ಚನ್ನಪಟ್ಟಣ ಉಪಚುನಾವಣೆಗೆ ಕ್ಷಣಗಣನೆ: ಅಖಾಡದಲ್ಲಿ ಹೆಚ್​​ಡಿಕೆ ಕುಮಾರಸ್ವಾಮಿ ಅಬ್ಬರ

ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ದಿನೇ ದಿನೇ ರಾಜಕೀಯ ನಾಯಕರ ಸುತ್ತಾಟವೂ ಜೋರಾಗುತ್ತಿದೆ. ಮತದಾರರನ್ನು ಸೆಳೆಯಲು ತೆರೆಮರೆಯಲ್ಲೇ ರಣತಂತ್ರ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ರಾಮನಗರದಲ್ಲಿ 500 ಕೋಟಿ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ಕೊಟ್ಟಿದ್ದರು. ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಚನ್ನಪಟ್ಟಣದ ಅಖಾಡಕ್ಕಿಳಿದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಕ್ಷಣಗಣನೆ: ಅಖಾಡದಲ್ಲಿ ಹೆಚ್​​ಡಿಕೆ ಕುಮಾರಸ್ವಾಮಿ ಅಬ್ಬರ
ಹೆಚ್​ಡಿ ಕುಮಾರಸ್ವಾಮಿ
Follow us
| Updated By: ಗಣಪತಿ ಶರ್ಮ

Updated on: Oct 06, 2024 | 5:51 PM

ರಾಮನಗರ, ಅಕ್ಟೋಬರ್ 6: ಚನ್ನಪಟ್ಟಣ ಬೈಎಲೆಕ್ಷನ್​ಗೆ ಕೌಂಟ್​ಡೌನ್​ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗಲು ಡಿಕೆ ಸಹೋದರರು​, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೆಯುತ್ತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರುವ ಇಬ್ಬರು ಕೂಡ ನಾನಾ ತಂತ್ರಗಾರಿಕೆ ಮಾಡುತ್ತಿದ್ದಾರೆ. ಕಳೆದ ತಿಂಗಳಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಯೋಚನೆಗೆ ಚಾಲನೆ ಕೊಟ್ಟಿದ್ದರು. ಹೈಟೆಕ್​ ಕ್ರೀಡಾಂಗಣವನ್ನೂ ಉದ್ಘಾಟನೆ ಮಾಡಿದ್ದರು. ಇದೀಗ ಚನ್ನಪಟ್ಟಣ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಹೆಚ್​ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್​ ವಿರುದ್ಧ ಬೆಂಕಿಯುಗುಳಿದ್ದಾರೆ.

ಕೈ ಮುಗಿಯುತ್ತೇನೆ, ಕಾಂಗ್ರೆಸ್​​ನವರನ್ನ ನಂಬಬೇಡಿ: ಹೆಚ್​ಡಿಕೆ

ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಸಭೆ ಮಾಡಿದ ಹೆಚ್​ಡಿಕೆ, ದಲಿತಾಸ್ತ್ರವನ್ನೂ ಪ್ರಯೋಗಿಸಿದರು. ದಲಿತ ಸಮುದಾಯದವರೇ ಕಾಂಗ್ರೆಸ್​ನವರನ್ನು ನಂಬಬೇಡಿ, ಅವರು ಮೋಸಗಾರರು ಎಂದರು.

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಗುಟ್ಟು ಬಿಟ್ಟುಕೊಡದ ಹೆಚ್​ಡಿಕೆ

ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯನ್ನೇ ಕೊಟ್ಟಿದ್ದಾರೆ. ಎನ್​ಡಿಎ ಅಭ್ಯರ್ಥಿ ಇರುತ್ತಾರೆ. ನಿಖಿಲ್​ ಕುಮಾರಸ್ವಾಮಿನೋ? ಯಾರೋ? ಅಂತಾ ಹೇಳ್ತೀನಿ ಅಂದಿದ್ದಾರೆ.

ಇಷ್ಟೆಲ್ಲದರ ಮಧ್ಯೆ ನೂರಾರು ಜೆಡಿಎಸ್​ ಕಾರ್ಯಕರ್ತರು ಸೇರಿದ್ದ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಆಭ್ಯರ್ಥಿ ಮಾಡಲು ಒತ್ತಾಯಿಸಿದರು. ಚನ್ನಪಟ್ಟಣ ಉಪಚುನಾವಣೆಗೆ ಎನ್​​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡುವ ಉದ್ದೇಶ ಇದೆ: ಹೆಚ್​ಡಿ ಕುಮಾರಸ್ವಾಮಿ

ಸದ್ಯ ಚನ್ನಪಟ್ಟಣದಲ್ಲಿ ನಿಖಿಲ್​ರನ್ನು ಕಣಕ್ಕಿಳಿಸಿದರೆ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ನ್ನು ಕುಮಾರಸ್ವಾಮಿ ಹೇಗೆ ನಿಭಾಯಿಸುತ್ತಾರೆ ಎಂಬ ಪ್ರಶ್ನೆಯೂ ಮೂಡಿದೆ. ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು