್ದರು.
Published On - 1:00 pm, Wed, 19 March 25