ರಾಮನಗರ, ಅಕ್ಟೋಬರ್ 6: ಚನ್ನಪಟ್ಟಣ ಬೈಎಲೆಕ್ಷನ್ಗೆ ಕೌಂಟ್ಡೌನ್ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗಲು ಡಿಕೆ ಸಹೋದರರು, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೆಯುತ್ತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರುವ ಇಬ್ಬರು ಕೂಡ ನಾನಾ ತಂತ್ರಗಾರಿಕೆ ಮಾಡುತ್ತಿದ್ದಾರೆ. ಕಳೆದ ತಿಂಗಳಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಅಭಿವೃದ್ಧಿಗೆ 500 ಕೋಟಿ ರೂಪಾಯಿ ಯೋಚನೆಗೆ ಚಾಲನೆ ಕೊಟ್ಟಿದ್ದರು. ಹೈಟೆಕ್ ಕ್ರೀಡಾಂಗಣವನ್ನೂ ಉದ್ಘಾಟನೆ ಮಾಡಿದ್ದರು. ಇದೀಗ ಚನ್ನಪಟ್ಟಣ ಅಖಾಡಕ್ಕೆ ಎಂಟ್ರಿ ಕೊಟ್ಟಿರುವ ಹೆಚ್ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್ ವಿರುದ್ಧ ಬೆಂಕಿಯುಗುಳಿದ್ದಾರೆ.
ಚನ್ನಪಟ್ಟಣದ ಕೋಡಂಬಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರ ಜೊತೆ ಸಭೆ ಮಾಡಿದ ಹೆಚ್ಡಿಕೆ, ದಲಿತಾಸ್ತ್ರವನ್ನೂ ಪ್ರಯೋಗಿಸಿದರು. ದಲಿತ ಸಮುದಾಯದವರೇ ಕಾಂಗ್ರೆಸ್ನವರನ್ನು ನಂಬಬೇಡಿ, ಅವರು ಮೋಸಗಾರರು ಎಂದರು.
ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯನ್ನೇ ಕೊಟ್ಟಿದ್ದಾರೆ. ಎನ್ಡಿಎ ಅಭ್ಯರ್ಥಿ ಇರುತ್ತಾರೆ. ನಿಖಿಲ್ ಕುಮಾರಸ್ವಾಮಿನೋ? ಯಾರೋ? ಅಂತಾ ಹೇಳ್ತೀನಿ ಅಂದಿದ್ದಾರೆ.
ಇಷ್ಟೆಲ್ಲದರ ಮಧ್ಯೆ ನೂರಾರು ಜೆಡಿಎಸ್ ಕಾರ್ಯಕರ್ತರು ಸೇರಿದ್ದ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಆಭ್ಯರ್ಥಿ ಮಾಡಲು ಒತ್ತಾಯಿಸಿದರು. ಚನ್ನಪಟ್ಟಣ ಉಪಚುನಾವಣೆಗೆ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಂದು ಘೋಷಣೆ ಕೂಗಿದರು.
ಇದನ್ನೂ ಓದಿ: ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡುವ ಉದ್ದೇಶ ಇದೆ: ಹೆಚ್ಡಿ ಕುಮಾರಸ್ವಾಮಿ
ಸದ್ಯ ಚನ್ನಪಟ್ಟಣದಲ್ಲಿ ನಿಖಿಲ್ರನ್ನು ಕಣಕ್ಕಿಳಿಸಿದರೆ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ನ್ನು ಕುಮಾರಸ್ವಾಮಿ ಹೇಗೆ ನಿಭಾಯಿಸುತ್ತಾರೆ ಎಂಬ ಪ್ರಶ್ನೆಯೂ ಮೂಡಿದೆ. ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ